ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Budget 2023: ಮಕ್ಕಳು ಮತ್ತು ಹದಿಹರೆಯದವರಿಗಾಗಿ ನ್ಯಾಷನಲ್ ಡಿಜಿಟಲ್ ಲೈಬ್ರರಿ ಸ್ಥಾಪನೆ ಘೋಷಣೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2023-2024ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಮಕ್ಕಳು, ಟೀನೆಜರ್‌ಗಳಿಗಾಗಿ ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸ್ಥಾಪನೆ ಘೋಷಿಸಿದ್ದಾರೆ.

|
Google Oneindia Kannada News

ನವದೆಹಲಿ, ಫೆಬ್ರವರಿ. 01: ಗುಣಮಟ್ಟದ ಪುಸ್ತಕಗಳ ಲಭ್ಯತೆಗಾಗಿ ಮಕ್ಕಳು ಮತ್ತು ಹದಿಹರೆಯದವರಿಗೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದರು.

ಗ್ರಾಮ ಪಂಚಾಯತ್ ಮತ್ತು ವಾರ್ಡ್​​ ಮಟ್ಟದಲ್ಲಿ ನ್ಯಾಷನಲ್ ಡಿಜಿಟಲ್​ ಲೈಬ್ರರಿಗಳ ಸ್ಥಾಪನೆ ಮಾಡಲಾಗುವುದು, ಡಿಜಿಟಲ್ ಲೈಬ್ರರಿಯು ಭೌಗೋಳಿಕತೆ, ಭಾಷೆಗಳು, ಪ್ರಕಾರಗಳು ಮತ್ತು ಹಂತಗಳಾದ್ಯಂತ ಗುಣಮಟ್ಟದ ಪುಸ್ತಕಗಳನ್ನು ಒದಗಿಸುತ್ತದೆ. ಜೊತೆಗೆ ಸಾಧನಗಳ ಮೂಲಗಕ ಇವುಗಳನ್ನು ನೋಡುವುದು, ಕೇಳುವುದನ್ನು ಮಾಡಬಹುದು ಎಂದು ನಿರ್ಮಲಾ ಸೀತಾರಾಮನ್ ತಮ್ಮ ಐದನೇ ಬಜೆಟ್ ಮಂಡನೆಯಲ್ಲಿ ತಿಳಿಸಿದ್ದಾರೆ.

Budget 2023: ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಹೊಸ ಪ್ಯಾಕೇಜ್- ಏನೇನಿದೆ? ತಿಳಿಯಿರಿBudget 2023: ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಹೊಸ ಪ್ಯಾಕೇಜ್- ಏನೇನಿದೆ? ತಿಳಿಯಿರಿ

"ರಾಜ್ಯಗಳಿಗೆ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಭೌತಿಕ ಗ್ರಂಥಾಲಯಗಳನ್ನು ಸ್ಥಾಪಿಸಲು ಮತ್ತು ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸಂಪನ್ಮೂಲಗಳನ್ನು ಪ್ರವೇಶಿಸಲು ಮೂಲಸೌಕರ್ಯಗಳನ್ನು ಒದಗಿಸಲು ಪ್ರೋತ್ಸಾಹಿಸಲಾಗುವುದು" ಎಂದೂ ಈ ವೇಳೆ ಮಾಹಿತಿ ನೀಡಿದ್ದಾರೆ.

Union Budget 2023: National Digital Library For Children And teenages

ಮಕ್ಕಳು ಮತ್ತು ಹದಿಹರೆಯದವರಲ್ಲಿ ಓದುವ ಸಂಸ್ಕೃತಿಯನ್ನು ಉತ್ತೇಜಿಸಲು ರಾಷ್ಟ್ರೀಯ ಪುಸ್ತಕ ಟ್ರಸ್ಟ್​​​ನ್ನು ನಿರ್ಮಿಸಲಾಗುತ್ತಿದೆ, ಮಕ್ಕಳ ಪುಸ್ತಕ ಟ್ರಸ್ಟ್​​ನ್ನು ​​ಪ್ರಾದೇಶಿಕ ಭಾಷೆಗಳು ಮತ್ತು ಇಂಗ್ಲಿಷ್‌ನಲ್ಲಿ ಪ್ರೋತ್ಸಾಹಿಸಲಾಗುತ್ತಿದೆ. ಈ ಡಿಜಿಟಲ್ ಲೈಬ್ರರಿಗಳ ಸ್ಥಾಪನೆ ಮತ್ತು ಕಾರ್ಯಾಚರಣೆಯಲ್ಲಿ ಎನ್‌ಜಿಒಗಳ ಸಹಯೋಗವೂ ಇರಲಿದೆ ಎಂದು ಘೋಷಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸ್ವತಂತ್ರ ಭಾರತದಲ್ಲಿ ಸತತ ಐದು ಬಾರಿ ಬಜೆಟ್ ಮಂಡಿಸಿದ ಆರನೇ ಸಚಿವರಾಗಿದ್ದಾರೆ. ಮನಮೋಹನ್ ಸಿಂಗ್, ಅರುಣ್ ಜೇಟ್ಲಿ ಮತ್ತು ಪಿ ಚಿದಂಬರಂ, ಮೊರಾರ್ಜಿ ದೇಸಾಯಿ ಅವರಂತಹ ಖ್ಯಾತ ಹಣಕಾಸು ತಜ್ಞರ ಪಟ್ಟಿಗೆ ನಿರ್ಮಲಾ ಸೀತಾರಾಮನ್ ಸೇರಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 2019 ರ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಾಗ, ಜುಲೈ 5, 2019 ರಂದು ನಿರ್ಮಲಾ ಸೀತಾರಾಮನ್ ತಮ್ಮ ಚೊಚ್ಚಲ ಬಜೆಟ್ ಅನ್ನು ಮಂಡಿಸಿದ್ದರು. 2024ರ ಏಪ್ರಿಲ್-ಮೇ ತಿಂಗಳಲ್ಲಿ ಮುಂದಿನ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣ ಈ ವರ್ಷದ ಬಜೆಟ್‌ಗೆ ಹೆಚ್ಚಿನ ಮಹತ್ವವಿದೆ.

English summary
Union Budget 2023: Nirmala Sitharaman announced National Digital Library For Children And Adolescents . know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X