Breaking; ಮೋದಿ ಭೇಟಿಯಾದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

ನವದೆಹಲಿ, ಏಪ್ರಿಲ್ 22; ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು. "ಭಾರತಕ್ಕೆ ಆತ್ಮೀಯ ಸ್ವಾಗತ ಕೋರಿದ್ದಕ್ಕೆ ಧನ್ಯವಾದಗಳು" ಎಂದು ಹೇಳಿದರು.

ಶುಕ್ರವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೋರಿಸ್ ಜಾನ್ಸನ್ ಸ್ವಾಗಿತಿಸಿದರು. ರಾಷ್ಟ್ರಪತಿ ಭವನದಲ್ಲಿ ಬ್ರಿಟನ್ ಪ್ರಧಾನಿಗಳಿಗೆ ರಕ್ಷಣಾ ಪಡೆಗಳಿಂದ ಗೌರವ ವಂದನೆ ಸಲ್ಲಿಸಲಾಯಿತು.

ಮಾಧ್ಯಮಗಳ ಜೊತೆ ಮಾತನಾಡಿದ ಬೋರಿಸ್ ಜಾನ್ಸನ್, "ಭಾರತಕ್ಕೆ ಆತ್ಮೀಯ ಸ್ವಾಗತ ಕೋರಿದ್ದಕ್ಕೆ ಧನ್ಯವಾದಗಳು. ಭಾರತ ಮತ್ತು ಯುಕೆ ನಡುವಿನ ಈಗಿರುವ ಬಿಗಿಯಾದ ಬಾಂಧವ್ಯ ಎಂದಿಗೂ ಬದಲಾಗುವುದಿಲ್ಲ" ಎಂದು ಹೇಳಿದರು.

Boris Johnson

ಎರಡು ದಿನಗಳ ಭಾರತ ಭೇಟಿಯಲ್ಲಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗುರುವಾರ ಅಹಮದಾಬಾದ್‌ಗೆ ಆಗಮಿಸಿದ್ದರು. ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದರು. ಉದ್ಯಮಿಗಳ ಜೊತೆ ಮಾತುಕತೆ ನಡೆಸಿದ್ದರು, ಅದಾನಿ ಗ್ರೂಪ್‌ ಮುಖ್ಯಸ್ಥ ಗೌತಮ್ ಅದಾನಿ ಭೇಟಿಯಾಗಿದ್ದರು.

ವಡೋದರದಲ್ಲಿರುವ ಜೆಸಿಬಿ ಘಟಕಕ್ಕೆ ಭೇಟಿ ನೀಡಿದ್ದರು. ಗಾಂಧಿ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ಬೆಳಗ್ಗೆ ಅವರು ದೆಹಲಿಗೆ ಆಗಮಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಬೋರಿಸ್ ಜಾನ್ಸನ್ ಇಂದು ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ. ರಕ್ಷಣೆ, ಆರ್ಥಿಕ ಸಹಭಾಗಿತ್ವದ ಕುರಿತು ಮಾತುಕತೆಗಳು ನಡೆಯಲಿವೆ.

ಪ್ರಧಾನಿ ಮೋದಿ ಭೇಟಿಗೂ ಮೊದಲೇ ಮಾತನಾಡಿದ್ದ ಜಾನ್ಸನ್ ಬೋರಿಸ್, "ಹವಾಮಾನ ಬದಲಾವಣೆಯಿಂದ ರಕ್ಷಣೆ ತನಕ. ಉಭಯ ದೇಶಗಳ ಪಾಲುದಾರಿಕೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ" ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+