ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಗರ ಪ್ರದೇಶದ ನಿರುದ್ಯೋಗ ಪ್ರಮಾಣದಲ್ಲಿ ಭಾರಿ ಏರಿಕೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 13: ನಗರ ಪ್ರದೇಶದಲ್ಲಿ ನಿರುದ್ಯೋಗ ಪ್ರಮಾಣ ಆತಂಕಕಾರಿಯಾಗಿ ಹೆಚ್ಚಾಗಿದೆ ಎಂದು ಸಿಎಂಐಇ ವರದಿ ಹೇಳಿದೆ.

ಭಾರತ ಆರ್ಥಿಕತೆ ಮೇಲ್ವಿಚಾರಣೆ ಕೇಂದ್ರ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ) ಈ ಆಘಾತಕಾರಿ ವರದಿ ನೀಡಿದ್ದು, 2020 ರ ಜನವರಿಯಲ್ಲಿ ಭಾರತದ ನಗರ ಪ್ರದೇಶದಲ್ಲಿ ನಿರುದ್ಯೋಗ ಪ್ರಮಾಣ 9.7% ಕ್ಕೆ ಹೆಚ್ಚಾಗಿದೆ.

2019 ರ ಡಿಸೆಂಬರ್ ನಲ್ಲಿ ನಗರ ಪ್ರದೇಶದಲ್ಲಿನ ನಿರುದ್ಯೋಗ ಪ್ರಮಾಣ 9% ಇತ್ತು ಅದು ಕೇವಲ ಒಂದೇ ತಿಂಗಳ ಅವಧಿಯಲ್ಲಿ ೦.7% ರಷ್ಟು ಹೆಚ್ಚಾಗಿದೆ. ಗ್ರಾಮೀಣ ಭಾಗದ ನಿರುದ್ಯೋಗ ಪ್ರಮಾಣ 2020 ಜನವರಿ ತಿಂಗಳಲ್ಲಿ 6% ರಷ್ಟಿದೆ.

Unemployment Rate In Urban Rise Sharly: Report

ಆದರೆ ದೇಶದ ಒಟ್ಟು ನಿರುದ್ಯೋಗ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ ಎಂದು ಸಿಎಂಐಇ ವರದಿ ಹೇಳಿದೆ. 2019 ರ ಡಿಸೆಂಬರ್‌ನಲ್ಲಿ 7.60% ಇದ್ದ ಒಟ್ಟಾರೆ ನಿರುದ್ಯೋಗ ಪ್ರಮಾಣ, ಜನವರಿ ವೇಳೆಗೆ 7.16% ಆಗಿದೆ.

ಭಾರತದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳ ಆಗುತ್ತಿರುವ ಬಗ್ಗೆ ವಿಪಕ್ಷ ಕಾಂಗ್ರೆಸ್ ಸೇರಿದಂತೆ ಪ್ರಮುಖ ಆರ್ಥಿಕ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರು ಸಹ ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

English summary
CMIE report saying that unemployment in urban India is rising sharply. Urban area unemployment rate is now 9.70%.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X