ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ ನೆರೆ ಪೀಡಿತರ ನೆರವಿಗೆ ತಿಂಗಳ ವೇತನ ನೀಡಿದ ರೇವಣ್ಣ, ಉಗ್ರಪ್ಪ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 13: ದಕ್ಷಿಣ ಕನ್ನಡ, ಕೇರಳ, ಕರಾವಳಿ ಭಾಗಗಳಲ್ಲಿ ಬಿಡುವಿಲ್ಲದೆ ಮಳೆ ಸುರಿಯುತ್ತಿದ್ದು ಅನಾಹುತ ಸೃಷ್ಟಿ ಮಾಡಿದೆ. ಕೇರಳದ ಪ್ರವಾಹ ಪೀಡಿತ ಸಂತ್ರಸ್ತರ ನೆರವಿಗೆ ಮುಂದಾಗಿರುವ ವಿಧಾನಪರಿಷತ್‌ ಸದಸ್ಯ ಉಗ್ರಪ್ಪ ಹಾಗೂ ಸಚಿವ ಎಚ್‌ಎಂ ರೇವಣ್ಣ ತಮ್ಮ ಒಂದು ತಿಂಗಳ ಸಂಬಳವನ್ನು ನೀಡಲು ಮುಂದಾಗಿದ್ದಾರೆ.

ಕೇಂದ್ರ ಸಚಿವರಾದ ಅನಂತ ಕುಮಾರ್, ಸದಾನಂದಗೌಡ ಹಾಗೂ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರನ್ನು ಪ್ರತಿನಿಧಿಸುತ್ತಿದ್ದರೂ ಏರ್‌ ಶೋ ಉತ್ತರ ಪ್ರದೇಶಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಆರೋಪಿಸಿದರು.

ಕೇರಳದ ಮಹಾಮಳೆಯ ನಡುವಲ್ಲೂ ಅಲ್ಲಲ್ಲಿ ಇಣುಕುವ ಮಾನವೀಯತೆಕೇರಳದ ಮಹಾಮಳೆಯ ನಡುವಲ್ಲೂ ಅಲ್ಲಲ್ಲಿ ಇಣುಕುವ ಮಾನವೀಯತೆ

ಮಾಜಿ ಸಚಿವ ಎಚ್.ಎಂ.ರೇವಣ್ಣ ಮಾತನಾಡಿ, ಯಾವುದೇ ಕಾರಣವಿಲ್ಲದೆ ಹಲವು ವರ್ಷಗಳಿಂದ ನಡೆಯುತ್ತಿದ್ದ ಏರ್‍ಶೋವನ್ನು ಲಕ್ನೋಗೆ ಸ್ಥಳಾಂತರಿಸುತ್ತಿದೆ ಎಂದು ಆರೋಪಿಸಿದರು. ರಾಜ್ಯದಿಂದ ಉತ್ತರ ಪ್ರದೇಶಕ್ಕೆ ಏರೋ ಶೋ ಸ್ಥಳಾಂತರಿಸುತ್ತಿರುವುದನ್ನು ಮತ್ತೆ ಬೆಂಗಳೂರಿಗೆ ವಾಪಸ್ ತರಲು ಕೇಂದ್ರದ ಮೇಲೆ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಒತ್ತಡ ಹೇರಬೇಕು. ಸಾಧ್ಯವಾಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

Ugrappa, HM Revanna donate one month salary for Kerala flood relief

ಕೇರಳದಲ್ಲಿ ವರುಣನ ರುದ್ರನರ್ತನ: ಮೃತರ ಸಂಖ್ಯೆ 29 ಕ್ಕೇರಿಕೆಕೇರಳದಲ್ಲಿ ವರುಣನ ರುದ್ರನರ್ತನ: ಮೃತರ ಸಂಖ್ಯೆ 29 ಕ್ಕೇರಿಕೆ

ರಾಜಕೀಯ ಲಾಭಕ್ಕಾಗಿ ವೈಮಾನಿಕ ಪ್ರದರ್ಶನವನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಏಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು. ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಬಗೆಹರಿಸುವುದಾಗಿ ಹೇಳಿದ್ದ ಕಳಸಾ ಬಂಡೂರಿ ನಾಲಾ ಜೋಡಣೆ ಇನ್ನೂ ಹಾಗೆ ಉಳಿದಿದೆ. ಯೋಜನೆ ಅನುಷ್ಠಾನಕ್ಕಾಗಿ ನಿರಂತರವಾಗಿ ಹೋರಾಟ ನಡೆಯುತ್ತಿದ್ದರೂ ಬಿಜೆಪಿ ನಾಯಕರು ಏನೂ ಹೇಳುತ್ತಿಲ್ಲ ಎಂದರು.

English summary
MLC VS Ugrappa and HM Revanna have donated their one month salary for Kerala flood relief. Ugrappa also said that the including allowances salary amount will be Rs.1 lakh from each.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X