ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್ : ಗ್ರಾಮ ಪಂಚಾಯಿತಿಗಳಲ್ಲೂ ಹೈ ಸ್ಪೀಡ್ ಇಂಟರ್‌ನೆಟ್!

|
Google Oneindia Kannada News

ಬೆಂಗಳೂರು, ಫೆಬ್ರವರಿ 01 : ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು 2018-19ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್‌ನಲ್ಲಿ ಗ್ರಾಮೀಣ ಪ್ರದೇಶಗಳಿಗೂ ಆದ್ಯತೆ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಗುರುವಾರ ಲೋಕಸಭೆಯಲ್ಲಿ ಅರುಣ್ ಜೇಟ್ಲಿ ಅವರು ಬಜೆಟ್ ಮಂಡಿಸುತ್ತಿದ್ದಾರೆ.

ಬಜೆಟ್ : ರೈಲ್ವೆ ನಿಲ್ದಾಣದಲ್ಲಿ ಎಸ್ಕಲೇಟರ್, ವೈ-ಫೈ, ಸಿಸಿಟಿವಿಬಜೆಟ್ : ರೈಲ್ವೆ ನಿಲ್ದಾಣದಲ್ಲಿ ಎಸ್ಕಲೇಟರ್, ವೈ-ಫೈ, ಸಿಸಿಟಿವಿ

ಕೇಂದ್ರ ಸರ್ಕಾರ ಡಿಜಿಟಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಆದ್ದರಿಂದ, ಗ್ರಾಮೀಣ ಪ್ರದೇಶಗಳಿಗೂ ಹೈ ಸ್ಪೀಡ್ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಲು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

Union Budget 2018 : 5 lakh Wi-Fi spots to be created in rural areas

1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಹೈಸ್ಪೀಡ್ ಇಂಟರ್‌ ನೆಟ್ ಸಂಪರ್ಕ ಕಲ್ಪಿಸಲಾಗುತ್ತದೆ. ಇದಕ್ಕಾಗಿ ಒಎಫ್‌ಸಿ ಕೇಬಲ್ ಅಳವಡಿಸುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಇಂಟರ್ ನೆಟ್ ಸಂಪರ್ಕ ಕಲ್ಪಿಸುವ ಜೊತೆಗೆ 5 ಲಕ್ಷ ವೈ-ಫೈ ಸ್ಪಾಟ್‌ಗಳನ್ನು ರಚನೆ ಮಾಡಲಾಗುತ್ತದೆ.

2018-19ನೇ ಸಾಲಿನಲ್ಲಿ ಡಿಜಿಟಲ್ ಇಂಡಿಯಾ ಅಭಿಯಾನಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಡಿಜಿಟಲ್ ಇಂಡಿಯಾ ಕಾರ್ಯಕ್ರಮಕ್ಕೆ 3037 ಕೋಟಿ ರೂ. ನಿಗದಿ ಮಾಡಲಾಗಿದೆ. ಐಐಟಿ ಚೆನ್ನೈನಲ್ಲಿ 5ಜಿ ತಂತ್ರಜ್ಞಾನ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ.

English summary
Finance Minister Arun Jaitley on February 01 presented 2018 Union Budget. In a budget He announced 5 lakh Wi-Fi spots to be created in rural areas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X