ಗ್ರಾಮೀಣ ಮಹಿಳೆಯರಿಗೆ ನಿರ್ಮಲಾ ಸೀತಾರಾಮನ್ ಭರ್ಜರಿ ಗುಡ್‌ ನ್ಯೂಸ್‌

Good News For Rural women: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್‌ನಲ್ಲಿ ಗ್ರಾಮೀಣ ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳಿಗಾಗಿ ಸ್ವ-ಸಹಾಯ ಉದ್ಯಮಗಳು ಅಂದರೆ ಶಿ-ಮಾರ್ಟ್‌ಗಳನ್ನು ಪ್ರಾರಂಭ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್‌ನಲ್ಲಿ ಗ್ರಾಮೀಣ ಮಹಿಳೆಯರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಮಹಿಳೆಯರು ನಡೆಸುವ ಉದ್ಯಮಗಳನ್ನು ಬೆಂಬಲಿಸಲು "ಸ್ವ-ಸಹಾಯ ಉದ್ಯಮಗಳನ್ನು ಆರಂಭಿಸಲು ಈ ಯೋಜನೆ ಘೋಷಿಸಲಾಗಿದೆ.

Union Budget 2026

ಈ ಮೂಲಕ ಮಹಿಳೆಯರಿಗೆ ಸ್ವಂತ ಉದ್ಯಮ ಆರಂಭಿಸಲು ಪ್ರೋತ್ಸಾಹ ದೊರೆಯುತ್ತಿದ್ದು, ಅವರ ಆದಾಯವನ್ನು ಹೆಚ್ಚಿಸಲು ಮತ್ತು ಸಶಕ್ತಗೊಳಿಸಲು ಕೇಂದ್ರ ಸರ್ಕಾರ ಮುಂದಾಗುತ್ತಿದೆ. ಗ್ರಾಮೀಣ ಮಹಿಳೆಯರು ತಮ್ಮ ಉತ್ಪನ್ನಗಳನ್ನು ಸ್ಥಳೀಯ ಮಾರ್ಕೆಟಿಂಗ್‌ ಮೂಲಕ ಮಾರಾಟ ಮಾಡಲು ಈ ಶಿ-ಮಾರ್ಟ್‌ಗಳು ಸಹಾಯ ಮಾಡುವಂತೆ ನಿರೀಕ್ಷಿಸಲಾಗಿದೆ.

ಈ ಯೋಜನೆಯ ಉದ್ದೇಶ ಏನು?: ಮಹಿಳೆಯರು ಉದ್ಯಮದಲ್ಲಿ ಪ್ರಗತಿ ಸಾಧಿಸುವ ಉದ್ದೇಶದಿಂದ ಶಿ - ಮಾರ್ಟ್ ಯೋಜನೆ ಪರಿಚಯಿಸಲಾಗಿದೆ. ಇನ್ನು ಈ ಹೊಸ ಯೋಜನೆಯು ಮಹಿಳಾ ನೇತೃತ್ವದ ಸ್ವ-ಸಹಾಯ ಗುಂಪುಗಳು ಸ್ಥಳೀಯ ಚಿಲ್ಲರೆ ಮಾರುಕಟ್ಟೆ ನಡೆಸಲು ಹಾಗೂ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಪ್ರವೇಶ ಪ್ರಕ್ರಿಯೆಯನ್ನು ಸುಧಾರಿಸಲು ಸಹಕಾರಿಯಾಗಲಿದೆ.

ಇನ್ನು ಮುಂದುವರಿದು ಸಮುದಾಯ ಮಟ್ಟದಲ್ಲಿ ಸುಸ್ಥಿರ ಜೀವನೋಪಾಯ ಅವಕಾಶ ಸೃಷ್ಟಿಗೆ ಅನುವು ಮಾಡಿಕೊಡಲಿದೆ. ಇದರಿಂದ ತಳಮಟ್ಟದ ಉದ್ಯಮಶೀಲತೆ ಬಲಗೊಳ್ಳಲಿದೆ. ಶಿ-ಮಾರ್ಟ್ಸ್ ಯೋಜನೆಯು ಈ ಹಿಂದೆ ಪರಿಚಯಿಸಲಾಗಿದ್ದ ಲಖ್ಪತಿ ದೀದಿ ಕಾರ್ಯಕ್ರಮದ ಯಶಸ್ಸಿನ ಮುಂದುವರಿದ ಭಾಗವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ಈ ಯೋಜನೆಯು ಮುಖ್ಯವಾಗಿ ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳ ಉತ್ತೇಜನ ಹಾಗೂ ಪ್ರೋತ್ಸಾಹ ನೀಡುವ ಉದ್ದೇಶವನ್ನು ಒಳಗೊಂಡಿದೆ. ಮಹಿಳಾ ವ್ಯಾಪಾರಿಗಳು ದೊಡ್ಡ ಮಾರುಕಟ್ಟೆಗಳನ್ನು ತಲುಪಲು, ತಮ್ಮ ಬ್ರ್ಯಾಂಡ್‌ಗಳನ್ನು ಸೃಷ್ಟಿ ಮಾಡುವುದು ಮತ್ತು ಪ್ರಚಾರ ಮಾಡುವುದು. ಸ್ಥಿರವಾದ ಆದಾಯದ ಮೂಲಗಳನ್ನು ಸೃಷ್ಟಿಸಲು ಸಹಾಯ ಮಾಡುವ ಗುರಿಯನ್ನು ಶಿ - ಮಾರ್ಟ್ಸ್ ಯೋಜನೆ ಒಳಗೊಂಡಿದೆ.

ಅಲ್ಲದೇ ಸ್ವ-ಸಹಾಯ ಗುಂಪುಗಳಂತಹ ಸ್ಥಳೀಯ ಸಂಘಟನೆ ಗಳನ್ನು ಬಲಪಡಿಸಲು ಉದ್ದೇಶಿಸಲಾಗಿದೆ ಎಂದು ಹೇಳಲಾಗಿದೆ. ಸ್ವ-ಸಹಾಯ ಉದ್ಯಮಗಳನ್ನು ಕ್ಲಸ್ಟರ್ ಮಟ್ಟಕ್ಕೆ ಅಭಿವೃದ್ಧಿ ಮಾಡಲಾಗುವುದು. ಕ್ಲಸ್ಟರ್ ಮಟ್ಟದಲ್ಲಿ ಈ ಮಳಿಗೆಗಳನ್ನು ಸ್ಥಾಪಿಸುವ ಮೂಲಕ, ಗ್ರಾಮೀಣ ಉತ್ಪನ್ನಗಳು ಪ್ರಸಿದ್ಧ ಬ್ರ್ಯಾಂಡ್‌ಗಳಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಉತ್ತೇಜನ ನೀಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

ಈ ಯೋಜನೆಯನ್ನು ಬೆಂಬಲಿಸಲು ನಿಯಮಿತ ಬ್ಯಾಂಕ್ ಸಾಲಗಳು ಸಾಕಾಗುವುದಿಲ್ಲ. ಉದ್ಯಮಿಗಳಿಗೆ ವರ್ಧಿತ ಮತ್ತು ಹೊಸ ಹಣಕಾಸು ವ್ಯವಸ್ಥೆಯ ಮೂಲಕ ಸಹಾಯ ಸಿಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಬಜೆಟ್ ಲೈವ್ ಜೊತೆಗೆ ವಿಶ್ಲೇಷಣೆಯೂ ಇಲ್ಲಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆ 1) ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಭಾಷಣದ ಲೈವ್ ವಿಡಿಯೊ ಮತ್ತು ತಜ್ಞರ ವಿಶ್ಲೇಷಣೆಗಾಗಿ 'ಒನ್ ಇಂಡಿಯಾ ಕನ್ನಡ' ಯುಟ್ಯೂಬ್ ಚಾನೆಲ್‌ಗೆ ಭೇಟಿ ನೀಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+