Union Budget 2025: ಆದಾಯ ತೆರಿಗೆದಾರರಿಗೆ ಬಜೆಟ್‌ನಲ್ಲಿ ಬಂಪರ್ ಗಿಫ್ಟ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೆಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಈ ವೇಳೆ ಆದಾಯ ತೆರಿಗೆದಾರರಿಗೆ ಬಂಪರ್ ಗಿಫ್ಟ್ ನೀಡಿದ್ದು, 12 ಲಕ್ಷ ರೂಪಾಯಿವರೆಗೂ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.
ಕೇಂದ್ರ ಬಿಜೆಟ್ ಮಂಡನೆ ವೇಳೆ ಆದಾಯ ತೆರಿಗೆದಾರರಿಗೆ ಬಂಪರ್ ಗಿಫ್ಟ್ ನೀಡಿದ್ದು, 12 ಲಕ್ಷದವರೆಗೆ ತೆರಿಗೆ ವಿನಾಯತಿ ನೀಡಲಾಗಿದೆ. ಹನ್ನೆರಡು ಲಕ್ಷದವರೆಗೆ ವಾರ್ಷಿಕ ಆದಾಯ ಇರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಇದು ಮಧ್ಯಮ ವರ್ಗದವರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.

ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ. 4 ಲಕ್ಷದಿಂದ 8 ಲಕ್ಷದವರೆಗೆ ಶೇಕಡ 5ರಷ್ಟು ತೆರಿಗೆ, 8 ಲಕ್ಷದಿಂದ 11 ಲಕ್ಷದವರೆಗೆ ಶೇಕಡ 10ರಷ್ಟು ತೆರಿಗೆ, 12 ಲಕ್ಷದಿಂದ 15 ಲಕ್ಷದವರೆಗೆ ಶೇಕಡ 15ರಷ್ಟು ತೆರಿಗೆ, 15 ಲಕ್ಷದಿಂದ 20 ಲಕ್ಷದವರೆಗೆ ಶೇಕಡ 20ರಷ್ಟು ತೆರಿಗೆ, 20 ಲಕ್ಷದಿಂದ 24 ಲಕ್ಷದರೆಗೆ ಶೇಕಡ 25ರಷ್ಟು ತೆರಿಗೆ, 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇಕಡ 30ರಷ್ಟು ತೆರಿಗೆ.
| ಹೊಸ ತೆರಿಗೆ ನೀತಿ ಪ್ರಕಾರ | |
| ಒಟ್ಟು ಆದಾಯ | ತೆರಿಗೆ ದರ |
| 4,00,000ರ ವರೆಗೆ | ತೆರಿಗೆ ಇಲ್ಲ |
| 4,00,001 ರಿಂದ 8,00,000 | ಶೇ 5 |
| 8,00,001 ರಿಂದ 12,00,000 | ಶೇ 10 |
| 12,00,001 ರಿಂದ 16,00,000 | ಶೇ 15 |
| 16,00,001 ರಿಂದ 20,00,000 | ಶೇ 20 |
| 20,00,001 ರಿಂದ 24,00,000 | ಶೇ 25 |
| 24,00,000 | ಶೇ 30 ಕ್ಕಿಂತ ಅಧಿಕ |
ಮಧ್ಯಮ ವರ್ಗದ ಮೇಲೆ ಕೇಂದ್ರೀಕರಿಸಲು ವೈಯಕ್ತಿಕ ಆದಾಯ ತೆರಿಗೆ ಸುಧಾರಣೆಗಳನ್ನ ತರಲಾಗಿದೆ. ಹೊಸ ತೆರಿಗೆ ಪದ್ಧತಿ ಅನ್ವಯ 4 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ. ಹಿರಿಯ ನಾಗರಿಕರಿಗೆ ತೆರಿಗೆ ಕಡಿತದ ಮಿತಿಯನ್ನು 1 ಲಕ್ಷ ರೂಪಾಯಿಗೆ ದ್ವಿಗುಣಗೊಳಿಸಲಾಗಿದೆ. ಹಾಗೆಯೇ ಬಾಡಿಗೆ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿಯನ್ನ 2.4 ಲಕ್ಷ ರೂಪಾಯಿಗಳಿಂದ 6 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.











Click it and Unblock the Notifications