ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್ : ರೈಲ್ವೆ ನಿಲ್ದಾಣದಲ್ಲಿ ಎಸ್ಕಲೇಟರ್, ವೈ-ಫೈ, ಸಿಸಿಟಿವಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 01 : ಹಣಕಾಸು ಸಚಿವ ಅರುಣ್ ಜೇಟ್ಲಿ 2018-19ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ರೈಲ್ವೆ ಬಜೆಟ್‌ ಅನ್ನು ಈಗ ಸಾಮಾನ್ಯ ಬಜೆಟ್‌ನಲ್ಲಿ ವಿಲೀನಗೊಳಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಗುರುವಾರ ಲೋಕಸಭೆಯಲ್ಲಿ ಅರುಣ್ ಜೇಟ್ಲಿ ಅವರು ಬಜೆಟ್ ಮಂಡಿಸುತ್ತಿದ್ದಾರೆ. ರೈಲ್ವೆ ಇಲಾಖೆಯಲ್ಲಿಯೂ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಕೇಂದ್ರ ಆಯವ್ಯಯ 2018 LIVE : ಜೇಟ್ಲಿಯಿಂದ ಕೃಷಿ ಪ್ರಧಾನ ಬಜೆಟ್ಕೇಂದ್ರ ಆಯವ್ಯಯ 2018 LIVE : ಜೇಟ್ಲಿಯಿಂದ ಕೃಷಿ ಪ್ರಧಾನ ಬಜೆಟ್

ಕೇಂದ್ರ ಸರ್ಕಾರ ಡಿಜಿಟಲ್ ವಹಿವಾಟಿಗೆ ಒತ್ತು ನೀಡುತ್ತಿದೆ. ಗ್ರಾಮಗಳಿಗೂ ಇಂಟರ್ ನೆಟ್ ಸಂಪರ್ಕ ಸಿಗಬೇಕು ಎಂದು ಪ್ರಯತ್ನ ನಡೆಸುತ್ತಿದೆ. ದೇಶದ ರೈಲ್ವೆ ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಿದೆ.

Union Budget 2018 : All railways stations to have escalators, Wi-Fi

25 ಸಾವಿರಕ್ಕಿಂತ ಹೆಚ್ಚು ಜನರು ಸಂಚಾರ ನಡೆಸುವ ದೇಶದ ಎಲ್ಲಾ ರೈಲ್ವೆ ನಿಲ್ದಾಣದಲ್ಲಿ ವೈ-ಫೈ ಸೌಲಭ್ಯ ಕಲ್ಪಿಸಲು ಮತ್ತು ಸಿಸಿಟಿವಿ ಅಳವಡಿಕೆ ಮಾಡುವುದಾಗಿ ಅರುಣ್ ಜೇಟ್ಲಿ ಘೋಷಣೆ ಮಾಡಿದ್ದಾರೆ.

ಅಲ್ಲದೇ 25 ಸಾವಿರಕ್ಕಿಂತ ಹೆಚ್ಚು ಜನರು ಸಂಚರಿಸುವ ಎಲ್ಲಾ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಎಸ್ಕಲೇಟರ್ ನಿರ್ಮಾಣ ಮಾಡಲಾಗುತ್ತದೆ. ರೈಲುಗಳಲ್ಲಿಯೂ ಸಿಸಿಟಿವಿ ಮತ್ತು ವೈ-ಫೈ ಸೇವೆ ಒದಗಿಸುವ ಕುರಿತು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

English summary
Finance Minister Arun Jaitley on February 01 presented 2018 Union Budget. In a budget he announced that All railways stations with more than 25,000 footfall to have escalators and trains to have Wi-Fi and CCTV facility.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X