UGC-NET Exam: ಜನವರಿ 15ರಂದು ನಡೆಯಬೇಕಿದ್ದ ಯುಜಿಸಿ-ನೆಟ್ ಪರೀಕ್ಷೆ ಮುಂದೂಡಿಕೆ

ಬುಧವಾರ ನಡೆಯಬೇಕಿದ್ದ ವಿಶ್ವವಿದ್ಯಾಲಯ ಅನುದಾನ ಆಯೋಗ-ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸೋಮವಾರ ತಿಳಿಸಿದೆ. ಬುಧವಾರ ದೇಶದ ಹಲವು ಭಾಗಗಳಲ್ಲಿ ಸಂಕ್ರಾಂತಿ ಹಬ್ಬದ ಆಚರಣೆ ಇರುವ ಹಿನ್ನಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಲಾಗಿತ್ತು.

ಭಾರಿ ವಿರೋಧದ ನಂತರ ಪರೀಕ್ಷೆಯನ್ನು ಮುಂದೂಡಲಾಗಿದ್ದು ಹೊಸ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಎನ್‌ಟಿಎ ತಿಳಿಸಿದೆ. ಬುಧವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಮಾತ್ರ ಮುಂದೂಡಲಾಗಿದ್ದು, ಗುರುವಾರ ನಡೆಯಬೇಕಿದ್ದ ಯುಜಿಸಿ-ನೆಟ್ ಪರೀಕ್ಷೆ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಹೇಳಿದೆ.

ugc net exam postponed national testing agency

ಜನವರಿ 15 ರಂದು ಪೊಂಗಲ್, ಮಕರ ಸಂಕ್ರಾಂತಿ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಇತರ ಹಬ್ಬಗಳ ಆಚರಣೆ ಇರುವ ಕಾರಣ ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡಲು ಎನ್‌ಟಿಎಗೆ ಪ್ರಸ್ತಾವನೆ ಬಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಪರೀಕ್ಷಾ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಜನವರಿ 15ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮಾತ್ರ ಮುಂದೂಡಲು ಎನ್‌ಟಿಎ ನಿರ್ಧರಿಸಿದೆ. ಹೊಸ ದಿನಾಂಕವನ್ನು ನಂತರ ತಿಳಿಸಲಾಗುತ್ತದೆ. ಜನವರಿ 16ರಂದು ಗುರುವಾರ ನಿಗದಿಯಾಗಿರುವ ಪರೀಕ್ಷೆ ಎಂದಿನಂತೆ ನಡೆಯಲಿದೆ ಎಂದು ಮಾಹಿತಿ ನೀಡಿದೆ.

ವಿರೋಧ ವ್ಯಕ್ತಪಡಿಸಿದ್ದ ಡಿಎಂಕೆ

ಸಂಕ್ರಾಂತಿಯನ್ನು ತಮಿಳುನಾಡಿನಲ್ಲಿ ಪೊಂಗಲ್ ಹೆಸರಿನಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ತಮಿಳು ಜನತೆಗೆ ಇದು ದೊಡ್ಡ ಹಬ್ಬವಾಗಿದ್ದು ಈ ಸಂದರ್ಭದಲ್ಲಿ ಯುಜಿಟಿ ನೆಟ್ ಪರೀಕ್ಷೆ ನಡೆಸುತ್ತಿರುವುದಕ್ಕೆ ಡಿಎಂಕೆ ಸಂಸದೆ ಕನಿಮೋಳಿ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದ ಅವರು, ಪೊಂಗಲ್ ದಿನದಂದೇ ಯುಜಿಸಿ-ನೆಟ್ ಪರೀಕ್ಷೆ ನಡೆಸುವ ಮೂಲಕ ತಮಿಳುನಾಡನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಪೊಂಗಲ್ ತಮಿಳು ಜನತೆಯ ಸಂಸ್ಕೃತಿ ಜೊತೆ ಆಳವಾದ ಸಂಪರ್ಕ ಹೊಂದಿದ್ದು ಆ ದಿನ ಯುಜಿಸಿ-ನೆಟ್ ಪರೀಕ್ಷೆಗಳನ್ನು ನಡೆಸುವುದು ಪೊಂಗಲ್ ಆಚರಣೆ ಮತ್ತು ತಮಿಳುನಾಡಿ ವಿದ್ಯಾರ್ಥಿಗಳ ಪರೀಕ್ಷೆಗಳ ಸಿದ್ಧತೆ ಮೇಲೆ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಇದು ತಮಿಳುನಾಡಿನ ಬಗ್ಗೆ ಕೇಂದ್ರ ಸರ್ಕಾರಕ್ಕೆ ಇರುವ ನಿರ್ಲಕ್ಷ್ಯ ಮಾತ್ರವಲ್ಲ, ನಮ್ಮ ಸಾಂಸ್ಕೃತಿಕ ಪರಂಪರೆಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ತಮಿಳುನಾಡಿನ ಜನರ ಬಗೆಗಿನ ನಿರ್ಲಕ್ಷ್ಯ ಧೋರಣೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+