ಅರುಣ್ ಜೇಟ್ಲಿ ಬಜೆಟ್ : ಯಾರು, ಏನು ಹೇಳಿದರು?
ಬೆಂಗಳೂರು, ಫೆ. 28 : ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಎನ್‌ಡಿಎ ಸರ್ಕಾರದ 2015-16ರ ಪೂರ್ಣಪ್ರಮಾಣದ ಬಜೆಟ್‌ಅನ್ನು ಲೋಕಸಭೆಯಲ್ಲಿ ಶನಿವಾರ ಮಂಡಿಸಿದ್ದಾರೆ. ಆದಾಯ ತೆರಿಗೆ ಮಿತಿಯನ್ನು ಏರಿಕೆ ಮಾಡಲಾಗಿಲ್ಲ.
ಕೇಂದ್ರ ಸರ್ಕಾರದ ಮಹತ್ವದ ಸ್ವಚ್ಛ ಭಾರತ, ಸ್ವಚ್ಛ ಗಂಗಾ, ಸುಕನ್ಯಾ ಸಮೃದ್ಧಿ ಯೋಜನೆಗಳಿಗೆ ನೀಡಲಾಗುವ ಯಾವುದೇ ಹಣಕ್ಕೆ ಪೂರ್ಣ ತೆರಿಗೆ ವಿನಾಯಿತಿ ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಭರ್ಜರಿ ಬಹುಮತದಿಂದ ಅಧಿಕಾರಕ್ಕೆ ಬಂದ ಬಳಿಕ ಮಂಡಿಸಿದ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ ಜೇಟ್ಲಿ, ಬಡವರ ಏಳಿಗೆ, ಸ್ವಚ್ಛ ಭಾರತ, ಮೇಕ್ ಇನ್ ಇಂಡಿಯಾ, ಆರೋಗ್ಯ-ಶಿಕ್ಷಣಕ್ಕೆ ಒತ್ತು ನೀಡಿದರು.[ಜೇಟ್ಲಿ ಬಜೆಟ್ ಭಾಷಣದ ಮುಖ್ಯಾಂಶಗಳು]
ವಿದೇಶದಲ್ಲಿ ಕಪ್ಪು ಹಣ ಇಡುವವರಿಗೆ ಕಠಿಣ ಎಚ್ಚರಿಕೆ ನೀಡಿದ ಅರುಣ್ ಜೇಟ್ಲಿ, ಬಜೆಟ್ ಅಧಿವೇಶನದಲ್ಲೇ ಇದಕ್ಕೆ ಕಠಿಣ ಕಾನೂನು ರೂಪಿಸುವುದಾಗಿ ಹೇಳಿದರು. ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ಬಗ್ಗೆ ವಿವಿಧ ಪಕ್ಷಗಳ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸಚಿವರು ಹಣ ದುಬ್ಬರ ಕಡಿಮೆ ಮಾಡಲು ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ ಎಂದು ಬಜೆಟ್ ಅನ್ನು ಹೊಗಳಿದ್ದಾರೆ.

ಪ್ರಾಯೋಗಿಕವಾದ ಬಜೆಟ್ ಅಂದ್ರು ಪಿಎಂ
ಈ ಬಜೆಟ್‌ಗೆ ಒಂದು ಗುರಿ ಇದೆ. ಇದು ಪ್ರಾಯೋಗಿಕವಾದ ಬಜೆಟ್ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ರೈತರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಯುವಕರು, ಬಡವರು, ಸಾಮಾನ್ಯ ವರ್ಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಕೇಂದ್ರ ಬಜೆಟ್ : ಯಾರು, ಏನು ಹೇಳಿದರು?
ಇದು ಐತಿಹಾಸಿಕ ಬಜೆಟ್ ಎಲ್ಲಾ ವರ್ಗದವರಿಗೂ ಆದ್ಯತೆ ನೀಡಲಾಗಿದೆ. ಮಧ್ಯಮ ವರ್ಗದವರು ಮತ್ತು ಬಡವರಿಗೆ ಸಹಕಾರಿಯಾಗುವ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡ್‌ಕರ್ ಅರುಣ್ ಜೇಟ್ಲಿ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಉದ್ಯಮಿಗಳ ಮನವೊಲಿಕೆ ಮಾಡಿದೆ
ಬಿಜೆಪಿ ಸರ್ಕಾರ ಉದ್ಯಮಿಗಳ ಮನವೊಲಿಕೆ ಕಾರ್ಯವನ್ನು ಮುಂದುವರೆಸಿದೆ. ಉದ್ಯಮಿಗಳು, ಕಾರ್ಪೊರೇಟ್ ವರ್ಗದವರಿಗೆ ಅನುಕೂಲ ಮಾಡಿಕೊಡುವ ಬಜೆಟ್ ಇದಾಗಿದೆ ಎಂದು ಅಂಬಿಕಾ ಸೋನಿ ಪ್ರತಿಕ್ರಿಯೆ ನೀಡಿದ್ದಾರೆ.

ಹಣ ದುಬ್ಬರ ಇಳಿಸಲು ಕ್ರಮ ಕೈಗೊಳ್ಳಲಾಗಿದೆ
ಇದೊಂದು ಉತ್ತಮವಾದ ಕೇಂದ್ರ ಬಜೆಟ್ ಆಗಿದೆ. ಹಣ ದುಬ್ಬರವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಬಂಡವಾಳ ಹೂಡಿಕೆಗೆ ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಪ್ರತಿಕ್ರಿಯೆ ನೀಡಿದ್ದಾರೆ.

ಸಾಮಾನ್ಯ ಜನರನ್ನು ಕಡೆಗಣಿಸಲಾಗಿದೆ
ಈ ಬಜೆಟ್‌ನಲ್ಲಿ ಸಾಮಾನ್ಯ ಜನರು ಮತ್ತು ಬಡವರನ್ನು ಕಡೆಗಣಿಸಲಾಗಿದೆ. ಇದು ಪ್ರಾಯೋಗಿಕವಾದ ಬಜೆಟ್ ಅಲ್ಲ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಪ್ರತಿಕ್ರಿಯೆ ನೀಡಿದ್ದಾರೆ.
|
ಇದು ಉದ್ಯಮಿಗಳ ಬಜೆಟ್ ಅಂದ್ರು ಖರ್ಗೆ
ಇದು ಉದ್ಯಮಿಗಳು ಮತ್ತು ಕಾರ್ಪೊರೇಟ್ ವಲಯದವರ ಬಜೆಟ್ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಶ್ರೀಮಂತರ ಹೊರೆ ಇಳಿಸಿದ್ದಾರೆ
ಅರುಣ್ ಜೇಟ್ಲಿ ಅವರಿಗೆ ಉತ್ತಮ ಬಜೆಟ್ ಮಂಡಿಸಲು ಅವಕಾಶವಿತ್ತು. ಸುವರ್ಣಾವಕಾಶವನ್ನು ಬಳಸಿಕೊಳ್ಳಲು ಅವರು ವಿಫಲರಾಗಿದ್ದಾರೆ. ಜನಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಹೊರಿಸಿದ್ದಾರೆ ಮತ್ತು ಶ್ರೀಮಂತರ ಹೊರೆಯನ್ನ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications