Get Updates
Get notified of breaking news, exclusive insights, and must-see stories!

Union Budget 2026: ವಿಧಾನಸಭೆ ಚುನಾವಣೆ - ಮಿತ್ರ ಪಕ್ಷ ಅಧಿಕಾರ ಇರುವ 4 ರಾಜ್ಯಗಳಿಗೆ ಬಂಪರ್ ಕೊಡುಗೆ

Union Budget 2026: ಕೇಂದ್ರ ಸರ್ಕಾರವು 2026 - 2027ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು. ಕೆಲವು ರಾಜ್ಯಗಳಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಕಳೆದ ಬಾರಿ ಕೇಂದ್ರ ಸರ್ಕಾರವು ಬಿಹಾರ ಹಾಗೂ ಆಂಧ್ರಪ್ರದೇಶ ರಾಜ್ಯಗಳಿಗೆ ಬಂಪರ್ ಕೊಡುಗೆಯನ್ನು ನೀಡಿತ್ತು. ಈ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಹಾಗೂ ಮೈತ್ರಿ ಪಕ್ಷಗಳನ್ನು ಮೆಚ್ಚಿಸುವ ತಂತ್ರವನ್ನು ಕೇಂದ್ರ ಸರ್ಕಾರವು ಕಳೆದ ಬಾರಿ ಅನುಸರಿಸಿತ್ತು.

ಇದೇ ಮಾದರಿಯನ್ನು ಈ ಬಾರಿಯೂ ಅನುಸರಿಸಲಾಗಿದೆ. ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ 2026ನೇ ಸಾಲಿನ ಬಜೆಟ್‌ನಲ್ಲಿ ಬಂಪರ್ ಘೋಷಣೆ ಮಾಡಿದೆ. 4 ಪ್ರಮುಖ ರಾಜ್ಯಗಳಿಗೆ ಅರ್ಥ್ ಮಿನರಲ್ ಕಾರಿಡಾರ್ ಘೋಷಣೆ ಮಾಡಲಾಗಿದೆ. ಕೇರಳ, ಒಡಿಶಾ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳಿಗೆ ಈ ಬಾರಿ ಬಂಪರ್ ಕೊಡುಗೆ ಬಜೆಟ್‌ನಲ್ಲಿ ಸಿಕ್ಕಂತಾಗಿದೆ. ಇದರಲ್ಲಿ ಗಮನಿಸಬೇಕಾದ ಅಂಶವೆಂದರೆ, 2026ನೇ ಸಾಲಿನಲ್ಲಿ ತಮಿಳುನಾಡು ಹಾಗೂ ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆಂಧ್ರಪ್ರದೇಶದಲ್ಲಿ ಮಿತ್ರ ಪಕ್ಷ ತೆಲುಗು ದೇಶಂ ಪಾರ್ಟಿ ಇದ್ದರೆ, ಒಡಿಶಾದಲ್ಲಿ ಈಚೆಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್‌ನಲ್ಲಿ ಬಂಪರ್ ಕೊಡುಗೆ ಕೊಡಲಾಗಿದೆ.

Union Budget 2026

ಪಶ್ಚಿಮ ಬಂಗಾಳಕ್ಕೆ ಭರಪೂರ ಗಿಫ್ಟ್‌

ಇನ್ನು ಈ ವರ್ಷ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಈ ಎಲ್ಲಾ ರಾಜ್ಯಗಳಿಗೂ ವಿಶೇಷ ಕೊಡುಗೆ ನೀಡಲಾಗಿದೆ. ಅದರಲ್ಲೂ ಮುಖ್ಯವಾಗಿ ಕೇರಳ ಹಾಗೂ ಪಶ್ಚಿಮ ಬಂಗಾಳಕ್ಕೆ ವಿಶೇಷ ಯೋಜನೆಗಳನ್ನು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರವು ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಪಶ್ವಿಮ ಬಂಗಾಳ ರಾಜ್ಯಕ್ಕೆ ಬಂಪರ್ ಕೊಡುಗೆಗಳನ್ನು ಘೋಷಣೆ ಮಾಡಿದೆ. 5 ವರ್ಷಗಳಲ್ಲಿ 20 ರಾಷ್ಟ್ರೀಯ ಹೊಸ ಜಲಮಾರ್ಗಗಳ ಅಭಿವೃದ್ಧಿ. ಸರಕು - ಸಾಗಾಣೆ ಉತ್ತೇಜಿಸಲು ಹೊಸ ಕಾರಿಡಾರ್ ಡಾಂಗ್ಕುನಿಂದ - ಸೂರತ್‌ವರೆಗೂ ಸರಕು - ಸಾಗಣೆ ಕಾರಿಡಾರ್ ಅಭಿವೃದ್ಧಿ.

ನಾಲ್ಕು ರಾಜ್ಯಗಳಿಗೆ ಖನಿಜ ಕಾರಿಡಾರ್

ತಮಿಳುನಾಡು,ಕೇರಳ, ಒಡಿಸ್ಸಾ ಹಾಗೂ ಆಂಧ್ರಪ್ರದೇಶ ರಾಜ್ಯಗಳಲ್ಲಿ ಖನಿಜ ಕಾರಿಡಾರ್ ಅಭಿವೃದ್ಧಿ ಮಾಡುವುದಾಗಿ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಇನ್ನು ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಪಕ್ಷಿ ವೀಕ್ಷಣೆಗೆಂದೇ ರೈಲು ಸಂಚಾರ ಪ್ರಾರಂಭಿಸುವುದಾಗಿ ಕೇಂದ್ರ ಸರ್ಕಾರವು ಘೋಷಣೆ ಮಾಡಿದೆ.

2026ರಲ್ಲಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ

2026ನೇ ಸಾಲಿನಲ್ಲಿ ಒಂದು ಕೇಂದ್ರಾಡಳಿತ ಪ್ರದೇಶವೂ ಸೇರಿದಂತೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಬಾರಿ ವಿಧಾನಸಭೆ ಚುನಾವಣೆ ನಡೆಯಲಿರುವ ಪ್ರಮುಖ ರಾಜ್ಯಗಳಲ್ಲಿ ಬಿಜೆಪಿಯು ಒಂದೇ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಈ ಕಾರಣದಿಂದ ಈ ಬಾರಿಯ ಕೇಂದ್ರ ಬಜೆಟ್ ಮಹತ್ವ ಪಡೆದುಕೊಂಡಿತ್ತು. 2026ನೇ ಸಾಲಿನಲ್ಲಿ ಅಸ್ಸಾಂ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿಯ ವಿಧಾನಸಭೆ ಚುನಾವಣೆ ಈ ವರ್ಷ ನಡೆಯಲಿದೆ. ಹೀಗಾಗಿ, ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಈ ರಾಜ್ಯಗಳಿಗೆ ಬಂಪರ್ ಕೊಡುಗೆ ಸಿಗಲಿದೆ.

ಕೇಂದ್ರ ಬಜೆಟ್ ಲೈವ್ ಜೊತೆಗೆ ವಿಶ್ಲೇಷಣೆಯೂ ಇಲ್ಲಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆ 1) ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಭಾಷಣದ ಲೈವ್ ವಿಡಿಯೊ ಮತ್ತು ತಜ್ಞರ ವಿಶ್ಲೇಷಣೆಗಾಗಿ 'ಒನ್ ಇಂಡಿಯಾ ಕನ್ನಡ' ಯುಟ್ಯೂಬ್ ಚಾನೆಲ್‌ಗೆ ಭೇಟಿ ನೀಡಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+