ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ 'ಏಕಲವ್ಯ ವಸತಿ ಶಾಲೆ'
ಬೆಂಗಳೂರು, ಫೆಬ್ರವರಿ 01 : 2018-19ನೇ ಸಾಲಿನ ಬಜೆಟ್ ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಂಡನೆ ಮಾಡುತ್ತಿದ್ದಾರೆ. ಬುಡಕಟ್ಟು ವಿದ್ಯಾರ್ಥಿಗಳಿಗಾಗಿ 'ಏಕಲವ್ಯ ವಸತಿ ಶಾಲೆ' ಆರಂಭಿಸುವುದಾಗಿ ಘೋಷಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇಂದು ಮಂಡನೆಯಾಗುತ್ತಿದೆ. ಗುರುವಾರ ಲೋಕಸಭೆಯಲ್ಲಿ ಅರುಣ್ ಜೇಟ್ಲಿ ಅವರು ಬಜೆಟ್ ಮಂಡಿಸುತ್ತಿದ್ದಾರೆ.
ಬಜೆಟ್‌ನಲ್ಲಿ ಶಿಕ್ಷಣದ ಬಗ್ಗೆ ಸರ್ಕಾರ ವಿಶೇಷ ಗಮನ ಹರಿಸಿದೆ. ಬುಡಕಟ್ಟು ವಿದ್ಯಾರ್ಥಿಗಳಿಗಾಗಿ 'ಏಕಲವ್ಯ ವಸತಿ' ಶಾಲೆಯನ್ನು ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾಭ್ಯಾಸ ನೀಡಲು ನವೋದಯ ಶಾಲೆಗಳನ್ನು ನಡೆಸುತ್ತಿದೆ. ದೇಶಾದ್ಯಂತ ಈ ಶಾಲೆಗಳಿದ್ದು, ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.
ಇಂದಿನ ಬಜೆಟ್‌ನಲ್ಲಿ ನವೋದಯ ಶಾಲೆ ಮಾದರಿಯಲ್ಲಿಯೇ 'ಏಕಲ್ಯ ವಸತಿ' ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಬುಡಕಟ್ಟು ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಜೊತೆಗೆ ಶಿಕ್ಷಣವನ್ನು ನೀಡುವುದು ಇದರ ಉದ್ದೇಶವಾಗಿದೆ.
2022ರ ವೇಳೆಗೆ ಶೇ 50ರಷ್ಟು ಪರಿಶಿಷ್ಟ ಜಾತಿ ಸಮುದಾಯದವರು ವಾಸಿಸುವ ಬ್ಲಾಕ್‌ಗಳಲ್ಲಿ, 20 ಸಾವಿರ ಬುಡಕಟ್ಟು ಜನರು ವಾಸಮಾಡುವ ಪ್ರದೇಶಗಳಲ್ಲಿ ಏಕಲವ್ಯ ವಸತಿ ಶಾಲೆಗಳು ಆರಂಭವಾಗಲಿವೆ.












Click it and Unblock the Notifications