Budget 2025: ಕೇಂದ್ರ ಬಜೆಟ್ 2025 ರಸ್ತೆ, ಹೆದ್ದಾರಿಗಳಿಗೆ ಹೆಚ್ಚಿನ ಅನುದಾನ

ನವದೆಹಲಿ, ಜನವರಿ 19: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ 3.0 ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಪೂರ್ಣ ಪ್ರಮಾಣದ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗುತ್ತಿದೆ. ಬಜೆಟ್‌ನಲ್ಲಿ ಯಾವ ವಲಯಕ್ಕೆ ಹೆಚ್ಚಿನ ಆದ್ಯತೆ ಸಿಗಲಿದೆ? ಎಂದು ಚರ್ಚೆಗಳು ಆರಂಭವಾಗಿವೆ. ಮಾಹಿತಿಗಳ ಪ್ರಕಾರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಬಜೆಟ್‌ನಲ್ಲಿ ನೀಡುವ ಅನುದಾನವನ್ನು ಏರಿಕೆ ಮಾಡಲಾಗುತ್ತದೆ, ಈ ಮೂಲಕ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆಯನ್ನು ನೀಡಲಿದೆ.

ಫೆಬ್ರವರಿ 1ರ ಶನಿವಾರ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2025-26 ಮಂಡಿಸಲಿದ್ದಾರೆ. ವಿವಿಧ ಭಾಗೀದಾರರ ಜೊತೆ ಅವರು ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸುತ್ತಿದ್ದು, ಮನವಿಗಳನ್ನು ಸ್ವೀಕಾರ ಮಾಡುತ್ತಿದ್ದಾರೆ.

Union Budget 2025 More Support To Ministry Of Road Transport And Highways

ಬಜೆಟ್‌ನಲ್ಲಿನ ಪ್ರಮಖ ಅಂಶ ಒಟ್ಟು ಬಜೆಟ್ ಬೆಂಬಲ (ಜಿಬಿಎಸ್) ಇದು ಭಾರತ ಸರ್ಕಾರದ ಕೇಂದ್ರ ಯೋಜನೆಯ ಪ್ರಮುಖ ಅಂಶವಾಗಿದೆ. ಕೇಂದ್ರ ಯೋಜನೆಗೆ ಸರ್ಕಾರದ ಬೆಂಬಲವನ್ನು ಒಟ್ಟು ಬಜೆಟ್ ಬೆಂಬಲ ಎಂದು ಕರೆಯಲಾಗುತ್ತದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಬಜೆಟ್‌ನಲ್ಲಿ ಜಿಬಿಎಸ್ ಶೇ 5-6ರಷ್ಟು ಏರಿಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಮೂಲ ಸೌಕರ್ಯಕ್ಕೆ ಆದ್ಯತೆ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ರಸ್ತೆ ಯೋಜನೆಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದಾರೆ. ಆದ್ದರಿಂದ 2025-26ನೇ ಸಾಲಿನ ಬಜೆಟ್‌ನಲ್ಲಿ ಸಚಿವಾಲಯಕ್ಕೆ 2.85 ರಿಂದ 2.9 ಲಕ್ಷ ಕೋಟಿ ತನಕ ಬೆಂಬಲ ಸಿಗುವ ನಿರೀಕ್ಷೆ ಇದೆ. ಈಗಾಗಲೇ ಈ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಡಿ ವಿಳಂಬವಾಗಿ ಸಾಗುತ್ತಿರುವ ಯೋಜನೆಗಳು, ಈಗಾಗಲೇ ಘೋಷಣೆ ಮಾಡಿರುವ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಬಜೆಟ್‌ನಲ್ಲಿ ಸಚಿವಾಲಯಕ್ಕೆ ಹೆಚ್ಚಿನ ಅನುದಾನವನ್ನು ನೀಡಲಾಗುತ್ತದೆ. ಅಲ್ಲದೇ ಇಂತಹ ಯೋಜನೆಗಳಲ್ಲಿ ಖಾಸಗಿ ಪಾಲುದಾರಿಕೆಯನ್ನು ಹೆಚ್ಚಿಸಲು ಸಹ ಬಜೆಟ್‌ನಲ್ಲಿ ಹೊಸ ನೀತಿಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

ಕಳೆದ 10 ವರ್ಷಗಳಿಂದ ಬಜೆಟ್‌ನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ನೀಡುತ್ತಿರುವ ಅನುದಾನವನ್ನು ಶೇ 10ರಷ್ಟು ಹೆಚ್ಚಿಸಲಾಗಿದೆ. ಈ ಅನುದಾನವನ್ನು ಸಚಿವಾಲಯ ಸಮರ್ಪಕವಾಗಿ ಉಪಯೋಗ ಮಾಡುತ್ತಿದ್ದು, ಇನ್ನೂ ಹೆಚ್ಚಿನ ಅನುದಾನವನ್ನು ಹಂಚಿಕೆ ಮಾಡಲು ಸಹಾಯಕವಾಗಿದೆ. 2024-25ನೇ ಸಾಲಿನ ಬಜೆಟ್‌ನಲ್ಲಿ ಸಚಿವಾಲಯಕ್ಕೆ 2.72 ಲಕ್ಷ ಕೋಟಿ ಅನುದಾನ ಹಂಚಿಕೆ ಮಾಡಲಾಗಿತ್ತು.

ಖಾಸಗಿ ಪಾಲುದಾರಿಕೆಯಲ್ಲಿ ಹೆದ್ದಾರಿಗಳನ್ನು ನಿರ್ಮಾಣ ಮಾಡಿ ದೇಶದಲ್ಲಿ ರಸ್ತೆ ಮತ್ತು ಹೆದ್ದಾರಿಗಳನ್ನು ಉತ್ತಮಪಡಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಭಾಗವಾಗಿಯೇ ಈ ವಲಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ನಿರ್ಮಾಣ, ಕಾರ್ಯಾಚರಣೆ, ವರ್ಗಾವಣೆ (ಬಿಒಟಿ) ಆಧಾರದಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಹ ಸರ್ಕಾರ ಬಯಸಿದೆ.

ದೇಶದಲ್ಲಿ ಬಿಒಟಿ ಆಧಾರದಲ್ಲಿ ನಿರ್ಮಾಣ ಮಾಡಲು 15 ರಸ್ತೆ ಯೋಜನೆಯನ್ನು ಸಚಿವಾಲಯ ಗುರುತಿಸಿದೆ. ಇದು ಸುಮಾರು 937 ಕಿ. ಮೀ. ಉದ್ದವಿದೆ. ನವೆಂಬರ್ 2024ರ ತನಕ ಸಚಿವಾಲಯ 4,734 ಕೋಟಿ ರೂ. ಯೋಜನೆಗಳನ್ನು ಈ ಆಧಾರದಲ್ಲಿ ನಿರ್ಮಾಣ ಮಾಡಲು ಹಂಚಿಕೆ ಮಾಡಿದೆ.

2025ರ ಆರಂಭದಲ್ಲಿಯೇ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನಿರ್ಮಾಣ, ಕಾರ್ಯಾಚರಣೆ, ವರ್ಗಾವಣೆ (ಬಿಒಟಿ) ಆಧಾರದ ಯೋಜನೆಯಲ್ಲಿ ಖಾಸಗಿ ಪಾಲುದಾರಿಗೆ ಹೆಚ್ಚಿಸಲು ಕೆಲವೊಂದು ಬದಲಾವಣೆಗಳನ್ನು ಮಾಡಿದೆ. 2023-24ರಲ್ಲಿ ಹಂಚಿಕೆ ಮಾಡಲಾದ ಯೋಜನೆಗಳು ಈ ವರ್ಷದ ಅಂತ್ಯದಲ್ಲಿ ಪೂರ್ಣಗೊಳ್ಳಬೇಕು ಎಂದು ಸೂಚಿಸಲಾಗಿದೆ.

2024ರ ಡಿಸೆಂಬರ್‌ಗೆ 5,100 ಕಿ. ಮೀ. ಯೋಜನೆ ಪೂರ್ಣಗೊಳಿಸಲಾಗಿದೆ. 6,200 ಕಿ. ಮೀ. ಗುರಿಯನ್ನು ಸಚಿವಾಲಯ ಹೊಂದಿತ್ತು. 2023ರ ಬಳಿಕ ಭಾರತ್ ಮಾಲಾ ಯೋಜನೆಯು ವಿಳಂಬವಾಗುತ್ತಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಆದ್ದರಿಂದ ಘೋಷಣೆ ಮಾಡಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಮೊದಲ ಆದ್ಯತೆ ನೀಡಲು ಸರ್ಕಾರ ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+