ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಬಜೆಟ್ ಮಂಡನೆ ದಿನಾಂಕ ಬಹಿರಂಗ

By Mahesh
|
Google Oneindia Kannada News

ನವದೆಹಲಿ, ಜೂ.18: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು 2014-15ನೇ ಸಾಲಿನ ಕೇಂದ್ರ ಬಜೆಟ್‌ನ್ನು ಜುಲೈ 11ಕ್ಕೆ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದೆ. ಜೇಟ್ಲಿ ಅವರಿಗೆ ವಿತ್ತ ಸಚಿವರಾಗಿ ಮಂಡಿಸುತ್ತಿರುವ ಮೊದಲ ಬಜೆಟ್ ಇದಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಹೊಸ ಸರ್ಕಾರದ ಮೊದಲ ಅಧಿವೇಶನ ಜುಲೈ 7 ರಿಂದ ನಡೆಯಲಿದೆ. ಜುಲೈ 8ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಲೋಕಸಭೆ ಮತ್ತು ರಾಜ್ಯಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಜುಲೈ 7ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 9 ಕ್ಕೆ ರೇಲ್ವೆ ಸಚಿವ ಡಿ.ವಿ.ಸದಾನಂದಗೌಡ ಅವರು ರೇಲ್ವೆ ಬಜೆಟ್‌ನ್ನು ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Union Budget 2014-15 likely to be presented on July 11

ಅರುಣ್ ಜೇಟ್ಲಿ ಅವರ ಮಧ್ಯಂತರ ಬಜೆಟ್ ಇದಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನೀತಿ ನಿರೂಪಣೆಯಲ್ಲಿ ಈ ಬಜೆಟ್ ಪ್ರಮುಖ ಪಾತ್ರ ವಹಿಸಲಿದೆ ಮತ್ತು ಆರ್ಥಿಕ ಉತ್ತೇಜನಕ್ಕೆ ಸ್ಪಷ್ಟ ನಿರ್ದೇಶನ ನೀಡುವ ಸಾಧ್ಯತೆ ಇದೆ.

ಜೇಟ್ಲಿ ಅವರು ಈಗಾಗಲೇ ಬಜೆಟ್ ಸಿದ್ಧತೆ ಕಾರ್ಯದಲ್ಲಿ ತೊಡಗಿಕೊಂಡಿದ್ದು, ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಚರ್ಚಿಸುತ್ತಿದ್ದಾರೆ. ಬೆಲೆ ಏರಿಕೆ ನಿಯಂತ್ರಣ, ಆಡಳಿತ ನಿರ್ವಹಣಾ ವೆಚ್ಚ ಕಡಿವಾಣ, ಸಬ್ಸಿಡಿಗಳ ಮೇಲೆ ನಿಯಂತ್ರಣ ಸೇರಿದಂತೆ ಜೇಟ್ಲಿ ಮುಂದೆ ಹಲವು ಸವಾಲುಗಳಿವೆ.

ರೈಲ್ವೆ ಬಜೆಟ್ : ಈ ಬಾರಿ ಹೆಚ್ಚಿನ ಇಂಟರ್ ಸಿಟಿ ರೈಲು, ಮಂಗಳೂರು ಸೇರಿದಂತೆ ಕನಿಷ್ಠ ಎರಡು ಪ್ರತ್ಯೇಕ ರೈಲ್ವೆ ವಿಭಾಗ, ಮೆಟ್ರೋ ರೈಲು ಸುಧಾರಣೆ, ಹೊಸ ಮಾರ್ಗಗಳು, ಸೂಪರ್ ಫಾಸ್ಟ್ ರೈಲುಗಳ ನಿರೀಕ್ಷೆ ಕನ್ನಡಿಗರಲ್ಲಿದೆ. ಕೋಲಾರದಲ್ಲಿ ರೈಲ್ವೆ ಕೋಚ್ ಫ್ಯಾಕ್ಟರಿ, ಬೆಂಗಳೂರಿನಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ ಸಿಕ್ಕಿದ್ದು ಬಿಟ್ಟರೆ ಹೆಚ್ಚಿನ ಉಪಯೋಗವಾಗಿರಲಿಲ್ಲ ಸದಾನಂದ ಗೌಡರು ಬೆಲೆ ಏರಿಕೆ ಮಾಡಲು ಮುಂದಾಗಿದ್ದು, ಮೋದಿ ಅವರ ಅಂಕಿತಕ್ಕಾಗಿ ಕಾಯುತ್ತಿದ್ದಾರೆ ಎಂಬ ಸುದ್ದಿಯಿದೆ. [ಕರ್ನಾಟಕ ಕೇಳಿದ್ದೇನು? ಸಿಕ್ಕಿದ್ದೇನು?]

English summary
Finance Minister Arun Jaitley is likely to present the Union Budget for 2014-2015 in Parliament on July 11. while the Rail Budget will be presented by DV Sadananda Gowda on July 09 as per sources.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X