Union Budget 2025: ಕೇಂದ್ರದಿಂದಲೂ ಮನೆ ಯಜಮಾನಿ ಖಾತೆಗೆ ಹಣ ಘೋಷಣೆ ಸಾಧ್ಯತೆ

Union Budget 2025: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1, 2025ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಬಹುತೇಕ ಮಂದಿ ಅದರಲ್ಲೂ ಮಧ್ಯಮ ವರ್ಗದವರು ತುಂಬಾ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಹಾಗಾದರೆ, ಬಹುನಿರೀಕ್ಷಿತ ಯೋಜನೆಗಳ ಭಾಗವಾಗಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಈ ಪೈಕಿ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಮನೆ ಯಜಮಾನಿ ಖಾತೆಗೆ 2,000 ರೂಪಾಯಿ ಹಾಕಲಾಗುತ್ತಿದೆ. ಹಾಗೆಯೇ ಕೇಂದ್ರ ಸರ್ಕಾರವು ಇದೀಗ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆಯನ್ನು ಮುಂಬರುವ ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

Union Budget 2025 Central Government May be Announced Financial Aid for Women

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2025ರಂದು ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. ಬಜೆಟ್‌ನಲ್ಲಿ ಕೆಲವು ಬಹುನಿರೀಕ್ಷಿತ ಘೋಷಣೆಗಳ ಬಗ್ಗೆ ಹಣಕಾಸು ಸಚಿವಾಲಯದ ಮೂಲಗಳು ಈ ಹಿಂದೆ ಕೆಲವು ಮಾಹಿತಿಯನ್ನು ಬಹಿರಂಗಪಡಿಸಿವೆ. ಮಹಿಳೆಯರಿಗೆ ನೆರವಾಗುವ ಹಿನ್ನೆಲೆ ಅವರ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ ಜಾರಿಗೆ ತರುವ ಕುರಿತು ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, 2025ರಂದು ಮಂಡನೆ ಮಾಡಲಿದ್ದಾರೆ. ಈ ಮೂಲಕ ಅವರು ಸತತ 8ನೇ ಬಾರಿಗೆ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರದ 3ನೇ ಬಾರಿಯ 2ನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಲಿದೆ.

ಆರ್ಥಿಕ ತಜ್ಞರ ಪ್ರಕಾರ, ಮಹಿಳೆಯರಿಗೆ ಸಹಾಯವಾಗುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಕೇಂದ್ರ ಹಣ ವರ್ಗಾವಣೆ ಮಾಡುವ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆಯಿದೆ. ಮಹಿಳೆಯರಿಗೆ ಹಣಕಾಸಿನ ಸಹಾಯ ಸಿಕ್ಕರೆ ಕುಟುಂಬಕ್ಕೆ ನೆರವಾದಂತಾಗಲಿದೆ ಎನ್ನುವ ಮಾತಿದೆ. ಆದ್ದರಿಂದ ಬೊಕ್ಕಸಕ್ಕೆ ಹೊರೆಯಾಗದಂತೆ ಮಹಿಳೆಯರಿಗಾಗಿಯೇ ಯೋಜನೆ ಆರಂಭಿಸುವ ಸಾಧ್ಯತೆಯಿದೆ. ಆದ್ದರಿಂದ ಮಹಿಳೆಯರಿಗೆ ಸಂಬಂಧಿಸಿದ ಇತರ ರೀತಿಯ ಕಾರ್ಯಕ್ರಮಗಳನ್ನು ಪರಿಶೀಲನೆ ಮಾಡಬೇಕೆಂಬುದು ತಜ್ಞರ ಅಭಿಪ್ರಾಯವಾಗಿದೆ.

ರಾಜಕೀಯ ಉದ್ದೇಶದಿಂದ ನೋಡಿದರೆ, ರಾಜಕೀಯ ಪಕ್ಷಗಳು ಮಹಿಳೆಯರನ್ನೇ ತಮ್ಮ ವೋಟು ಬ್ಯಾಂಕ್ ಮಾಡಿಕೊಂಡಿದೆ. ಆದ್ದರಿಂದ ಮಹಿಳೆಯರನ್ನು ತಮ್ಮತ್ತ ಸೆಳೆಯಲು ಹೊಸ ಹೊಸ ಯೋಜನೆಗಳನ್ನು ಜಾರಿ ಮಾಡುತ್ತಿವೆ. ಈಗಾಗಲೇ ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಇದೇ ರೀತಿಯ ಮಹಿಳಯರ ಪರ ಯೋಜನೆಗಳು ಘೋಷಣೆಗಳಾಗಿವೆ.

ಈಗಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿಗೆ 2,000 ರೂಪಾಯಿ ಹಾಕುತ್ತಿದೆ. ಈ ಹಣವನ್ನು ಹಲವು ಕುಟುಂಬಗಳ ಮಹಿಳೆಯರು ಸದ್ದುದ್ದೇಶಕ್ಕೆ ಬಳಸಿಕೊಂಡಿರುವ ಉದಾಹರಣೆಗಳಿವೆ. ಗೃಹ ಉಪಯೋಗಿ ವಸ್ತುಗಳು, ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವರು ಇದೇ ಹಣದಲ್ಲಿ ಬೋರ್‌ವೆಲ್‌ ಕೊರೆಸಿರುವ ಉದಾಹರಣೆಗಳಿವೆ. ಇನ್ನೂ ಕೆಲವರು ಒಡವೆಗಳು ಸೇರಿದಂತೆ ಮನೆಗೆ ಬೇಕಾದ ಪ್ರಮುಖ ವಸ್ತುಗಳನ್ನು ಕೊಂಡುಕೊಂಡಿದ್ದಾರೆ. ಇದು ಒಂದು ರೀತಿಯಲ್ಲಿ ಒಳ್ಳೆಯ ಯೋಜನೆಯೇ ಆಗಿದೆ. ಮತ್ತೊಂದೆಡೆ ನೋಡೀದಾದ್ರೆ, ರಾಜಕೀಯ ಉದ್ದೇಶದಿಂದ ಮಹಿಳೆಯರ ವೋಟ್‌ ಪಡೆಯಲು ಸರ್ಕಾರಗಳು ಇಂತಹ ಯೋಜನೆಗಳನ್ನು ರೂಪಿಸುತ್ತಿವೆ ಎನ್ನುವ ಮಾತುಗಳು ಇವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+