Union Budget 2026: ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ: ಕೇಂದ್ರ ಬಜೆಟ್‌ನಲ್ಲಿ ರಾಜ್ಯ ಸರ್ಕಾರದ ಬೇಡಿಕೆಗಳು
Union Budget 2026: ವಿತ್ತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 1) ಕೇಂದ್ರ ಬಜೆಟ್ 2026 ಅನ್ನು ಸಂಸತ್ತಿನಲ್ಲಿ ಮಂಡನೆ ಮಾಡಲಿದ್ದಾರೆ. ಈ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಇಟ್ಟಿರುವ ಪ್ರಮುಖ ಬೇಡಿಕೆಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಬಜೆಟ್‌ನಲ್ಲಿ ಆರ್ಥಿಕ ವೃದ್ಧಿಗೆ ವೇಗ ನೀಡುವುದು, ಉದ್ಯೋಗ ಸೃಷ್ಟಿ, ಮಧ್ಯಮ ವರ್ಗದ ತೆರಿಗೆದಾರರಿಗೆ ರಿಲೀಫ್ ನೀಡುವುದು ಹಾಗೂ ದೇಶದ ಮೂಲಸೌಕರ್ಯವನ್ನು ಬಲಪಡಿಸುವುದು ಪ್ರಮುಖ ಗುರಿಗಳಾಗಿವೆ. ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ರೈತರ ಆದಾಯ ಹೆಚ್ಚಿಸುವ ಯೋಜನೆಗಳು ಹಾಗೂ ಕೃಷಿ ಸಾಲ ಸೌಲಭ್ಯಗಳ ವಿಸ್ತರಣೆಗೆ ಆದ್ಯತೆ ನೀಡುವ ಸಾಧ್ಯತೆಯಿದೆ ಎಂದು ನಿರೀಕ್ಷಿಸಲಾಗಿದೆ.

ಸ್ಟಾರ್ಟ್‌ಅಪ್‌ಗಳು ಮತ್ತು ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಘೋಷಣೆಗಳು, ಆರೋಗ್ಯ, ಶಿಕ್ಷಣ, ಡಿಜಿಟಲ್ ತಂತ್ರಜ್ಞಾನ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಪ್ರಮುಖ ಘೋಷಣೆಗಳು ಆಗುವ ಸಾಧ್ಯತೆಯಿದೆ ಎಂದು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಹಾಗಾದ್ರೆ, ಕರ್ನಾಟಕ ಸರ್ಕಾರ ಪ್ರಮುಖ ಬೇಡಿಕೆಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.
ಕಾಂಗ್ರೆಸ್ ಟ್ವೀಟ್: ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ. ಕರ್ನಾಟಕಕ್ಕೆ ವಿಶೇಷ ಯೋಜನೆಗಳಿಲ್ಲ, ಕೇಂದ್ರ ಯೋಜನೆಗಳಿಗೆ ಪೂರಕ ಅನುದಾನವಿಲ್ಲ, ತೆರಿಗೆ ಹಂಚಿಕೆಯಲ್ಲಿ ನ್ಯಾಯವಿಲ್ಲ, ಇದು ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ಪಾಲಿನ ಕೇಂದ್ರ ಬಜೆಟ್ಟಿನ ಚಿತ್ರಣವಾಗಿದೆ. ಈ ಬಾರಿ ಬಜೆಟ್‌ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು. ನಾವು ಕೇಳುತ್ತಿರುವುದು ನಮ್ಮ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಟ್ವಿಟ್‌ನಲ್ಲಿ ಕೇಳಿಕೊಂಡಿದೆ.
ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ!
— Karnataka Congress (@INCKarnataka) January 31, 2026
ಕರ್ನಾಟಕಕ್ಕೆ ವಿಶೇಷ ಯೋಜನೆಗಳಿಲ್ಲ, ಕೇಂದ್ರ ಯೋಜನೆಗಳಿಗೆ ಪೂರಕ ಅನುದಾನವಿಲ್ಲ, ತೆರಿಗೆ ಹಂಚಿಕೆಯಲ್ಲಿ ನ್ಯಾಯವಿಲ್ಲ, ಇದು ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ಪಾಲಿನ ಕೇಂದ್ರ ಬಜೆಟ್ಟಿನ ಚಿತ್ರಣವಾಗಿದೆ.
ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು. ನಾವು… pic.twitter.com/ETJG2bpMjB
ಬಜೆಟ್‌ನಲ್ಲಿ ಪ್ರಮುಖ ನಿರೀಕ್ಷೆಗಳು: ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ಅಮೆರಿಕದ ತೆರಿಗೆ ನೀತಿಗಳ ಸವಾಲಿನ ನಡುವೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರ ಭಾನುವಾರ ಬೆಳಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ 2026-27ನ್ನು ಮಂಡಿಸಲು ಸಿದ್ಧರಾಗಿದ್ದಾರೆ. ಈ ಬಜೆಟ್‌ನಲ್ಲಿ ರಕ್ಷಣಾ ವಲಯ, ಮೂಲಸೌಕರ್ಯ ಅಭಿವೃದ್ಧಿ, ರಫ್ತು ಉತ್ತೇಜನ, ರೈಲ್ವೆ, ಇಂಧನ ಕ್ಷೇತ್ರ, ಅಗ್ಗದ ಮನೆ ನಿರ್ಮಾಣ ಹಾಗೂ ಬಂಡವಾಳ ವೆಚ್ಚ ಹೆಚ್ಚಳಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ಇದೆ.
ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತದ ಸ್ಥಾನ ಉಳಿಸಿಕೊಳ್ಳಲು ಅಗತ್ಯ ಕ್ರಮಗಳು, ಜೊತೆಗೆ ಸಾಮಾಜಿಕ ಕಲ್ಯಾಣ ಯೋಜನೆಗಳಿಗೂ ಆದ್ಯತೆ ನೀಡಲಾಗುವ ಸಾಧ್ಯತೆ ಇದೆ. ವಿತ್ತೀಯ ಶಿಸ್ತನ್ನು ಕಾಪಾಡಿಕೊಳ್ಳುವತ್ತವೂ ಸರ್ಕಾರದ ಗಮನ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ.
ನಿರ್ಮಲಾ ಸೀತಾರಾಮನ್ ಅವರ 9ನೇ ಬಜೆಟ್: ಕೋವಿಡ್ ನಂತರ ಶೇಕಡ 9.2ಕ್ಕೆ ಏರಿದ್ದ ವಿತ್ತೀಯ ಕೊರತೆಯನ್ನು ಶೇಕಡ 4.4ಕ್ಕೆ ತಗ್ಗಿಸುವಲ್ಲಿ ಸರ್ಕಾರ ಸಾಧನೆ ಮಾಡಿದ್ದು, ಇದೇ ದಿಕ್ಕಿನಲ್ಲಿ ಮುಂದುವರಿಯುವ ನಿರೀಕ್ಷೆ ಈ ಬಜೆಟ್‌ನಲ್ಲೂ ಇದೆ. ಈ ಬಾರಿ ಮಂಡನೆ ಆಗುತ್ತಿರುವುದು ಮೋದಿ ಸರ್ಕಾರದ ಒಟ್ಟಾರೆ 15ನೇ ಬಜೆಟ್, ಮೋದಿ ಅವರ ಮೂರನೇ ಅವಧಿಯ ಎರಡನೇ ಪೂರ್ಣಾವಧಿ ಬಜೆಟ್ ಹಾಗೂ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ ಮಂಡಿಸುತ್ತಿರುವ ಒಂಬತ್ತನೇ ಬಜೆಟ್ ಆಗಿದೆ.
ಕಳೆದ ಬಜೆಟ್‌ನಲ್ಲಿ ಮಧ್ಯಮ ವರ್ಗದ ಬಳಕೆ ಹೆಚ್ಚಿಸಲು ತೆರಿಗೆ ರಿಯಾಯಿತಿಗಳ ಮೂಲಕ ಸರ್ಕಾರ ಕ್ರಮ ಕೈಗೊಂಡಿದ್ದರೆ, ಈ ಬಾರಿ ಜಾಗತಿಕ ಆರ್ಥಿಕ ಪರಿಸ್ಥಿತಿಯ ಕಾರಣ ಇಂತಹ ರಿಯಾಯಿತಿಗಳು ಸೀಮಿತವಾಗಿರಬಹುದೆಂದು ಅಂದಾಜಿಸಲಾಗಿದೆ. ಬಂಡವಾಳ ವೆಚ್ಚ ಹೆಚ್ಚಿಸುವುದು, ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಗಳ ಹಿನ್ನೆಲೆ ದೇಶೀಯ ಉತ್ಪಾದನೆಗೆ ಉತ್ತೇಜನ ನೀಡುವುದು, ಸೆಮಿಕಂಡಕ್ಟರ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವುದು, ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಬಲ ತುಂಬುವುದು ಹಾಗೂ ಎಲೆಕ್ಟ್ರಿಕ್ ವಾಹನಗಳನ್ನು ಒಳಗೊಂಡ ಆಟೋಮೊಬೈಲ್ ವಲಯದ ಬೆಳವಣಿಗೆಗೆ ನೆರವು ನೀಡುವುದು ಈ ಬಜೆಟ್‌ನ ಪ್ರಮುಖ ನಿರೀಕ್ಷೆಗಳಾಗಿವೆ.












Click it and Unblock the Notifications