Union Budget 2026: ಕೇಂದ್ರ ಬಜೆಟ್ ಬೆನ್ನಲ್ಲೇ ಷೇರುಮಾರುಕಟ್ಟೆ ಮಹಾ ಕುಸಿತ
ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆ 1) ಮಂಡಿಸಿದ ಬಜೆಟ್ನಲ್ಲಿ ಅಲ್ಪಾವಧಿ ಆದಾಯದ ಮೇಲಿನ ತೆರಿಗೆಯನ್ನು ಶೇ 0.05 ರಷ್ಟು ಹೆಚ್ಚಿಸುವುದಾಗಿ ಘೋಷಿಸಿದರು. ವಿತ್ತ ಸಚಿವರ ಈ ಘೋಷಣೆಗೆ ಷೇರುಪೇಟೆ ನಕಾರಾತ್ಮಕವಾಗಿ ಸ್ಪಂದಿಸಿದ್ದು, ಭಾರತದ ಪ್ರಮುಖ ಸೂಚ್ಯಂಕಗಳಾದ ನಿಫ್ಟಿ ಮತ್ತು ಸೆನ್ಸೆಕ್ಸ್ ಕುಸಿತ ದಾಖಲಿಸಿವೆ. ಮುಂಬೈ ಷೇರು ವಹಿವಾಟು ಕೇಂದ್ರದ ಸಂವೇದಿ ಸೂಚ್ಯಂತ ಸೆನ್ಸೆಕ್ಸ್ 800 ಅಂಶಗಳನ್ನು ಕುಸಿದು 81,422 ರಲ್ಲಿ ವಹಿವಾಟು ನಡೆಸುತ್ತಿದೆ. ರಾಷ್ಟ್ರೀಯ ಷೇರು ಸಂದೇದಿ ಸೂಚ್ಯಂತ ನಿಫ್ಟಿ 285 ಅಂಶಗಳ ಕುಸಿತ ಕಂಡು 25,031 ರಲ್ಲಿ ವಹಿವಾಟು ನಡೆಸುತ್ತಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು 2026ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ಮಂಡನೆಯ ಒಂದು ಗಂಟೆಯ ಮುಂಚೆಯಿಂದಲೇ ಷೇರುಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲವಾಗಿತ್ತು. ಷೇರುಮಾರುಕಟ್ಟೆಯಲ್ಲಿ ಮಹಾ ಕುಸಿತವಾಗಿತ್ತು.

ಷೇರುಮಾರುಕಟ್ಟೆಯಲ್ಲಿ ಕರಡಿ ಕುಸಿತ ಮುಂದುವರಿದಿದೆ. ಬಜೆಟ್ ಬೆನ್ನಲ್ಲೇ ಷೇರುಮಾರುಕಟ್ಟೆಯು ಮಹಾ ಕುಸಿತ ಕಂಡಿದೆ. ಬಿಎಸ್ಎಫ್ 1,600 ಅಂಕ ಕುಸಿತ ಕಂಡಿದ್ದು ನಿಫ್ಟಿ 500 ಅಂಕಗಳ ಕುಸಿತ ಭಾರೀ ಕುಸಿತವನ್ನು ಕಂಡಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ ಇಂಡಿಯಾ ಸೆಮಿಕಂಡಕ್ಟರ್ ಮಿಷನ್ 2.0 ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಎಲೆಕ್ಟ್ರಾನಿಕ್ಸ್ ಉತ್ಪಾದನಾ ಸೇವೆಗಳ (ಇಎಂಎಸ್) ವಲಯದ ಷೇರುಗಳು ತೀವ್ರವಾಗಿ ಏರಿಕೆ ಕಂಡಿದ್ದವು. ಸಿರ್ಮಾ ಎಸ್ಜಿಎಸ್ ಟೆಕ್ನಾಲಜಿಯ ಷೇರುಗಳು ಪ್ರತಿ ಷೇರಿಗೆ 7% ರಷ್ಟು ಏರಿಕೆಯಾಗಿ 812 ರೂಪಾಯಿಗೆ ತಲುಪಿದರೆ, ಪಿಜಿ ಎಲೆಕ್ಟ್ರೋಪ್ಲಾಸ್ಟ್, ಡಿಕ್ಸನ್ ಟೆಕ್ನಾಲಜೀಸ್, ಕೇನ್ಸ್ ಟೆಕ್ನಾಲಜಿ ಮತ್ತು ಆಂಬರ್ ಎಂಟರ್ಪ್ರೈಸಸ್ನ ಷೇರುಗಳು ಸಹ 6.5% ರಷ್ಟು ಏರಿಕೆಯಾಗಿವೆ.
ಭಾರತಕ್ಕೆ ಚಿಪ್ ಪೂರೈಕೆ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ದೇಶೀಯ ಕಂಪನಿಗಳ ಮೌಲ್ಯವನ್ನು ಸರಪಳಿಯಲ್ಲಿ ಅಭಿವೃದ್ಧಿಪಡಿಸುವ ಗುರಿಯನ್ನು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರವು ಎಲೆಕ್ಟ್ರಾನಿಕ್ಸ್ ಘಟಕ ಉತ್ಪಾದನಾ ಯೋಜನೆಯನ್ನು (ಇಸಿಎಂಎಸ್) 40,000 ಕೋಟಿ ನಿವ್ವಳ ವೆಚ್ಚಕ್ಕೆ ವಿಸ್ತರಿಸಲಿದೆ.
ಷೇರುಮಾರುಕಟ್ಟೆ ಮಹಾ ಕುಸಿತಕ್ಕೆ ಕಾರಣವೇನು ?
ಇನ್ನು ಷೇರುಮಾರುಕಟ್ಟೆ ಮಹಾ ಕುಸಿತಕ್ಕೆ ಪ್ರಮುಖ ಕಾರಣವೆಂದರೆ, ವಿದೇಶಗಳಲ್ಲಿ ವಾಸಿಸುತ್ತಿರುವವರು ಇನ್ಮುಂದೆ ಪೋರ್ಟ್ ಫೊಲಿಯೋ ಹೂಡಿಕೆ ಯೋಜನೆಯ ಮೂಲಕ ಭಾರತೀಯ ಷೇರುಗಳಲ್ಲಿ ಹೂಡಿಕೆ ಮಾಡಲು ಅವಕಾಶ ಇರಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ(ಫೆ.01) ಘೋಷಿಸಿದ್ದಾರೆ. ಈ ಘೋಷಣೆಯಾಗುತ್ತಿರುವ ಬೆನ್ನಲ್ಲೇ ಮುಂಬೈ ಷೇರುಪೇಟೆ ವಹಿವಾಟು ಅಲ್ಲೋಲ ಕಲ್ಲೋಲವಾಗಿದೆ. ಕ್ಷಣ ಕಣಕ್ಕೂ ವ್ಯತ್ಯಾಸವಾಗುತ್ತಿದ್ದು, 2000ಕ್ಕೂ ಅಧಿಕ ಅಂಕಗಳ ಕುಸಿತ ಕಂಡಿದೆ.
ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು 2,354.50 ಅಂಕಗಳ ಭಾರೀ ಕುಸಿತ ಕಾಣುವುದರೊಂದಿಗೆ 80,659.48 ಅಂಕಗಳಿಗೆ ಕುಸಿತ ಕಂಡಿದೆ. ಎನ್ ಎಸ್ ಇ ನಿಫ್ಟಿ ಸಹ ದೊಡ್ಡ ಮಟ್ಟದಲ್ಲಿ ಇಳಿಕೆಯನ್ನು ದಾಖಲಿಸಿದೆ.
ಕೇಂದ್ರ ಬಜೆಟ್ ಲೈವ್ ಜೊತೆಗೆ ವಿಶ್ಲೇಷಣೆಯೂ ಇಲ್ಲಿದೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆ 1) ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಭಾಷಣದ ಲೈವ್ ವಿಡಿಯೊ ಮತ್ತು ತಜ್ಞರ ವಿಶ್ಲೇಷಣೆಗಾಗಿ 'ಒನ್ ಇಂಡಿಯಾ ಕನ್ನಡ' ಯುಟ್ಯೂಬ್ ಚಾನೆಲ್ಗೆ ಭೇಟಿ ನೀಡಿ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications