ಬ್ರಿಟನ್ ಪ್ರಧಾನಿ ಬೋರಿಸ್ ಭಾರತ ಪ್ರವಾಸ ಮತ್ತೆ ಮುಂದೂಡಿಕೆ
ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಕೋವಿಡ್-19 ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದರಿಂದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ತಮ್ಮ ಪ್ರವಾಸವನ್ನು ಪುನಃ ಮುಂದೂಡಿದ್ದಾರೆ. ಭಾರತದಲ್ಲಿ ಎರಡನೆಯ ಅಲೆಯ ಕೋವಿಡ್ ವ್ಯಾಪಿಸಿದ್ದು, ಇದು ಮತ್ತಷ್ಟು ಮಾರಣಾಂತಿಕವಾಗಿದೆ. ಪ್ರತಿದಿನವೂ ಎರಡು ಲಕ್ಷಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ.
ಏಪ್ರಿಲ್ ಅಂತ್ಯದಲ್ಲಿ ಬೋರಿಸ್ ಜಾನ್ಸನ್ ಅವರು ಭಾರತಕ್ಕೆ ಪ್ರವಾಸ ಕೈಗೊಳ್ಳುವುದು ನಿಗದಿಯಾಗಿತ್ತು. ಆದರೆ ಭಾರತದಲ್ಲಿ ಕೋವಿಡ್ ಹೆಚ್ಚುತ್ತಿರುವ ಕಾರಣ ದಿನಾಂಕವನ್ನು ಮುಂದೂಡಲಾಗಿದೆ.
ಭಾರತದಲ್ಲಿ ಕೊರೊನಾ ವೈರಸ್ ಪಿಡುಗಿನ ಈಗಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎರಡೂ ದೇಶಗಳು ಸಮಾಲೋಚಿಸಿ ಈ ನಿರ್ಧಾರ ತೆಗೆದುಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆ ನೀಡಿದೆ.

'ಕೋವಿಡ್-19ರ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು, ಭಾರತಕ್ಕೆ ಮುಂದಿನ ವಾರ ಬ್ರಿಟನ್ ಪ್ರಧಾನಿಯ ಭೇಟಿಯನ್ನು ಪರಸ್ಪರ ಒಪ್ಪಂದದಂತೆ ಮುಂದೂಡಲಾಗಿದೆ' ಎಂದು ಎಂಇಎ ಹೇಳಿದೆ. ಆದರೆ ಉಭಯ ದೇಶಗಳು ಭಾರತ-ಬ್ರಿಟನ್ ಸಂಬಂಧದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಮುಂದಿನ ದಿನಗಳಲ್ಲಿ ಆನ್ಲೈನ್ ಸಭೆ ನಡೆಸಲಿವೆ ಎಂದು ಅದು ಹೇಳಿದೆ.
ಬೋರಿಸ್ ಜಾನ್ಸನ್ ಅವರು ಭಾರತದ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರವಾಸ ನಿಗದಿಯಾಗಿತ್ತು. ಸ್ವತಃ ಪ್ರಧಾನಿ ಮೋದಿ ಅವರು ಬೋರಿಸ್ ಅವರಿಗೆ ಆಹ್ವಾನ ನೀಡಿದ್ದರು. ಆದರೆ ಬ್ರಿಟನ್ನಲ್ಲಿ ರೂಪಾಂತರಿ ವೈರಸ್ ಸೋಂಕು ಹೆಚ್ಚಿದ್ದ ಕಾರಣ ಅವರು ಈ ಭೇಟಿಯನ್ನು ರದ್ದುಗೊಳಿಸಿದ್ದರು. ಈಗ ಮತ್ತೊಮ್ಮೆ ಪ್ರವಾಸ ಮುಂದೂಡಿಕೆಯಾಗಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications