ಕೇಂದ್ರ ಬಜೆಟ್‌ನಲ್ಲಿ ಸಾರಿಗೆಗೆ ಗರಿಷ್ಠ ಅನುದಾನ, ಯಾವುದಕ್ಕೆ ಎಷ್ಟು? ಇಲ್ಲಿದೆ ಅಂಕಿಅಂಶಗಳ ಪಟ್ಟಿ
Union Budget 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 1) ಕೇಂದ್ರ ಬಜೆಟ್ 2026 ಅನ್ನು ಮಂಡನೆ ಮಾಡಿದ್ದಾರೆ. ಹಾಗಾದ್ರೆ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಿದ್ದು, ದೇಶದ ಆರ್ಥಿಕ ಬೆಳವಣಿಗೆಗೆ ವೇಗ ನೀಡುವ ಹಲವಾರು ಪ್ರಮುಖ ಕ್ರಮಗಳನ್ನು ಘೋಷಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಿದ್ದಾರೆ ಎನ್ನುವ ಪ್ರಶ್ನೆ ಬಹುತೇಕ ಮಂದಿಯ ತಲೆಯಲ್ಲಿರುತ್ತದೆ. ಇದಕ್ಕೆಲ್ಲ ಉತ್ತರ ಇಲ್ಲಿದೆ ಗಮನಿಸಿ.

ಕ್ಷೇತ್ರವಾರು ಅನುದಾನದ ವಿವರ: ಕೇಂದ್ರ ಬಜೆಟ್‌ನಲ್ಲಿ ಸರ್ಕಾರ ವಿವಿಧ ಪ್ರಮುಖ ಕ್ಷೇತ್ರಗಳಿಗೆ ಅನುದಾನ ಹಂಚಿಕೆ ಮಾಡಿ ಆರ್ಥಿಕ ಬೆಳವಣಿಗೆಗೆ ಹೊಸ ದಿಕ್ಕು ನೀಡಿದೆ. ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲಾಗಿದ್ದು, ಸಾರಿಗೆ, ರಕ್ಷಣಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಲಾಗಿದೆ. ಈ ಮೂಲಕ ರಾಷ್ಟ್ರೀಯ ಭದ್ರತೆ ಮತ್ತು ದೇಶೀಯ ರಕ್ಷಣಾ ಉತ್ಪಾದನೆಯನ್ನು ಬಲಪಡಿಸುವ ಗುರಿ ಹೊಂದಲಾಗಿದೆ.
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ಸಹ ಆದ್ಯತೆ ನೀಡಲಾಗಿದ್ದು, ರೈತರ ಆದಾಯ ಹೆಚ್ಚಿಸುವ ಯೋಜನೆಗಳು, ನೀರಾವರಿ ಮತ್ತು ಗ್ರಾಮೀಣ ಮೂಲಸೌಕರ್ಯಕ್ಕೆ ಹೆಚ್ಚಿನ ನೆರವು ಘೋಷಿಸಲಾಗಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚುವರಿ ಅನುದಾನ ಮೀಸಲಿಡಲಾಗಿದೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸುವುದು, ವೈದ್ಯಕೀಯ ಸೌಕರ್ಯ ವಿಸ್ತರಣೆ ಹಾಗೂ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಸುಧಾರಣೆ ಸರ್ಕಾರದ ಗುರಿಯಾಗಿದೆ. ಮಹಿಳಾ ಸಬಲೀಕರಣ, ಸಾಮಾಜಿಕ ಕಲ್ಯಾಣ ಯೋಜನೆಗಳು ಮತ್ತು ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ಯೋಜನೆಗಳಿಗೂ ಬಜೆಟ್‌ನಲ್ಲಿ ಘೋಷಿಸಲಾಗಿದೆ.
ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?
* ಸಾರಿಗೆ - ₹5,98,520 ರೂಪಾಯಿ
* ರಕ್ಷಣಾ ಇಲಾಖೆ - ₹5,94,585 ಕೋಟಿ
* ಗ್ರಾಮೀಣಾಭಿವೃದ್ಧಿ - ₹2,73,108 ಕೋಟಿ
* ಗೃಹ ವ್ಯವಹಾರಗಳು - ₹2,55,234 ಕೋಟಿ
* ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳು - ₹1,62,671 ಕೋಟಿ
* ಶಿಕ್ಷಣ - ₹1,39,289 ಕೋಟಿ
* ಇಂಧನ - ₹1,09,029 ಕೋಟಿ
* ನಗರಾಭಿವೃದ್ಧಿ - ₹85,522 ಕೋಟಿ
* ಐಟಿ ಮತ್ತು ಟೆಲಿಕಾಂ - ₹74,560 ಕೋಟಿ
* ವಾಣಿಜ್ಯ ಮತ್ತು ಕೈಗಾರಿಕೆ - ₹70,296 ಕೋಟಿ
* ಸಮಾಜ ಕಲ್ಯಾಣ - ₹62,362 ಕೋಟಿ
* ವಿಜ್ಞಾನ ಕ್ಷೇತ್ರ - ₹55,756 ಕೋಟಿ
* ತೆರಿಗೆ ಆಡಳಿತ - ₹45,500 ಕೋಟಿ
* ವಿದೇಶಾಂಗ ವ್ಯವಹಾರಗಳು - ₹22,119 ಕೋಟಿ
* ಹಣಕಾಸು - ₹20,649 ಕೋಟಿ
* ಈಶಾನ್ಯ ಅಭಿವೃದ್ಧಿ - ₹6,812 ಕೋಟಿ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ ಬಳಿಕ, ಬಜೆಟ್ ಕುರಿತ ಸಾಮಾನ್ಯ ಚರ್ಚೆಗಳು ಹಾಗೂ ಸ್ಪಷ್ಟೀಕರಣಗಳೊಂದಿಗೆ ಈ ಹಂತ ಪೂರ್ಣಗೊಂಡಿದೆ. ಇನ್ನೂ ಬಜೆಟ್‌ನಲ್ಲಿ ಘೋಷಿಸಲಾದ ಕ್ಷೇತ್ರವಾರು ಅನುದಾನದ ವಿವರವನ್ನು ಇಲ್ಲಿ ನೀಡಲಾಗಿದೆ.
ಬಜೆಟ್ ಮಂಡನೆಯ ನಂತರ ವಿವಿಧ ಕ್ಷೇತ್ರಗಳ ತಜ್ಞರು, ಉದ್ಯಮ ವಲಯ ಮತ್ತು ಸಾರ್ವಜನಿಕರು ತಮ್ಮ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ಅಭಿವೃದ್ಧಿ ಪರ ಯೋಜನೆಗಳನ್ನು ಸ್ವಾಗತಿಸಿದರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿದ್ದಾರೆ. ಕೇಂದ್ರ ಬಜೆಟ್ ಮುಕ್ತಾಯದೊಂದಿಗೆ ಸರ್ಕಾರವು ಘೋಷಿಸಿದ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಮುಂದಿನ ದಿನಗಳಲ್ಲಿ ನಿರ್ಣಯಗಳು ಹೊರಬರುವ ನಿರೀಕ್ಷೆಯಿದೆ.
ಕೇಂದ್ರ ಬಜೆಟ್ ಲೈವ್ ಜೊತೆಗೆ ವಿಶ್ಲೇಷಣೆಯೂ ಇಲ್ಲಿದೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆ 1) ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಭಾಷಣದ ಲೈವ್ ವಿಡಿಯೊ ಮತ್ತು ತಜ್ಞರ ವಿಶ್ಲೇಷಣೆಗಾಗಿ 'ಒನ್ ಇಂಡಿಯಾ ಕನ್ನಡ' ಯುಟ್ಯೂಬ್ ಚಾನೆಲ್‌ಗೆ ಭೇಟಿ ನೀಡಿ.












Click it and Unblock the Notifications