ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Budget 2023: ಮೆಡಿಕಲ್ ಕಾಲೇಜುಗಳ ಹತ್ತಿರದಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಆರಂಭ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2023-2024ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ವೈದ್ಯಕೀಯ ಕ್ಷೇತ್ರದ ಯೋಜನೆಗಳು ಇಲ್ಲಿವೆ.

|
Google Oneindia Kannada News

ನವದೆಹಲಿ, ಫೆಬ್ರವರಿ. 01: ಕೇಂದ್ರ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ.

ದೇಶದಲ್ಲಿ 2014 ರಿಂದ ಸ್ಥಾಪಿತವಾಗಿ ಅಸ್ತಿತ್ವದಲ್ಲಿರುವ 157 ವೈದ್ಯಕೀಯ ಕಾಲೇಜುಗಳ ಹತ್ತಿರದಲ್ಲೇ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

Budget 2023: ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಹೊಸ ಪ್ಯಾಕೇಜ್- ಏನೇನಿದೆ? ತಿಳಿಯಿರಿBudget 2023: ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಹೊಸ ಪ್ಯಾಕೇಜ್- ಏನೇನಿದೆ? ತಿಳಿಯಿರಿ

ಐಸಿಎಂಆರ್ ಲ್ಯಾಬ್​ಗಳನ್ನು ಸಾರ್ವಜನಿಕ ಮತ್ತು ಖಾಸಗಿ ವೈದ್ಯಕೀಯ ಸಂಶೋಧನೆಗೆ ಒದಗಿಸಲಾಗುವುದು. ಸಂಶೋಧನೆ ಮತ್ತು ಆವಿಷ್ಕಾರವನ್ನು ಉತ್ತೇಜಿಸಲು ಹೊಸ ಕಾರ್ಯಕ್ರಮವನ್ನು ಪರಿಚಯಿಸಲಾಗುವುದು. ಐಸಿಎಂಆರ್ ಲ್ಯಾಬ್‌ಗಳಲ್ಲಿ ಆಯ್ದ ಸೌಲಭ್ಯಗಳನ್ನು ಹೊರಗಿನವರಿಗೆ ಸಂಶೋಧನೆಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದಿದ್ದಾರೆ.

Union Budget 2023: 157 new nursing colleges will be established

ಸಿಕಲ್ ಸೆಲ್ ಅನಿಮಿಯಾ ಕಾಯಿಲೆಯನ್ನು 2047ರ ಒಳಗೆ ನಿರ್ಮೂಲನೆ ಮಾಡಲಾಗುವುದು. ಔಷಧ ವಿಜ್ಞಾನದಲ್ಲಿ ಸಂಶೋಧನೆಗೆ ಉತ್ತೇಜನ ನೀಡಲು ಹೊಸ ಕಾರ್ಯಕ್ರಮ ರೂಪಿಸಲಾಗುವುದು ಎಂದು ಸಚಿವರು ಘೋಷಿಸಿದ್ದಾರೆ.

ಭವಿಷ್ಯದ ವೈದ್ಯಕೀಯ ತಂತ್ರಜ್ಞಾನಗಳು ಮತ್ತು ಸಂಶೋಧನೆಗಾಗಿ ನುರಿತ ಮಾನವಶಕ್ತಿಯ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ವೈದ್ಯಕೀಯ ಸಾಧನಗಳಿಗಾಗಿ ಮೀಸಲಾದ ಹಲವು ಕೋರ್ಸ್‌ಗಳನ್ನು ಕಲಿಸುವ ಅಸ್ತಿತ್ವದಲ್ಲಿರುವ ಸಂಸ್ಥೆಗಳಿಗೆ ಸರ್ಕಾರ ಬೆಂಬಲ ಸೂಚಿಸಿದೆ.

English summary
Union Budget 2023: 157 new nursing colleges will be established near existing 157 medical colleges says FM Nirmala Sitharaman. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X