ಇನ್ನು ಮೂರು ವರ್ಷ ಚುನಾವಣೆಗೆ ಸ್ಪರ್ಧಿಸೋಲ್ಲ: ಉಮಾ ಭಾರತಿ

Posted By:
Subscribe to Oneindia Kannada

ಭೋಪಾಲ್, ಫೆಬ್ರವರಿ 14: ಆರೋಗ್ಯ ಸಂಬಂಧಿ ಸಮಸ್ಯೆಯಿಂದಾಗಿ ನಾನು ಇನ್ನು ಮೂರು ವರ್ಷ ಯಾವುದೇ ಚುನಾವಣೆಗೆ ಸ್ಪರ್ಧಿಸೋಲ್ಲ ಎಂದು ಕೇಂದ್ರ ಸಚಿವೆ ಉಮಾ ಭಾರತಿ ಘೋಷಿಸಿದ್ದಾರೆ.

ಆದರೆ ರಾಜಕಿಯದಿಂದ ತಾನು ನಿವೃತ್ತಿ ಪಡೆಸುವುದಿಲ್ಲ, ಪಕ್ಷದ ಪರವಾಗಿ ಪ್ರಚಾರ ಕಾರ್ಯದಲ್ಲಿ ಸಕ್ರಿಯಳಾಗಿರುತ್ತೇನೆ ಎಂದು ಸಹ ಅವರು ಖಚಿತಪಡಿಸಿದ್ದಾರೆ.

ಈ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಬಳಿಯೂ ನಾನು ಚರ್ಚೆ ನಡೆಸಿದ್ದೇನೆ. ಅವರೂ ಒಪ್ಪಿದ್ದಾರೆ. ಆದರೆ 2019 ರವರೆಗೂ ಕೇಂದ್ರ ಸಚಿವ ಸ್ಥಾನದಲ್ಲಿ ಮುಂದುವರಿಯುವಂತೆ ತಿಳಿಸಿದ್ದಾರೆ ಎಂದು ಪತ್ರಕರ್ತರಿಗೆ ಉಮಾಭಾರತಿ ತಿಳಿಸಿದರು.

Uma Bharti won't contest polls for next 3 years

ನಾನು ಮಂಡಿನೋವಿನಿಂದ ಬಳಲುತ್ತಿದ್ದೇನೆ. ಅಕಸ್ಮಾತ್ ನಾನು ಇದೇ ರೀತಿ ರಾಜಕೀಯದಲ್ಲಿ ತೊಡಗಿಸಿಕೊಂಡರೆ ನನ್ನ ಆರೋಗ್ಯ ಸ್ಥಿತಿಯನ್ನು ಅಪಾಯಕ್ಕೆ ತಳ್ಳಬೇಕಾಗುತ್ತದೆ. ಆದ್ದರಿಂದಲೇ ಈ ನಿರ್ಧಾರ ಎಂದು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಚಿವೆ ಉಮಾಭಾರತಿ ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Union Minister and Bharatiya Janata Party (BJP) leader Uma Bharti on Tuesday announced that she will not be contesting election for next three years, citing health issues.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ