ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಈದ್ಗಾ ಮಸೀದಿಗೆ ಹಾನಿ: ಪ್ರಕರಣ ದಾಖಲು
ಉತರ ಪ್ರದೇಶದ ಮುಜಫರ್‌ನಗರದ ಇಲ್ಲಿನ ಗ್ರಾಮವೊಂದರಲ್ಲಿ ಈದ್ಗಾ ಮಸೀದಿಗೆ ಹಾನಿ ಮಾಡಿದ ಆರೋಪದ ಮೇಲೆ ಕೆಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಚಾರ್ತವಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಥುರಾ ಗ್ರಾಮದಲ್ಲಿ ಈದ್ಗಾದ ಗುಮ್ಮಟಕ್ಕೆ ಹಾನಿಯಾಗಿರುವುದನ್ನು ಕೆಲವರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಗುಮ್ಮಟಕ್ಕೆ ಹಾನಿಯಾಗಿರುವುದನ್ನು ಕಂಡು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ಎಸ್ಪಿ ನಗರ ಸತ್ಯನಾರಾಯಣ ಪ್ರಜಾಪತ್ ತಿಳಿಸಿದ್ದಾರೆ. ಪೊಲೀಸ್ ತಂಡವು ಹಾನಿಗೊಳಗಾದ ಗುಮ್ಮಟವನ್ನು ಸರಿಪಡಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.












Click it and Unblock the Notifications