UGC Regulations: 2026ರ ಯುಜಿಸಿ ನಿಯಮಾವಳಿ ಜಾರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ
UGC Regulations: ಸುಪ್ರೀಂ ಕೋರ್ಟ್ ವಿಶ್ವವಿದ್ಯಾಲಯ ಅನುದಾನ ಆಯೋಗದ (UGC) ನಿಯಮಗಳನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ನಿಯಮಾವಳಿಯನ್ನು ಜನವರಿ 23, 2026ರಂದು ಹೊರಡಿಸಲಾಗಿತ್ತು. ಇದನ್ನು ಹಲವು ಅರ್ಜಿದಾರರು ಪ್ರಶ್ನಿಸಿದ್ದರು. ನಿಯಮಾವಳಿ ಅನಿಯಂತ್ರಿತ, ಹೊರಗಿಡುವ, ತಾರತಮ್ಯವಾಗಿದೆ. ಜೊತೆಗೆ ಭಾರತದ ಸಂವಿಧಾನ ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗ ಕಾಯ್ದೆ, 1956ರ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.
ಈ ವಾದಗಳನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಅಂತಿಮ ತೀರ್ಪು ಹೊರಬರುವವರೆಗೆ ಈ ನಿಯಮಾವಳಿಯ ಜಾರಿಗೆ ತಡೆ ನೀಡುವಂತೆ ಮಹತ್ವದ ಆದೇಶ ಹೊರಡಿಸಿದೆ. ಅಧಿಸೂಚನೆಗೊಂಡಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ ವಿರೋಧಿ ನಿಯಮಗಳ ಜಾರಿಗೆ ಸುಪ್ರೀಂ ಕೋರ್ಟ್ ಜನವರಿ 29ರ ಗುರುವಾರ ತಾತ್ಕಾಲಿಕ ತಡೆ ನೀಡಿದೆ. ಈ ಮಾರ್ಗಸೂಚಿಗಳು ಸ್ಪಷ್ಟವಾಗಿಲ್ಲ, ದುರುಪಯೋಗಕ್ಕೆ ಒಳಗಾಗುವ ಸಾಧ್ಯತೆ ಇದೆ ಎಂಬ ಕಳವಳವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

ಈ ಕುರಿತು ಕೇಂದ್ರ ಸರ್ಕಾರ ಹಾಗೂ ಯುಜಿಸಿಗೆ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದ್ದು, ಮುಂದಿನ ಆದೇಶದವರೆಗೆ ಹೊಸ ನಿಯಮಗಳು ತಡೆಹಿಡಿಯಲ್ಪಟ್ಟಿರುತ್ತವೆ ಎಂದು ಸ್ಪಷ್ಟಪಡಿಸಿದೆ. ಈ ತಿಂಗಳ ಆರಂಭದಲ್ಲೇ ಯುಜಿಸಿ ಈ ಹೊಸ ನಿಯಮಗಳನ್ನು ಪ್ರಕಟಿಸಿದ್ದು, ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ಸಮಿತಿ ರಚನೆ ಕಡ್ಡಾಯಗೊಳಿಸಿತ್ತು. ತಾರತಮ್ಯದ ಸಂಬಂಧಿತ ದೂರುಗಳನ್ನು ಪರಿಶೀಲಿಸುವುದು ಹಾಗೂ ಸೇರ್ಪಡೆಯನ್ನು ಉತ್ತೇಜಿಸುವುದು ಈ ಸಮಿತಿಯ ಮುಖ್ಯ ಉದ್ದೇಶವಾಗಿದೆ.
ನಿಯಮಗಳ ಪ್ರಕಾರ ಸಮಿತಿಗಳು ಇತರ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಅಂಗವಿಕಲರು ಮತ್ತು ಮಹಿಳೆಯರ ಸದಸ್ಯರನ್ನು ಒಳಗೊಂಡಿರಬೇಕು ಎಂಬ ನಿಯಮವಿತ್ತು. ಈ ಕ್ರಮವು ಹಲವಾರು ರಾಜ್ಯಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆಗೆ ಕಾರಣವಾಗಿದೆ. ನಿಯಮಗಳನ್ನು ದುರುಪಯೋಗ ಪಡಿಸಿಕೊಳ್ಳಬಹುದು ಎನ್ನುವ ಆರೋಪಗಳು ಕೇಳಿಬಂದಿವೆ.
ಈ ನಿಯಮಗಳು ದುರುಪಯೋಗಕ್ಕೆ ಒಳಗಾಗಬಹುದು ಎಂದು ಆರೋಪಿಸಿ ಹಲವು ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಮಾರ್ಗಸೂಚಿಗಳು ಸಮಾಜವನ್ನು ವಿಭಜಿಸುವ ಸಾಧ್ಯತೆಯಿದೆ ಮತ್ತು ಗಂಭೀರ ಪರಿಣಾಮ ಬೀರಬಹುದು. ಇದೇ ಕಾರಣಕ್ಕೆ ಈ ವಿಷಯದಲ್ಲಿ ಹಸ್ತಕ್ಷೇಪ ಅಗತ್ಯ. 2012ರಲ್ಲಿ ಜಾರಿಯಲ್ಲಿದ್ದ ಮಾರ್ಗಸೂಚಿಗಳು ಸಲಹಾ ಸ್ವರೂಪದ್ದಾಗಿದ್ದು, ಅವು ಮುಂದುವರಿಯುತ್ತವೆ ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಲಯದ ಆದೇಶದಲ್ಲಿ ಏನಿದೆ?: ಸಾಮಾನ್ಯ ವರ್ಗಗಳ ವಿರುದ್ಧ ತಾರತಮ್ಯ ಉಂಟಾಗುವ ಸಾಧ್ಯತೆ ಇದೆ ಎಂಬ ಆಕ್ಷೇಪದ ಹಿನ್ನೆಲೆಯಲ್ಲಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿತು.
ನಿಯಮಾವಳಿಯನ್ನು ಪ್ರಖ್ಯಾತ ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ಸಮಿತಿಯ ಮೂಲಕ ಮರುಪರಿಶೀಲನೆ ಮಾಡಬೇಕು ಎಂದು ನ್ಯಾಯಾಲಯ ಚೂಚನೆ ನೀಡಿದೆ. ವಿಚಾರಣೆ ಸಮಯದಲ್ಲಿ, ನಿಯಮಗಳು ಸ್ಪಷ್ಟತೆ ಕೊರತೆಯಿಂದ ದುರುದ್ದೇಶಪೂರಿತ ಬಳಕೆಗೆ ದಾರಿ ಮಾಡಿಕೊಡುವ ಅಪಾಯವಿದೆ ಎಂದು ಪೀಠ ಉಲ್ಲೇಖ ಮಾಡಿದೆ.
ಈ ಸಂಬಂಧ ಮೃತ್ಯುಂಜಯ್ ತಿವಾರಿ, ವಕೀಲ ವಿನೀತ್ ಜಿಂದಾಲ್ ಮತ್ತು ರಾಹುಲ್ ದಿವಾನ್ ಸಲ್ಲಿಕೆ ಮಾಡಿದ್ದ ಮೂರು ರಿಟ್ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಅರ್ಜಿಗಳ ಕುರಿತು ಕೇಂದ್ರ ಸರ್ಕಾರ ಮತ್ತು ಯುಜಿಸಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮಾರ್ಚ್ 19ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚನೆ ನೀಡಿದೆ. ಅಂತಿಮ ವಿಚಾರಣೆ ನಡೆಯುವವರೆಗೆ ಯುಜಿಸಿ ಇಕ್ವಿಟಿ ನಿಯಮಗಳು-2026 ಜಾರಿಗೆ ತಡೆ ವಿಧಿಸಲಾಗಿದ್ದು, ಈ ಅವಧಿಯಲ್ಲಿ 2012ರ ಯುಜಿಸಿ ನಿಯಮಗಳು ಜಾರಿಯಲ್ಲಿರುತ್ತವೆ ಎಂದು ಸುಪ್ರೀಂ ಆದೇಶಿಸಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications