Union Budget 2026: ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು; ಕರ್ನಾಟಕಕ್ಕೆ 63,049 ಕೋಟಿ: ಹೆಚ್.ಡಿ. ಕುಮಾರಸ್ವಾಮಿ
ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಆಯವ್ಯಯದ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ತೆರಿಗೆ ಪಾಲಿನಲ್ಲಿ ಅನ್ಯಾಯ ಆಗಿದೆ ಎಂದು ರಾಜ್ಯ ಸರ್ಕಾರ ಸಾಮಾನ್ಯವಾಗಿ ದೂರುತ್ತಿತ್ತು. 16ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶೇ 4.13ರಷ್ಟು ತೆರಿಗೆ ಪಾಲು ಹಂಚಿಕೆಗೆ ಶಿಫಾರಸು ಮಾಡಿದೆ. 15ನೇ ಹಣಕಾಸು ಆಯೋಗವು ಶೇ 3.64 ಹಂಚಿಕೆ ಮಾಡಿತ್ತು. ಹೊಸದಾಗಿ ಹಂಚಿಕೆ ಆಗಿರುವುದರ ಮೂಲಕ ರಾಜ್ಯಕ್ಕೆ 2026-27ನೇ ಸಾಲಿನಲ್ಲಿ ₹63,049 ಕೋಟಿ ತೆರಿಗೆ ಪಾಲು ದೊರೆಯಲಿದೆ. ಇನ್ನು ಮುಂದೆ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ರಾಜಕೀಯವಾಗಿ ಕೇಂದ್ರವನ್ನು ಟೀಕೆ ಮಾಡುವುದನ್ನು ಬಿಡಬೇಕು ಎಂದು ಹೇಳಿದ್ದಾರೆ.

ಈ ಬಜೆಟ್ ನಲ್ಲಿ ಕರ್ನಾಟಕಕ್ಕೆ ನಿರಾಶೆಯೇನೂ ಆಗಿಲ್ಲ. ತೆಂಗು ಪ್ರೋತ್ಸಾಹ ಯೋಜನೆಯಡಿ ತೆಂಗಿನ ಉತ್ಪಾದನೆ ಹೆಚ್ಚಳಕ್ಕೆ ಉತ್ತೇಜನ ಕೊಡಲಾಗಿದೆ. ಹಾಗೆಯೇ ಗೋಡಂಬಿ ಮತ್ತು ಕೋಕೋವನ್ನು 2030ರ ವೇಳೆಗೆ ಪ್ರೀಮಿಯಂ ಗ್ಲೋಬಲ್ ಬ್ರಾಂಡ್ ಆಗಿ ರೂಪಿಸುವ ಅಂಶವು ಮುಂಗಡ ಪತ್ರದಲ್ಲಿ ಸೇರಿದೆ. ಶ್ರೀಗಂಧ, ತೆಂಗು ಬೆಳೆ, ಕೋಕೋ ಬೆಳೆಗೆ ವಿಶೇಷ ಯೋಜನೆ ಮೂಲಕ ರಾಜ್ಯದ ಹಲವಾರು ಜಿಲ್ಲೆಗಳಿಗೆ ಉಪಯೋಗ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಹೈದರಾಬಾದ್-ಬೆಂಗಳೂರು, ಬೆಂಗಳೂರು ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ರಾಜ್ಯಕ್ಕೆ ವರದಾನವಾಗಲಿದೆ. ಈಗಾಗಲೇ ರಾಜ್ಯದ ಹಲವು ವೇಗದ ರೈಲುಗಳು ಕಾರ್ಯಾಚರಿಸುತ್ತಿದ್ದು, ವಂದೇ ಭಾರತ್ ರೈಲುಗಳು ಕೂಡ ಸೇರ್ಪಡೆಯಾಗಿದೆ. ಈಗ ಹೈ ಸ್ಪೀಡ್ ರೈಲುಗಳು ರಾಜ್ಯಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರೈಲು ಸಂಪರ್ಕದಲ್ಲಿ ಹೊಸ ಕ್ರಾಂತಿ ಆಗಲಿದೆ ಎಂದು ಸಚಿವರು ಪ್ರತಿಪಾದಿಸಿದರು.
ಇದು ಕೇವಲ ಅಂಕಿ ಅಂಶಗಳ ಮುಂಗಡ ಪತ್ರವಲ್ಲ, ಬದಲಿಗೆ ಮುನ್ನೋಟ, ಮುಂದಾಲೋಚನೆ, ವಿಕಾಸ, ಫಲಿತಾಂಶ ಆಧರಿತ ಮುಂಗಡ ಪತ್ರವಾಗಿದೆ. ವಿಕಸಿತ ಭಾರತ ಗುರಿ ಸಾಕಾರಕ್ಕೆ ಇದು ಪೂರಕವಾಗಿದೆ. 2047ಕ್ಕೆ ನಾವು ಈ ಗುರಿ ಸಾಧನೆ ಮಾಡಬೇಕು, ಅದಕ್ಕೆ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಈ ಬಜೆಟ್ ಸ್ಪಷ್ಟ ದಿಕ್ಸೂಚಿ ತೋರಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಗ್ರಾಮೀಣ ಭಾರತಕ್ಕೆ ಮನ್ನಣೆ ಕೊಡಲಾಗಿದೆ. ಪ್ರತಿ ರಾಜ್ಯ, ಪ್ರತಿ ಜಿಲ್ಲೆ, ಪ್ರತಿ ತಾಲೂಕು, ಪ್ರತಿ ಪಂಚಾಯಿತಿ, ಪ್ರತಿ ಹಳ್ಳಿ ಮುಂಗಡಪತ್ರದಲ್ಲಿ ಒಳಗೊಂಡಿದೆ. ವಿಶಾಲ, ವಿಸ್ತೃತ, ವಿಕಾಸ; ಇದು ಮೋದಿ ಅವರ ಲೋಕದೃಷ್ಟಿ. ಅದಕ್ಕೆ ತಕ್ಕಂತೆ ಮುಂಗಡಪತ್ರ ಮೂಡಿ ಬಂದಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಕೇಂದ್ರ ಬಜೆಟ್ ಲೈವ್ ಜೊತೆಗೆ ವಿಶ್ಲೇಷಣೆಯೂ ಇಲ್ಲಿದೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆ 1) ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಭಾಷಣದ ಲೈವ್ ವಿಡಿಯೊ ಮತ್ತು ತಜ್ಞರ ವಿಶ್ಲೇಷಣೆಗಾಗಿ 'ಒನ್ ಇಂಡಿಯಾ ಕನ್ನಡ' ಯುಟ್ಯೂಬ್ ಚಾನೆಲ್‌ಗೆ ಭೇಟಿ ನೀಡಿ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications