ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈರಸ್ ರೂಪಾಂತರ: ಭಾರತಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭೇಟಿ ಅನುಮಾನ

|
Google Oneindia Kannada News

ನವದೆಹಲಿ, ಡಿಸೆಂಬರ್ 23: ಜನವರಿ 26ರಂದು ನಡೆಯುವ ಭಾರತದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಪಾಲ್ಗೊಳ್ಳುವಂತೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದರು. ಅದಕ್ಕೆ ಅವರು ಒಪ್ಪಿಕೊಂಡಿದ್ದರು. ಆದರೆ ಬ್ರಿಟನ್‌ನಲ್ಲಿ ಈಗ ಹೊಸ ರೂಪಾಂತರಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬೋರಿಸ್ ಜಾನ್ಸನ್ ಅವರು ಭಾರತಕ್ಕೆ ನೀಡುವುದು ಅನುಮಾನವಾಗಿದೆ.

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಳ್ಳಲು ಬೋರಿಸ್ ಜಾನ್ಸನ್ ಅವರು ಭಾರತಕ್ಕೆ ಭೇಟಿ ನೀಡದೆ ಇರಬಹುದು ಎಂದು ಬ್ರಿಟಿಷ್ ಮೆಡಿಕಲ್ ಅಸೋಸಿಯೇಷನ್‌ ಮಂಡಳಿಯ ಮುಖ್ಯಸ್ಥ ಡಾ. ಚಾಂಗ್ ನಾಗ್‌ಪಾಲ್ ತಿಳಿಸಿದ್ದಾರೆ.

ಗಣರಾಜ್ಯೋತ್ಸವಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅತಿಥಿಗಣರಾಜ್ಯೋತ್ಸವಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅತಿಥಿ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಬೋರಿಸ್ ಅವರು ಭಾರತಕ್ಕೆ ಪ್ರಯಾಣಿಸಬೇಕಿದೆ. ಆದರೆ ಲಂಡನ್‌ ಮತ್ತು ಇಂಗ್ಲೆಂಡ್‌ನ ಆಗ್ನೇಯ ಭಾಗಗಳಲ್ಲಿ ಹೊಸ ರೂಪಾಂತರ ಕೊರೊನಾ ವೈರಸ್ ಸೋಂಕು ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್‌ನಿಂದ ಆಗಮಿಸುವ ವಿಮಾನಗಳ ಮೇಲೆ ಭಾರತ ಸೇರಿದಂತೆ ಅನೇಕ ದೇಶಗಳು ನಿರ್ಬಂಧ ಹೇರಿವೆ. ಇದೇ ಸ್ಥಿತಿ ಮುಂದುವರಿದರೆ ಬೋರಿಸ್ ಜಾನ್ಸನ್ ಅವರ ಭಾರತ ಪ್ರವಾಸ ಅಧಿಕೃತವಾಗಿ ರದ್ದಾಗಲಿದೆ.

UK PM Boris Johnson May Not Attend Republic Day Parade Due To New COVID-19 Strain: Senior British Doctor

ಸೋಂಕಿನ ಮಟ್ಟ ಮತ್ತು ಹರಡುವಿಕೆ ಇದೇ ಮಟ್ಟದಲ್ಲಿ ಮುಂದುವರಿದರೆ ಬೋರಿಸ್ ಅವರ ಭಾರತ ಪ್ರವಾಸ ಸಾಧ್ಯವಾಗದೆ ಇರಬಹುದು. ಆದರೆ ಇಷ್ಟು ಬೇಗ ಬ್ರಿಟನ್ ಸರ್ಕಾರ ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದಿಲ್ಲ ಎಂದು ಬ್ರಿಟನ್‌ನ ಹಿರಿಯ ವೈದ್ಯರೊಬ್ಬರು ಹೇಳಿದ್ದಾರೆ.

ಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆ

English summary
UK PM Boris Johnson may not attend Republic Day parade due to new COVID-19 strain: Senior British Doctor.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X