ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಕ್ರೇನ್‌ನಿಂದ ನಮ್ಮನ್ನು ಭಾರತಕ್ಕೆ ಮರಳಿ ಕರೆತನ್ನಿ: ವಿದ್ಯಾರ್ಥಿಗಳ ಮನವಿ

|
Google Oneindia Kannada News

ಕೀವ್‌, ಫೆಬ್ರವರಿ 24: ಉಕ್ರೇನ್‌ನಲ್ಲಿ ಯುದ್ಧಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕರೆ ನೀಡಿದ್ದು ನಿರೀಕ್ಷೆಯಂತೆಯೇ ಉಭಯ ದೇಶಗಳ ಮಧ್ಯೆ ಯುದ್ಧ ಆರಂಭವಾಗಿದೆ. ಈ ನಡುವೆ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿಯೇ ಬಾಕಿ ಆಗಿದ್ದಾರೆ. ತಮ್ಮನ್ನು ಮರಳಿ ಕರೆತರುವಂತೆ ಭಾರತ ಸರ್ಕಾರಕ್ಕೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ತಮ್ಮನ್ನು ಭಾರತಕ್ಕೆ ಮರಳಿ ಕರೆತರುವಂತೆ ಭಾರತೀಯ ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿರುವ ಉಕ್ರೇನ್‌ನ ಟೆರ್ನೋಪಿಲ್‌ನಲ್ಲಿ ಇರುವ ವಿದ್ಯಾರ್ಥಿನಿಯರು, ""ನಾವು ಅಧ್ಯಯನಕ್ಕಾಗಿ ಉಕ್ರೇನ್‌ಗೆ ಬಂದಿದ್ದೇವೆ. ನಮ್ಮನ್ನು ಸಾಧ್ಯವಾದಷ್ಟು ಬೇಗ ಭಾರತಕ್ಕೆ ಹಿಂತಿರುಗಿಸಲು ನಾವು ಸರ್ಕಾರ ಮತ್ತು ನಮ್ಮ ರಾಯಭಾರ ಕಚೇರಿಗಳಿಗೆ ವಿನಂತಿಸುತ್ತಿದ್ದೇವೆ," ಎಂದು ಇಬ್ಬರು ಭಾರತೀಯ ವಿದ್ಯಾರ್ಥಿಗಳು ಹೇಳಿದರು.

ಉಕ್ರೇನ್‌ನಲ್ಲಿ ಸಿಲುಕಿದ ದಾವಣಗೆರೆಯ ನಾಲ್ವರು ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿದ ದಾವಣಗೆರೆಯ ನಾಲ್ವರು ವಿದ್ಯಾರ್ಥಿಗಳು

ಇನ್ನು ಕೀವ್‌ನಲ್ಲಿರುವ ರಾಯಭಾರ ಕಚೇರಿಯ ಸಮೀಪವಿರುವ ಶಾಲೆಯಲ್ಲಿನ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸ್ಥಳವಾಕಾಶ ನೀಡಿ ರಕ್ಷಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಸಿಸಿಎಸ್ ಸಭೆಯಲ್ಲಿ ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಜೆಗಳ ಸುರಕ್ಷತೆ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷ್ ವಿ ಶ್ರಿಂಗ್ಲಾ ಹೇಳಿದರು.

Ukraine-Russia War: Indian Students Request the Govt to Bring Them Back to India

ಕಳೆದ ಕೆಲವು ದಿನಗಳಲ್ಲಿ 4000 ಭಾರತೀಯ ಪ್ರಜೆಗಳು ಈಗಾಗಲೇ ಉಕ್ರೇನ್ ತೊರೆದಿದ್ದಾರೆ. ದೆಹಲಿಯ ಎಂಇಎ ನಿಯಂತ್ರಣ ಕೊಠಡಿಗೆ 980 ಕರೆಗಳು ಮತ್ತು 850 ಇಮೇಲ್‌ಗಳು ಬಂದಿವೆ ಎಂದು ಕೂಡಾ ವಿದೇಶಾಂಗ ಕಾರ್ಯದರ್ಶಿ ಹರ್ಷ್ ವಿ ಶ್ರಿಂಗ್ಲಾ ತಿಳಿಸಿದ್ದಾರೆ. ಆನ್‌ಲೈನ್ ನೋಂದಣಿಯ ಆಧಾರದ ಮೇಲೆ 20,000 ಭಾರತೀಯ ಪ್ರಜೆಗಳು ಉಕ್ರೇಕ್‌ನಲ್ಲಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷ್ ವಿ ಶ್ರಿಂಗ್ಲಾ ತಿಳಿಸಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿದ ಶಿವಮೊಗ್ಗದ ಮೂವರು ವಿದ್ಯಾರ್ಥಿಗಳುಉಕ್ರೇನ್‌ನಲ್ಲಿ ಸಿಲುಕಿದ ಶಿವಮೊಗ್ಗದ ಮೂವರು ವಿದ್ಯಾರ್ಥಿಗಳು

ರಾಜ್ಯದ ಹಲವು ಜಿಲ್ಲೆಗಳ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಬಾಕಿ

Recommended Video

ಉಕ್ರೇನ್ ನಲ್ಲಿ ವೆಬ್ ಸೈಟ್ ಗಳು ಹ್ಯಾಕ್ ಸೃಷ್ಟಿಯಾಯ್ತು ಅಲ್ಲೋಲ ಕಲ್ಲೋಲ | Oneindia Kannada

ಮಂಗಳೂರು, ರಾಮನಗರ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಕೊಪ್ಪಳ, ಧಾರವಾಡ ಸೇರಿದಂತೆ ಉಕ್ರೇನ್‌ನಲ್ಲಿ ಯುದ್ಧ ಪೀಡಿತ ಪ್ರದೇಶದಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಕೂಡಾ ಸಿಲುಕಿದ್ದಾರೆ. ಮಂಗಳೂರಿನ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿರುವ ಮಾಹಿತಿ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಲಭ್ಯವಾಗಿದೆ. ಮಂಗಳೂರಿನ ದೇರಬೈಲ್ ನಿವಾಸಿ ಅನೈನಾ ಮತ್ತು ಪಡೀಲ್‌ನ ಶಾಂತಿನಗರ ನಿವಾಸಿ ಕ್ಲಾಟನ್ ಸಿಲುಕಿದ್ದಾರೆ. ದಾವಣಗೆರೆಯಿಂದ ಉಕ್ರೇನ್‌ಗೆ ವಿದ್ಯಾಭ್ಯಾಸಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ಸಿಲುಕಿ ಹಾಕಿಕೊಂಡಿದ್ದಾರೆ. ಉಕ್ರೇನ್‌ನಲ್ಲಿರುವ ಎಲ್ಲ ನಾಲ್ವರು ಸದ್ಯಕ್ಕೆ ಸುರಕ್ಷಿತವಾಗಿದ್ದಾರೆ. ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್ ದೇಶದಲ್ಲಿದ್ದು, ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳ ಪೋಷಕರು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಯಾಗಿ ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಹಿಂದಕ್ಕೆ ಕರೆಯಿಸಿಕೊಳ್ಳುವ ಕುರಿತು ಮನವಿ ಮಾಡಿದ್ದಾರೆ. (ಒನ್‌ಇಂಡಿಯಾ ಸುದ್ದಿ)

English summary
Ukraine-Russia War: Indian students request the govt to bring them back to India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X