ಬಜೆಟ್ 2021: ಸರ್ಕಾರದ ಘೋಷಣೆಯಿಂದ ಖುಷಿಯಾದ ಸೆನ್ಸೆಕ್ಸ್, ನಿಫ್ಟಿ!
ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಕೇಂದ್ರ ಬಜೆಟ್ ಮಂಡಿಸಿ ಮುಗಿಯುತ್ತಿದ್ದಂತೆಯೇ ಷೇರುಪೇಟೆಯಲ್ಲಿ ಸಂತಸ ಮೂಡಿದೆ. ಬಜೆಟ್ ಮಂಡನೆಯಲ್ಲಿ ಯಾವ ಕ್ಷೇತ್ರಗಳಿಗೆ ಸರ್ಕಾರ ಮಹತ್ವ ನೀಡಲಿದೆ ಎಂಬ ಕಣ್ಣಿಟ್ಟಿದ್ದ ಷೇರುಪೇಟೆ ಜಿಗಿತ ಕಂಡಿದೆ.
ಬಜೆಟ್ ಮಂಡನೆ ಮುಕ್ತಾಯವಾಗುತ್ತಿದ್ದಂತೆಯೇ ಸೆನ್ಸೆಕ್ಸ್ ಮತ್ತು ನಿಫ್ಟಿಗಳು ಸುಮಾರು ಶೇ 3.5ರಷ್ಟು ಹೆಚ್ಚಳವಾಗಿದೆ. ಸೆನ್ಸೆಕ್ಸ್ 1,601.66 ಅಂಕಗಳಷ್ಟು ಏರಿಕೆಯಾಗಿದೆ. ನಿಫ್ಟಿ 14,000 ಅಂಕಗಳಷ್ಟು ಹೆಚ್ಚಳ ಕಂಡಿದೆ.
ನಿರ್ಮಲಾ ಸೀತಾರಾಮನ್ ಅವರು ಘೋಷಣೆಗಳನ್ನು ಮಾಡಿದ ಬಳಿಕ ಭಾರತದ ಎನ್ಎಸ್ಇ ನಿಫ್ಟಿ 50 ಮತ್ತು ಎಸ್ & ಪಿ ಬಿಎಸ್ಇ ಸೆನ್ಸೆಕ್ಸ್ ಸೂಚ್ಯಂಕಗಳು ಸುಮಾರು ಶೇ 3.5ರವರೆಗೆ ಚೇತರಿಕೆ ಕಂಡವು. ಭಾರತದ ರೂಪಾಯ ಮೌಲ್ಯವು ಡಾಲರ್ ಎದುರು ಕೊಂಚ ಪ್ರಬಲವಾಗಿದ್ದು, 72.86 ರೂಪಾಯಿಗೆ ತಲುಪಿದೆ. 10 ವರ್ಷಗಳ ಬಾಂಡ್ ಯೀಲ್ಡ್ ಶೇ 5.89ಕ್ಕೆ ಕುಸಿದಿದೆ.

ಬಜೆಟ್ ಘೋಷನೆಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕತೆಯ ಚೇತರಿಕೆಯ ಉದ್ದೇಶದಿಂದ ಹೂಡಿಕೆಗೆ ಮತ್ತು ಉದ್ಯಮ ವಲಯಕ್ಕೆ ಉತ್ತೇಜನ ನೀಡಿದ್ದು, ಸಮತೋಲನದ ಪ್ರಯತ್ನ ಮಾಡಿರುವುದು ಹೂಡಿಕೆದಾರರಲ್ಲಿ ಸಂತಸ ಮೂಡಿಸಿದೆ.
ಇಂಡಸ್ಲ್ಯಾಂಡ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಸ್ಬಿಐ ಮತ್ತು ಎಚ್ಡಿಎಫ್ಸಿ ಬ್ಯಾಂಕ್ನ ಷೇರುಗಳು ಸೆನ್ಸೆಕ್ಸ್ನಲ್ಲಿ ಪ್ರಮುಖವಾಗಿ ಏರಿಕೆಯಾಗಿವೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications