• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದಲ್ಲಿ ನೂರರ ಅಂಚಿನಲ್ಲಿ ರೂಪಾಂತರ ಕೊರೊನಾ ಸೊಂಕಿತರ ಸಂಖ್ಯೆ

|

ನವದೆಹಲಿ, ಜನವರಿ 09: ಭಾರತದಲ್ಲಿ ಬ್ರಿಟನ್ ನ ಕೊರೊನಾ ರೂಪಾಂತರ ಸೋಂಕಿತರ ಸಂಖ್ಯೆ ನೂರರ ಗಡಿ ಮುಟ್ಟುತ್ತಿದ್ದು, ಇದುವರೆಗೂ 90 ಮಂದಿಗೆ ಸೋಂಕು ದೃಢವಾಗಿದೆ.

ಶುಕ್ರವಾರ ಮಧ್ಯಪ್ರದೇಶದಲ್ಲಿ ರೂಪಾಂತರ ಸೋಂಕಿನ ಮೊದಲ ಪ್ರಕರಣ ಪತ್ತೆಯಾಗಿದೆ. ಕಳೆದ ತಿಂಗಳು ಬ್ರಿಟನ್ ನಿಂದ ಇಂದೋರ್ ಗೆ ಮರಳಿದ್ದ ಇವರಲ್ಲಿ ಯಾವುದೇ ಲಕ್ಷಣವಿಲ್ಲದೇ ರೂಪಾಂತರ ಸೋಂಕು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಬ್ರಿಟನ್‌ನಿಂದ ಭಾರತಕ್ಕೆ ಬಂದಿಳಿದ ವಿಮಾನ: ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ

ಗುರುವಾರ ಮಹಾರಾಷ್ಟ್ರದಲ್ಲಿ ಮೂರು ಮಂದಿಯಲ್ಲಿ ರೂಪಾಂತರ ಸೋಂಕು ಕಂಡುಬಂದಿತ್ತು. ಆನಂತರ ರಾಜ್ಯದಲ್ಲಿ ರೂಪಾಂತರ ಸೋಂಕಿನ ಪ್ರಕರಣಗಳು ಹನ್ನೊಂದಕ್ಕೆ ಏರಿಕೆಯಾಗಿದ್ದವು. ಈ ಹನ್ನೊಂದು ಪ್ರಕರಣಗಳಲ್ಲೂ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ.

ಜನವರಿ 6ರವರೆಗೂ ಬ್ರಿಟನ್ ರೂಪಾಂತರ ಸೋಂಕಿನ ಪ್ರಕರಣಗಳು ದೇಶದಲ್ಲಿ 73ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿತ್ತು. ಈಗಾಗಲೇ ಡೆನ್ಮಾರ್ಕ್, ನೆದರ್ ಲ್ಯಾಂಡ್, ಆಸ್ಟ್ರೇಲಿಯಾ, ಇಟಲಿ, ಸ್ವೀಡನ್, ಫ್ರಾನ್ಸ್, ಸ್ಪೇನ್, ಸ್ವಿಡ್ಜರ್ಲೆಂಡ್, ಜರ್ಮನಿ, ಕೆನಡಾ, ಜಪಾನ್, ಲೆಬನಾನ್ ಹಾಗೂ ಸಿಂಗಪುರದಲ್ಲಿ ಬ್ರಿಟನ್ ಮೂಲದ ಹೊಸ ರೂಪಾಂತರ ಸೋಂಕು ಪತ್ತೆಯಾಗಿದೆ. ಭಾರತದಲ್ಲಿ ಈಗ ಒಟ್ಟು 90 ಪ್ರಕರಣಗಳು ದಾಖಲಾಗಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,222 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿವೆ. ಶುಕ್ರವಾರ 19,253 ಮಂದಿ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 228 ಸೋಂಕಿತರು ಸಾವಿಗೀಡಾಗಿದ್ದಾರೆ. ಇದರಿಂದ ದೇಶದಲ್ಲಿ ದಾಖಲಾದ ಒಟ್ಟು ಕೋವಿಡ್ ಸಂಬಂಧಿ ಸಾವಿನ ಸಂಖ್ಯೆ 1,50,798ಕ್ಕೆ ಏರಿಕೆಯಾಗಿದೆ. 2,24,190 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೂ ಒಟ್ಟು 1,04,31,639 ಪ್ರಕರಣಗಳು ದಾಖಲಾಗಿದ್ದು, 1,00,56,651 ಮಂದಿ ಬಿಡುಗಡೆಯಾಗಿದ್ದಾರೆ.

English summary
Number of people who have been infected with the new mutated strain of Covid-19 in India reached 90,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X