ಬಜೆಟ್ 2021ರಲ್ಲಿ ಬಡವರಿಗೆ ವಂಚನೆ: ನಿರ್ಮಲಾ ಸೀತಾರಾಮನ್ ವಿರುದ್ಧ ಚಿದಂಬರಂ ವಾಗ್ದಾಳಿ
ನವದೆಹಲಿ, ಫೆಬ್ರವರಿ 1: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಡವರು ಮತ್ತು ವಲಸಿಗರನ್ನು ವಂಚಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಟೀಕಿಸಿದ್ದಾರೆ.
ಬಜೆಟ್ ಮಂಡನೆಯಾದ ಬಳಿಕ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿ. ಚಿದಂಬರಂ, ಹಿಂದೆಂದಿಗಿಂತಲೂ ಈ ಬಾರಿಯ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಚುನಾವಣೆ ನಡೆಯಲಿರುವ ರಾಜ್ಯಗಳ ಮೇಲೆ ಮಾತ್ರ ಅವರು ಗಮನ ಹರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಭಾಷಣಗಳನ್ನು ಕೇಳುತ್ತಿದ್ದವರನ್ನು ನಿರ್ಮಲಾ ವಂಚಿಸಿದ್ದಾರೆ. ಮುಖ್ಯವಾಗಿ ಸಂಸದರಿಗೆ ನಿರ್ಮಲಾ ಅವರು ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಭಾರಿ ಸಂಖ್ಯೆಯ ಉತ್ಪನ್ನಗಳ ಮೇಲೆ ಸೆಸ್ ವಿಧಿಸುತ್ತಾರೆ ಎಂಬ ಕಲ್ಪನೆಯೂ ಇರಲಿಲ್ಲ. ಪೆಟ್ರೋಲ್ ಮೇಲೆ ಲೀಟರ್‌ಗೆ 2.50 ರೂ ಮತ್ತು ಡೀಸೆಲ್ ಮೇಲೆ ಪ್ರತಿ ಲೀಟರ್‌ಗೆ 4 ರೂ. ವಿಧಿಸಲಾಗುತ್ತಿದೆ. ಇದು ರೈತರು ಸೇರಿದಂತೆ ಸಾಮಾನ್ಯ ನಾಗರಿಕರಿಗೆ ದೊಡ್ಡ ಹೊಡೆತ ನೀಡಲಿದೆ ಎಂದು ಆರೋಪಿಸಿದ್ದಾರೆ.
ಈ ಬಜೆಟ್‌ಗೆ ಮನಸು ಇರಬಹುದಷ್ಟೇ ಆದರೆ ಅದರ ಹಿಂದೆ ಖಂಡಿತವಾಗಿಯೂ ಹೃದಯವಿಲ್ಲ ಎಂದು ಪಿ. ಚಿದಂಬರಂ ಟೀಕಿಸಿದ್ದಾರೆ. ಮುಂದೆ ಓದಿ.

ಸಚಿವರಿಗೆ ಪರಿಸ್ಥಿತಿ ಅರಿವಿಲ್ಲ
ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳ ಪರಿಸ್ಥಿತಿಯ ಬಗ್ಗೆ ಹಣಕಾಸು ಸಚಿವರಿಗೆ ಅರಿವಿಲ್ಲ ಎನಿಸುತ್ತಿದೆ. ವಿತ್ತೀಯ ಸನ್ನಿವೇಶವು ಬಹುದೊಡ್ಡ ಗೊಂದಲದಲ್ಲಿದೆ ಎಂಬುದನ್ನು ಸಂಖ್ಯೆಗಳೂ ತೋರಿಸುತ್ತಿವೆ ಎಂದು ಟೀಕಿಸಿದ್ದಾರೆ.

ರೈತರ ಉಲ್ಲೇಖ ಹತ್ತೇ ಸಲ
ಸರ್ಕಾರವು ರಕ್ಷಣಾ ವೆಚ್ಚ ಮತ್ತು ಆರೋಗ್ಯ ಕ್ಷೇತ್ರದ ವೆಚ್ಚವನ್ನು ಸರ್ಕಾರ ಸಂಪೂರ್ಣವಾಗಿ ಜನತೆಯ ಮೇಲೆ ಹೊರಿಸಿದೆ. ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಪ್ರಧಾನಿಯ ಹೆಸರನ್ನು 14 ಸಲ ಪ್ರಸ್ತಾಪಿಸಿದರು. ಆದರೆ ರೈತರನ್ನ ಹತ್ತು ಬಾರಿ ಮಾತ್ರ ಉಲ್ಲೇಖಿಸಿದರು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಕ್ಷಣೆಯ ಬಗ್ಗೆ ಉಲ್ಲೇಖವಿಲ್ಲ
ಚೀನೀಯರು ಭಾರತದ ನೆಲದಿಂದ ಜಾಗ ತೆರವು ಮಾಡಿದ್ದಾರೇನೋ ಎಂಬಂತೆ ರಕ್ಷಣೆಯ ಬಗ್ಗೆ ನಿರ್ಮಲಾ ಪ್ರಸ್ತಾಪವನ್ನೇ ಮಾಡಲಿಲ್ಲ. 2021-22ನೇ ಸಾಲಿನ ಅವರು ರಕ್ಷಣಾ ವೆಚ್ಚವನ್ನು ಕೂಡ ಉಲ್ಲೇಖಿಸಿಲ್ಲ. ತೆರಿಗೆ ವಿನಾಯಿತಿಯು ತೆರಿಗೆಪಾವತಿಸುವ ದುಡಿಯುವ ವರ್ಗ ಮತ್ತು ತೆರಿಗೆ ಪಾವತಿಸುವ ಮಧ್ಯಮ ವರ್ಗಕ್ಕೆ ಯಾವುದೇ ನೆರವು ನೀಡುವುದಿಲ್ಲ ಎಂದು ಆರೋಪಿಸಿದ್ದಾರೆ.

ಜನಸಾಮಾನ್ಯರ ಮೇಲೆ ಅನುಕಂಪ
ಹಣಕಾಸೇತರ ಮಸೂದೆಗಳಲ್ಲಿ ತಿದ್ದುಪಡಿಗಳನ್ನು ಮಾಡಲು ವಿತ್ತ ಮಸೂದೆಯನ್ನು ಸರ್ಕಾರ ಬಳಸುವುದಕ್ಕೆ ಚಿದಂಬರಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯಸಭೆಯು ತನ್ನ ಹಕ್ಕು ಚಲಾಯಿಸುವುದನ್ನು ಇದು ನಿರಾಕರಿಸಲಿದೆ ಎಂದು ಹೇಳಿದ್ದಾರೆ. ಮೂಲಸೌಕರ್ಯದ ಮೇಲೆ ವ್ಯಯಿಸುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಎಂಟು ತ್ರೈಮಾಸಿಕ ಅವಧಿಗಳಲ್ಲಿನ ಆರ್ಥಿಕ ನಿಧಾನಗತಿ ಮತ್ತು ನಾಲ್ಕು ಅವಧಿಯ ಸಾಂಕ್ರಾಮಿಕ ಸಂಕಷ್ಟದ ಸನ್ನಿವೇಶ ನೋಡಿದಾಗ ಬಡವರು, ದುಡಿಯುವ ವರ್ಗ, ವಲಸಿಗರು ಮತ್ತು ಕೃಷಿ ಕಾರ್ಮಿಕರಿಗೆ ಇದೇ ರೀತಿಯ ಅನುಕಂಪ ನೀಡಬಹುದಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications