ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Budget 2023: ಮಹಿಳೆಯರಿಗಾಗಿ ಮಹಿಳಾ ಸಮ್ಮಾನ್ ಸಣ್ಣ ಉಳಿತಾಯ ಯೋಜನೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಿದ್ದು, ಮಹಿಳೆಯರಿಗೆ ಸಣ್ಣ ಉಳಿತಾಯ ಯೋಜನೆಯೊಂದನ್ನು ಘೋಷಿಸಿದ್ದಾರೆ.

|
Google Oneindia Kannada News

ನವದೆಹಲಿ, ಫೆಬ್ರವರಿ. 01: ಬುಧವಾರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳೆಯರಿಗಾಗಿ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

ಹಣಕಾಸು ಸಚಿವೆ ದೇಶದಲ್ಲಿ ಮಹಿಳಾ ಸಮ್ಮಾನ್ ಬಚತ್ ಪತ್ರ ಎಂಬ ಉಳಿತಾಯ ಯೋಜನೆಯನ್ನು ಘೋಷಿಸಿದ್ದಾರೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಹಾಯಕವಾಗುವಂತೆ ಈ ಯೋಜನೆಯನ್ನು ರೂಪಿಸಲಾಗಿದೆ.

Budget 2023: ಮಕ್ಕಳು ಮತ್ತು ಹದಿಹರೆಯದವರಿಗಾಗಿ ನ್ಯಾಷನಲ್ ಡಿಜಿಟಲ್ ಲೈಬ್ರರಿ ಸ್ಥಾಪನೆ ಘೋಷಣೆBudget 2023: ಮಕ್ಕಳು ಮತ್ತು ಹದಿಹರೆಯದವರಿಗಾಗಿ ನ್ಯಾಷನಲ್ ಡಿಜಿಟಲ್ ಲೈಬ್ರರಿ ಸ್ಥಾಪನೆ ಘೋಷಣೆ

ಈ ಮಹಿಳಾ ಸಮ್ಮಾನ್ ಒಂದು ಬಾರಿಯ ಹೊಸ ಸಣ್ಣ ಉಳಿತಾಯ ಯೋಜನೆಯಾಗಿದ್ದು, ಈ ಯೋಜನೆಯಡಿ ಮಹಿಳೆಯರಿಗೆ ಶೇಕಡಾ 7 ರಷ್ಟು ಬಡ್ಡಿ ದರದಲ್ಲಿ 2 ಲಕ್ಷದವರೆಗೆ ಮಹಿಳಾ ಸಮ್ಮಾನ್​ ಪ್ರಮಾಣ ಪತ್ರದ ಅಡಿಯಲ್ಲಿ ಠೇವಣಿ ಇಡುವ ಅವಕಾಶವನ್ನು ಕಲ್ಪಿಸಲಾಗಿದೆ.

Union Budget 2023: Nirmala Sitharaman announced Mahila Samman Bachat Patra

ಎರಡು ವರ್ಷಗಳ ಅವಧಿಗೆ ಅಂದರೆ ಮಾರ್ಚ್ 2025ರ ವರೆಗೆ ಈ ಯೋಜನೆಯ ಅಡಿಯಲ್ಲಿ ಠೇವಣಿ ಮಾಡಬಹುದು. ಇದರಲ್ಲಿ 7.5% ಸ್ಥಿರ ಬಡ್ಡಿದರದೊಂದಿಗೆ ಎರಡು ವರ್ಷದವರೆಗೆ ಠೇವಣಿ ಇಡಬಹುದು ಅಥವಾ ವಾಪಸ್ ಪಡೆಯಬಹುದು. ಇದು ಮಹಿಳೆಯರಿಗೆ ಸಣ್ಣ ಉಳಿತಾಯವಾಗಲಿದೆ. ಆಜಾದಿ ಕಾ ಅಮೃತ್ ಮಹೋತ್ಸವದ ನೆನಪಿಗಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ವಿತ್ತ ಸಚಿವೆ ತಿಳಿಸಿದ್ದಾರೆ.

ಇನ್ನು, ಮಹಿಳೆಯರ ಆರ್ರ್ಥಿಕ ಸಬಲೀಕರಣದ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್, ಗ್ರಾಮೀಣ ಮಹಿಳೆಯರನ್ನು 81 ಲಕ್ಷ ಸ್ವಸಹಾಯ ಗುಂಪುಗಳಾಗಿ ಸಜ್ಜುಗೊಳಿಸುವ ಮೂಲಕ ಗಮನಾರ್ಹ ಯಶಸ್ಸು ಸಾಧಿಸಿದೆ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

ಈ ಗುಂಪುಗಳನ್ನು ಆರ್ಥಿಕತೆಯ ಮುಂದಿನ ಹಂತವನ್ನು ತಲುಪಲು ನಾವು ಸಕ್ರಿಯಗೊಳಿಸುತ್ತೇವೆ. ಹೇಗೆಂದರೆ, ದೊಡ್ಡ ಉತ್ಪಾದಕ ಉದ್ಯಮಗಳ ರಚನೆಯ ಮೂಲಕ ಅಥವಾ ಸಾವಿರಾರು ಸದಸ್ಯರನ್ನು ಹೊಂದಿರುವವರ ಈ ಗುಂಪುಗಳನ್ನು ವೃತ್ತಿಪರವಾಗಿ ನಿರ್ವಹಿಸುವ ಮೂಲಕ ಎಂದು ತಿಳಿಸಲಾಗಿದೆ.

ಕಚ್ಚಾ ವಸ್ತುಗಳ ಪೂರೈಕೆ ಮತ್ತು ಉತ್ತಮ ವಿನ್ಯಾಸ, ಗುಣಮಟ್ಟ, ಬ್ರ್ಯಾಂಡಿಂಗ್ ಮತ್ತು ಅವರ ಉತ್ಪನ್ನಗಳ ಮಾರುಕಟ್ಟೆ ಸೇರಿದಂತೆ ಹಲವು ವಿಧಗಳಲ್ಲಿ ಈ ಮಹಿಳಾ ಗುಂಪುಗಳಿಗೆ ಸಹಾಯ ಮಾಡಲಾಗುವುದು. 'ಯುನಿಕಾರ್ನ್ಸ್' ಆಗಿ ಬೆಳೆಯುತ್ತಿರುವ ಹಲವಾರು ಸ್ಟಾರ್ಟ್-ಅಪ್‌ಗಳಂತೆಯೇ ದೊಡ್ಡ ಗ್ರಾಹಕ ಮಾರುಕಟ್ಟೆಗಳಿಗೆ ಸೇವೆ ಸಲ್ಲಿಸಲು ತಮ್ಮ ಕಾರ್ಯಾಚರಣೆಗಳನ್ನು ಹೆಚ್ಚಿಸಲು ಈ ಮಹಿಳಾ ಗುಂಪುಗಳನ್ನು ಸಕ್ರಿಯಗೊಳಿಸಲಾಗುತ್ತದೆ.

ಇನ್ನು, ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಗರಿಷ್ಠ ಠೇವಣಿ ಮಟ್ಟವನ್ನು 15 ಲಕ್ಷದಿಂದ 30 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಮಾಸಿಕ ಆದಾಯ ಖಾತೆಗಳ ಯೋಜನೆಯ ಗರಿಷ್ಠ ಠೇವಣಿ ಮಿತಿಯನ್ನು ಏಕ ಖಾತೆಗಳಿಗೆ 4.5 ಲಕ್ಷದಿಂದ 9 ಲಕ್ಷಕ್ಕೆ ಮತ್ತು ಜಂಟಿ ಖಾತೆಗಳಿಗೆ 9 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಿಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

English summary
Union Budget 2023: Nirmala Sitharaman announced Mahila Samman Bachat Patra. its a one-time new small savings scheme. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X