Union Budget 2025: 'ರೈತರ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ'

ಬೆಂಗಳೂರು, ಫೆಬ್ರವರಿ 01: ಕೇಂದ್ರ ಬಜೆಟ್ ರೈತರ ಬೇಡಿಕೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿಂದು ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ರೈತರು ಬೆಳೆದ ಬೆಳೆಗೆ ನಿಶ್ಚಿತ ಬೆಲೆ ಬರಬೇಕು. ಇಂದು ಅನ್ನದಾತರ ಸ್ಥಿತಿ ಅನಿಶ್ಚಿತತೆಯಿಂದ ಕೂಡಿದೆ. ಎಲ್ಲ ವಸ್ತುಗಳಿಗೂ ಎಂ.ಎಸ್.ಪಿ. ಇರುವಾಗ ರೈತರ ಕಷ್ಟಾರ್ಜಿತಕ್ಕೆ ನಿರ್ದಿಷ್ಟ ಬೆಲೆ ನೀಡುವ ಎಂ.ಎಸ್.ಪಿ. ಕಾಯಿದೆ ಬಗ್ಗೆ ಪ್ರಕಟಿಸದ ಬಜೆಟ್ ಇದಾಗಿದೆ ಎಂದು ತಿಳಿಸಿದ್ದಾರೆ.

Union Budget Is Disappointing As It does Not Meet Demands Of Farmers Eshwar Khandre

ರೈತರು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದು, ಸಾಲದ ಹೊರೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ ಎಂದೂ ತಿಳಿಸಿದ್ದಾರೆ.
ಬಜೆಟ್ ನಲ್ಲಿ ಬಿಜೆಪಿ ಮತ್ತು ಎನ್.ಡಿ.ಎ.ಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ.

ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ ಇಂತಹ ತಾರತಮ್ಯ ಸರ್ವತ ಸಮರ್ಥನೀಯವಲ್ಲ. ಇಂತಹ ಒಂದು ಕೆಟ್ಟ ಸಂಪ್ರದಾಯಕ್ಕೆ ಬಜೆಟ್ ನಾಂದಿ ಹಾಡಿದೆ. ಕರ್ನಾಟಕದ ನಿರೀಕ್ಷೆಗಳೂ ಹುಸಿಯಾಗಿವೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಎನ್.ಡಿ.ಎ. ಆಡಳಿತ 11 ವರ್ಷಗಳ ಕಾರ್ಯಕಾಲದಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ನಿರುದ್ಯೋಗ ಸಮಸ್ಯೆ ಉಲ್ಬಣಿಸಿದೆ. ಈ ಬಜೆಟ್ ನಲ್ಲಿ ಕೂಡ ದುಡಿಯುವ ಯುವಕರ ಕೈಗೆ ಉದ್ಯೋಗ ನೀಡುವ ಯೋಜನೆ ರೂಪಿಸದಿರುವುದು ದುರ್ದೈವ ಎಂದು ತಿಳಿಸಿದ್ದಾರೆ. ಹಿಂದುಳಿದ ಈಶಾನ್ಯ ಭಾರತದ ಅಭಿವೃದ್ಧಿಗೆ ಆದ್ಯತೆ ನೀಡುವ ಕೇಂದ್ರ ಸರ್ಕಾರ, ಹಿಂದುಳಿದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕಿಂಚಿತ್ತೂ ಗಮನ ಹರಿಸದೆ ಕಡೆಗಣಿಸಿರುವುದಕ್ಕೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದುಳಿದ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿದ್ದರು. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ.

ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+