ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ವಚ್ಛ ಭಾರತ ಯೋಜನೆಯಡಿ 2 ಲಕ್ಷ ಶೌಚಾಲಯ ನಿರ್ಮಾಣ

|
Google Oneindia Kannada News

ಬೆಂಗಳೂರು, ಫೆಬ್ರವರಿ 01 : ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು 2018-19ನೇ ಸಾಲಿನ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಸ್ವಚ್ಛ ಭಾರತ ಯೋಜನೆಯಡಿ 2 ಕೋಟಿ ಶೌಚಾಲಯವನ್ನು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಗುರುವಾರ ಅರುಣ್ ಜೇಟ್ಲಿ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಕೇಂದ್ರ ಆಯವ್ಯಯ 2018 LIVE : ಜೇಟ್ಲಿಯಿಂದ ಕೃಷಿ ಪ್ರಧಾನ ಬಜೆಟ್ಕೇಂದ್ರ ಆಯವ್ಯಯ 2018 LIVE : ಜೇಟ್ಲಿಯಿಂದ ಕೃಷಿ ಪ್ರಧಾನ ಬಜೆಟ್

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಸ್ವಚ್ಛ ಭಾರತ. ಈ ಯೋಜನೆಯನ್ನು ವಿಸ್ತರಣೆ ಮಾಡಿ, ದೇಶಾದ್ಯಂತ 2 ಕೋಟಿ ಶೌಚಾಲಯವನ್ನು ನಿರ್ಮಾಣ ಮಾಡುವ ಗುರಿ ಇದೆ ಎಂದು ಅರುಣ್ ಜೇಟ್ಲಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

Union Budget 2018 : 2 crore more toilets under Swachh Bharat Mission

'ಸ್ವಚ್ಛ ಭಾರತ ಯೋಜನೆಯಡಿ 6 ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ 2ಕೋಟಿ ಶೌಚಾಲಯಗಳನ್ನು ನಿರ್ಮಿಸುವ ಗುರಿ ಇದೆ' ಎಂದು ಜೇಟ್ಲಿ ಘೋಷಣೆ ಮಾಡಿದರು.

ಪ್ರಧಾನಿ ಸ್ವಚ್ಛತಾ ಅಭಿಯಾನಕ್ಕೆ ಕೈ ಜೋಡಿಸಿದ ಸ್ಯಾಕ್ಸೊಫೋನ್ ಮಾಂತ್ರಿಕಪ್ರಧಾನಿ ಸ್ವಚ್ಛತಾ ಅಭಿಯಾನಕ್ಕೆ ಕೈ ಜೋಡಿಸಿದ ಸ್ಯಾಕ್ಸೊಫೋನ್ ಮಾಂತ್ರಿಕ

ಸ್ವಚ್ಛ ಭಾರತ ಅಭಿಯಾನ ಹೆಚ್ಚು ಪ್ರಚಲಿತಕ್ಕೆ ಬಂದಿದ್ದು2015-16ನೇ ಸಾಲಿನಲ್ಲಿ. ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ ಘಾಟ್‌ನಲ್ಲಿ ರಸ್ತೆಯೊಂದನ್ನು ಗುಡಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದರು.

125 ಕೋಟಿ ಜನರಿಂದ ಮಾತ್ರ ಸ್ವಚ್ಛ ಭಾರತ ಸಾಧ್ಯ : ನರೇಂದ್ರ ಮೋದಿ125 ಕೋಟಿ ಜನರಿಂದ ಮಾತ್ರ ಸ್ವಚ್ಛ ಭಾರತ ಸಾಧ್ಯ : ನರೇಂದ್ರ ಮೋದಿ

ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಯೋಜನೆ ಜಾರಿಯಲ್ಲಿದೆ. ವಿದ್ಯಾರ್ಥಿಗಳಿಗಾಗಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗುತ್ತಿದೆ. ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡುವ ಸಂಕಲ್ಪ ಮಾಡಲಾಗಿದೆ.

English summary
Finance Minister Arun Jaitley on February 01 presented 2018 Union Budget. In a budget he announced that govt plans to construct 2 crore more toilets under Swachh Bharat Mission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X