ಬಜೆಟ್ ಅಧಿವೇಶನದ ಕುರಿತು ಚರ್ಚಿಸಲು ಜ.31 ರಂದು ಸರ್ವಪಕ್ಷ ಸಭೆ ಕರೆದ ಸರ್ಕಾರ
ನವದೆಹಲಿ, ಜನವರಿ 26: ಭಾರತದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2022 ರಂದು ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಅನ್ನು ಘೋಷಿಸಲಿದ್ದಾರೆ. ಇದಕ್ಕೂ ಮುನ್ನ ಬಜೆಟ್ ಅಧಿವೇಶನದ ಬಗ್ಗೆ ಚರ್ಚಿಸಲು ಸರ್ಕಾರ ಜನವರಿ 31 ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ.
ಬಜೆಟ್ ಅಧಿವೇಶನದ ಸಮಸ್ಯೆಗಳು ಮತ್ತು ಶಾಸಕಾಂಗ ವ್ಯವಹಾರಗಳ ಬಗ್ಗೆ ಚರ್ಚಿಸಲು ಸರ್ಕಾರ ಜನವರಿ 31 ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ. ಈ ಸರ್ವಪಕ್ಷ ಸಭೆಯು ವರ್ಚುವಲ್ ರೂಪದಲ್ಲಿ ನಡೆಯಲಿದೆ. ಅದೇ ದಿನ ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿಗಳ ಭಾಷಣದೊಂದಿಗೆ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ನಂತರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುತ್ತದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಸಮಸ್ಯೆಗಳು ಮತ್ತು ಶಾಸಕಾಂಗ ವ್ಯವಹಾರಗಳ ಬಗ್ಗೆ ಚರ್ಚಿಸಲು ಸಭೆಗೆ ಆಹ್ವಾನಿಸಲಾಗಿದೆ. ಸಭೆಯು ವರ್ಚುವಲ್ ರೂಪದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಸರ್ವಪಕ್ಷಗಳ ನಾಯಕರ ಸಭೆಯಲ್ಲಿ ಸರ್ಕಾರವು ಅಧಿವೇಶನದಲ್ಲಿ ಚರ್ಚಿಸಲು ಬಯಸುವ ವಿಷಯಗಳ ಬಗ್ಗೆ ಪ್ರತಿಪಕ್ಷಗಳೊಂದಿಗೆ ಚರ್ಚಿಸಲಿದೆ. ಅಧಿವೇಶನದಲ್ಲಿ ಅವರು ಅನುಸರಿಸಬಹುದಾದ ಅಜೆಂಡಾ ಮತ್ತು ಶಾಸಕಾಂಗ ವ್ಯವಹಾರವನ್ನು ಸರ್ಕಾರ ಚರ್ಚಿಸುತ್ತದೆ.
ಟ್ವೀಟ್ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಬುಧವಾರ ಟ್ವೀಟ್ ಮಾಡಿದ್ದಾರೆ. "ಜನವರಿ 31 ರಂದು ಬಜೆಟ್ ಅಧಿವೇಶನದ ಮೊದಲ ಭಾಗವು ಪ್ರಾರಂಭವಾಗುತ್ತದೆ. ಗೌರವಾನ್ವಿತ ರಾಷ್ಟ್ರಪತಿಗಳು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುತ್ತಾರೆ. ಫೆಬ್ರವರಿ 1 ರಂದು, ಮಾನ್ಯ ಹಣಕಾಸು ಸಚಿವೆ ನಿರ್ಮಲ್ ಸೀತಾರಾಮನ್ ಜಿ ಅವರು ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಕೋವಿಡ್ ಸುರಕ್ಷತಾ ಮಾರ್ಗಸೂಚಿಯನ್ನು ಪಾಳಿಸುವ ನಿಟ್ಟಿನಲ್ಲಿ ಉಭಯ ಸದನಗಳು ಪಾಳಿಯಲ್ಲಿ ಕಾರ್ಯ ನಿರ್ವಹಣೆ ಮಾಡಲಿದೆ," ಎಂದು ತಿಳಿಸಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನ ಎರಡು ಭಾಗಗಳಲ್ಲಿ ನಡೆಯಲಿದೆ. ಮೊದಲ ಭಾಗ ಜನವರಿ 31 ರಿಂದ ಫೆಬ್ರವರಿ 11 ರವರೆಗೆ ಮತ್ತು ಎರಡನೇ ಭಾಗ ಮಾರ್ಚ್ 14 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ. ಸರ್ವಪಕ್ಷ ಸಭೆಯ ನಂತರ ಬಿಜೆಪಿ ಸಂಸದೀಯ ಕಾರ್ಯಕಾರಿ ಸಮಿತಿ ಸಭೆ ಮತ್ತು ಎನ್‌ಡಿಎ ನಾಯಕರ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಆದರೆ ಎರಡನೇ ಅವಧಿಯ ಅಧಿವೇಶನಕ್ಕೆ ಸಮಯ ಇನ್ನೂ ಸ್ಪಷ್ಟವಾಗಿಲ್ಲ ಎಂದು ತಿಳಿದು ಬಂದಿದೆ.
ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆಗಾಗಿ ಫೆಬ್ರವರಿ 1ರಂದು ಬೆಳಗ್ಗೆ 11 ಗಂಟೆಗೆ ಸಭೆ ಸೇರಲಾಗುತ್ತಿದ್ದು, ಫೆಬ್ರವರಿ 2 ರಿಂದ ಫೆಬ್ರವರಿ 11 ರವರೆಗೆ ಸಂಸತ್ ಅಧಿವೇಶನ ನಡೆಯಲಿದೆ. ಸಂಜೆ 4 ರಿಂದ ರಾತ್ರಿ 9 ರವರೆಗೆ ಲೋಕಸಭೆ ಕಲಾಪಗಳು ನಡೆಯಲಿದೆ. ರಾಜ್ಯಸಭೆಯ ಕಲಾಪದ ನಿಖರವಾದ ಸಮಯವನ್ನು ಇನ್ನೂ ಔಪಚಾರಿಕವಾಗಿ ತಿಳಿಸಬೇಕಾಗಿದ್ದರೂ, ಸಂಸತ್ತಿನ ಮೇಲ್ಮನೆಯು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.
ಸಂಸತ್ತಿನ ಕೆಳಮನೆಯ ಅಧಿವೇಶನಗಳ ಸಮಯದಲ್ಲಿ, ಲೋಕಸಭೆ ಮತ್ತು ರಾಜ್ಯಸಭಾ ಚೇಂಬರ್‌ಗಳು ಮತ್ತು ಅವುಗಳ ಗ್ಯಾಲರಿಗಳನ್ನು COVID-19 ಸಾಂಕ್ರಾಮಿಕ ನಿರ್ಬಂಧಗಳ ದೃಷ್ಟಿಯಿಂದ ಸದಸ್ಯರ ಆಸನಕ್ಕಾಗಿ ಬಳಸಲಾಗುವುದು ಎಂದು ಲೋಕಸಭೆಯ ಬುಲೆಟಿನ್ ಈಗಾಗಲೇ ತಿಳಿಸಿದೆ. (ಒನ್‌ಇಂಡಿಯಾ ಸುದ್ದಿ)
Recommended Video
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications