ದೇಶಾದ್ಯಂತ 32 ವಿಶ್ವವಿದ್ಯಾಲಯಗಳು ನಕಲಿ ಎಂದು ಘೋಷಿಸಿದ UGC: ಕರ್ನಾಟಕದ ವಿವಿ ಕೂಡ ಲಿಸ್ಟ್‌ನಲ್ಲಿದೆ
ನವದೆಹಲಿ: ಕಾಲೇಜು ಪ್ರವೇಶಾತಿ ಪ್ರಕ್ರಿಯೆಗಳು ಆರಂಭವಾಗುತ್ತಿರುವ ಬೆನ್ನಲ್ಲೇ ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಅಚ್ಚರಿಯ ವರದಿಯನ್ನು ಬಹಿರಂಗಪಡಿಸಿದೆ. ಫೆಬ್ರವರಿ 2026 ರ ಹೊಸ ಅಪ್ಡೇಟ್ ಪ್ರಕಾರ, ಯುಜಿಸಿ ದೇಶಾದ್ಯಂತ ಕಾರ್ಯನಿರ್ವಹಿಸುತ್ತಿರುವ ನಕಲಿ ವಿಶ್ವವಿದ್ಯಾಲಯಗಳ (Fake Universities) ಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾರತದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 32 ಶಿಕ್ಷಣ ಸಂಸ್ಥೆಗಳನ್ನು ಅನಧಿಕೃತ ಹಾಗೂ ನಕಲಿ ಎಂದು ಘೋಷಿಸಲಾಗಿದೆ. ಇದರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೇ ಅತಿ ಹೆಚ್ಚು ಅಂದರೆ 12 ನಕಲಿ ವಿವಿಗಳು ಪತ್ತೆಯಾಗಿವೆ.
ಕೇಂದ್ರ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಶಾಸನಬದ್ಧ ಸಂಸ್ಥೆಯಾಗಿರುವ ಯುಜಿಸಿ, ಈ ನಕಲಿ ವಿವಿಗಳ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. "ಈ ನಕಲಿ ಸಂಸ್ಥೆಗಳು ನೀಡುವ ಪದವಿಗಳಿಗೆ ಯಾವುದೇ ರೀತಿಯ ಕಾನೂನು ಮಾನ್ಯತೆ ಇರುವುದಿಲ್ಲ. ಈ ಪದವಿ ಪ್ರಮಾಣಪತ್ರಗಳನ್ನು ಬಳಸಿಕೊಂಡು ಉದ್ಯೋಗ ಪಡೆಯಲು, ಸರ್ಕಾರಿ ಸೇವೆಗಳಿಗೆ ಸೇರಲು ಅಥವಾ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಖಂಡಿತವಾಗಿಯೂ ಸಾಧ್ಯವಿಲ್ಲ" ಎಂದು ಯುಜಿಸಿ ಸ್ಪಷ್ಟಪಡಿಸಿದೆ.

ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು
ಯುಜಿಸಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ದೆಹಲಿಯ 12 ನಕಲಿ ಸಂಸ್ಥೆಗಳ ಹೆಸರುಗಳಿವೆ. ಕಮರ್ಷಿಯಲ್ ವಿಶ್ವವಿದ್ಯಾಲಯ (ದರಿಯಾಗಂಜ್), ಯುನೈಟೆಡ್ ನೇಷನ್ಸ್ ವಿಶ್ವವಿದ್ಯಾಲಯ, ವೊಕೇಶನಲ್ ವಿಶ್ವವಿದ್ಯಾಲಯ, ಎಡಿಆರ್-ಸೆಂಟ್ರಿಕ್ ಜ್ಯೂರಿಡಿಕಲ್ ವಿಶ್ವವಿದ್ಯಾಲಯ (ರಾಜೇಂದ್ರ ಪ್ಲೇಸ್), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್ ಎಂಪ್ಲಾಯ್ಮೆಂಟ್, ಆಧ್ಯಾತ್ಮಿಕ ವಿಶ್ವವಿದ್ಯಾಲಯ (ರೋಹಿಣಿ), ವರ್ಲ್ಡ್ ಪೀಸ್ ಆಫ್ ಯುನೈಟೆಡ್ ನೇಷನ್ಸ್ ಯೂನಿವರ್ಸಿಟಿ (ಪೀತಾಂಪುರ) ಮತ್ತು ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಇಂಜಿನಿಯರಿಂಗ್ ಇವು ದೆಹಲಿಯಲ್ಲಿರುವ ಪ್ರಮುಖ ನಕಲಿ ಸಂಸ್ಥೆಗಳಾಗಿವೆ.
ಉತ್ತರ ಪ್ರದೇಶದಲ್ಲಿ ಗಾಂಧಿ ಹಿಂದಿ ವಿದ್ಯಾಪೀಠ (ಪ್ರಯಾಗ್), ನೇತಾಜಿ ಸುಭಾಷ್ ಚಂದ್ರ ಬೋಸ್ ಓಪನ್ ವಿಶ್ವವಿದ್ಯಾಲಯ (ಅಲಿಗಢ್), ಭಾರತೀಯ ಶಿಕ್ಷಣ ಪರಿಷತ್ (ಲಕ್ನೋ) ಹಾಗೂ ಮಹಾಮಾಯಾ ತಾಂತ್ರಿಕ ವಿಶ್ವವಿದ್ಯಾಲಯ (ನೋಯ್ಡಾ) ನಕಲಿ ಎಂದು ಗುರುತಿಸಲ್ಪಟ್ಟಿವೆ.
ಈ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದ ರಾಜ್ಯಗಳು
ಈ ವರ್ಷದ ಈ ಪಟ್ಟಿಯಲ್ಲಿ ಹರಿಯಾಣ, ರಾಜಸ್ಥಾನ, ಜಾರ್ಖಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳು ಹೊಸದಾಗಿ ಸೇರ್ಪಡೆಯಾಗಿವೆ. ಹರಿಯಾಣದ ಫರಿದಾಬಾದ್‌ನಲ್ಲಿರುವ ಮ್ಯಾಜಿಕ್ ಅಂಡ್ ಆರ್ಟ್ ವಿಶ್ವವಿದ್ಯಾಲಯ, ರಾಜಸ್ಥಾನದ ಭಿವಾಡಿಯ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್, ಜಾರ್ಖಂಡ್‌ನ ರಾಂಚಿಯಲ್ಲಿರುವ ದಕ್ಷ ವಿಶ್ವವಿದ್ಯಾಲಯ (ವೊಕೇಶನಲ್ ಅಂಡ್ ಲೈಫ್ ಸ್ಕಿಲ್ ಎಜುಕೇಶನ್) ಮತ್ತು ಅರುಣಾಚಲ ಪ್ರದೇಶದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ನಕಲಿ ಎಂದು ಘೋಷಿಸಲಾಗಿದೆ.
ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿನ ನಕಲಿ ವಿವಿಗಳು
ಮಾರ್ಚ್ 2022 ರ ಹಿಂದಿನ ಅಧಿಸೂಚನೆಯಲ್ಲಿ ಯುಜಿಸಿ ಕರ್ನಾಟಕ ಮತ್ತು ಕೇರಳದ ಎರಡು ವಿಶ್ವವಿದ್ಯಾಲಯಗಳನ್ನು ನಕಲಿ ಎಂದು ಘೋಷಿಸಿತ್ತು. ಅವುಗಳು ಈಗಲೂ ಈ ಪಟ್ಟಿಯಲ್ಲಿ ಮುಂದುವರಿದಿವೆ. ಕರ್ನಾಟಕದ ಬೆಳಗಾವಿಯ ಗೋಕಾಕ್‌ನಲ್ಲಿರುವ 'ಬಡಗನವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಶನ್ ಸೊಸೈಟಿ' (Badaganvi Sarkar World Open University Education Society) ಮತ್ತು ಕೇರಳದ ಕಿಶನ್‌ಪಟ್ಟಂನಲ್ಲಿರುವ ಸೇಂಟ್ ಜಾನ್ಸ್ ವಿಶ್ವವಿದ್ಯಾಲಯ ನಕಲಿ ವಿವಿಗಳಾಗಿವೆ.
ಇದಲ್ಲದೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಹಾಗೂ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರಿಸರ್ಚ್, ಮಹಾರಾಷ್ಟ್ರದ ನಾಗ್ಪುರದ ರಾಜಾ ಅರೇಬಿಕ್ ವಿಶ್ವವಿದ್ಯಾಲಯ, ಆಂಧ್ರಪ್ರದೇಶದ ಕ್ರೈಸ್ಟ್ ನ್ಯೂ ಟೆಸ್ಟಮೆಂಟ್ ಡೀಮ್ಡ್ ವಿಶ್ವವಿದ್ಯಾಲಯ ಮತ್ತು ಬೈಬಲ್ ಓಪನ್ ಯೂನಿವರ್ಸಿಟಿ ಆಫ್ ಇಂಡಿಯಾ, ಪುದುಚೇರಿಯ ಶ್ರೀ ಬೋಧಿ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಕೂಡ ಪಟ್ಟಿಯಲ್ಲಿವೆ.
ವಿದ್ಯಾರ್ಥಿಗಳಿಗೆ ಯುಜಿಸಿ ಕಟ್ಟುನಿಟ್ಟಿನ ಸಲಹೆ
ಪ್ರಸ್ತುತ ದಿನಗಳಲ್ಲಿ ನಕಲಿ ಶಿಕ್ಷಣ ಸಂಸ್ಥೆಗಳು ಆಕರ್ಷಕ ವೆಬ್‌ಸೈಟ್‌ಗಳು ಹಾಗೂ ಭರ್ಜರಿ ಜಾಹೀರಾತುಗಳನ್ನು ನೀಡುವ ಮೂಲಕ ಮುಗ್ಧ ವಿದ್ಯಾರ್ಥಿಗಳನ್ನು ದಿಕ್ಕುತಪ್ಪಿಸುತ್ತಿವೆ. 1956 ರ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಕಾಯ್ದೆಯ ಪ್ರಕಾರ, ಸಂಸತ್ತು ಅಥವಾ ರಾಜ್ಯ ಶಾಸಕಾಂಗದ ಕಾಯ್ದೆಯ ಮೂಲಕ ಸ್ಥಾಪಿಸಲಾದ ವಿಶ್ವವಿದ್ಯಾಲಯಗಳು ಅಥವಾ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ "ಡೀಮ್ಡ್ ಟು ಬಿ ಯೂನಿವರ್ಸಿಟಿ" ಸ್ಥಾನಮಾನವನ್ನು ಪಡೆದ ಸಂಸ್ಥೆಗಳಿಗೆ ಮಾತ್ರ ಪದವಿಗಳನ್ನು ನೀಡುವ ಕಾನೂನುಬದ್ಧ ಅಧಿಕಾರವಿದೆ.
ಈ ನಕಲಿ ವಿವಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುಜಿಸಿ ಆಯಾ ರಾಜ್ಯ ಸರ್ಕಾರಗಳ ಉನ್ನತ ಶಿಕ್ಷಣ ಇಲಾಖೆಗಳಿಗೆ ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಒತ್ತಾಯಿಸಿದೆ. ವಿದ್ಯಾರ್ಥಿಗಳು ಯಾವುದೇ ಕಾಲೇಜಿಗೆ ಸೇರುವ ಮುನ್ನ ಯುಜಿಸಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಆ ಸಂಸ್ಥೆಗೆ ಮಾನ್ಯತೆ ಇದೆಯೇ ಎಂಬುದನ್ನು ಕಡ್ಡಾಯವಾಗಿ ಖಚಿತಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.
-
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications