ಸ್ವಚ್ಛ ಭಾರತ ಯೋಜನೆಯಡಿ 2 ಲಕ್ಷ ಶೌಚಾಲಯ ನಿರ್ಮಾಣ
ಬೆಂಗಳೂರು, ಫೆಬ್ರವರಿ 01 : ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು 2018-19ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸ್ವಚ್ಛ ಭಾರತ ಯೋಜನೆಯಡಿ 2 ಕೋಟಿ ಶೌಚಾಲಯವನ್ನು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಗುರುವಾರ ಅರುಣ್ ಜೇಟ್ಲಿ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಸ್ವಚ್ಛ ಭಾರತ. ಈ ಯೋಜನೆಯನ್ನು ವಿಸ್ತರಣೆ ಮಾಡಿ, ದೇಶಾದ್ಯಂತ 2 ಕೋಟಿ ಶೌಚಾಲಯವನ್ನು ನಿರ್ಮಾಣ ಮಾಡುವ ಗುರಿ ಇದೆ ಎಂದು ಅರುಣ್ ಜೇಟ್ಲಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

'ಸ್ವಚ್ಛ ಭಾರತ ಯೋಜನೆಯಡಿ 6 ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ 2ಕೋಟಿ ಶೌಚಾಲಯಗಳನ್ನು ನಿರ್ಮಿಸುವ ಗುರಿ ಇದೆ' ಎಂದು ಜೇಟ್ಲಿ ಘೋಷಣೆ ಮಾಡಿದರು.
ಸ್ವಚ್ಛ ಭಾರತ ಅಭಿಯಾನ ಹೆಚ್ಚು ಪ್ರಚಲಿತಕ್ಕೆ ಬಂದಿದ್ದು2015-16ನೇ ಸಾಲಿನಲ್ಲಿ. ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ ಘಾಟ್‌ನಲ್ಲಿ ರಸ್ತೆಯೊಂದನ್ನು ಗುಡಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದರು.
ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಯೋಜನೆ ಜಾರಿಯಲ್ಲಿದೆ. ವಿದ್ಯಾರ್ಥಿಗಳಿಗಾಗಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗುತ್ತಿದೆ. ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡುವ ಸಂಕಲ್ಪ ಮಾಡಲಾಗಿದೆ.












Click it and Unblock the Notifications