ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್ 2021: ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಉಜ್ವಲ ಯೋಜನೆ ವಿಸ್ತರಣೆ

|
Google Oneindia Kannada News

ನವದೆಹಲಿ, ಫೆಬ್ರವರಿ 1 ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021ನೇ ಸಾಲಿನ ಬಜೆಟ್ ಭಾಷಣದಲ್ಲಿ ಉಚಿತ ಅನಿಲ ಗ್ಯಾಸ್ ವಿತರಣೆ ಕುರಿತು ಹೇಳಿದರು.

ಈಗಾಗಲೇ ದೇಶದಲ್ಲಿ 8 ಕೋಟಿಗೂ ಹೆಚ್ಚು ಮಹಿಳೆಯರು ಉಜ್ವಲ ಯೋಜನೆಯಡಿ ಅನಿಲ ಗ್ಯಾಸ್ ಸೌಲಭ್ಯ ಪಡೆಯುತ್ತಿದ್ದಾರೆ. ಈಗ ಮತ್ತೆ ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಉಜ್ವಲ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ಹೇಳುತ್ತಾ, ನಗರ ಅನಿಲ ವಿತರಣೆಗೆ ಮುಂದಿನ 3 ವರ್ಷಗಳಲ್ಲಿ ಇನ್ನೂ 100 ಜಿಲ್ಲೆಗಳನ್ನು ಸೇರಿಸಲಾಗುವುದು ಎಂದರು.

Union Budjet 2021: Ujjwala Scheme Will Be Extended To Cover 1 Cr More Beneficiaries

ಇದೇ ವೇಳೆ ಸ್ವತಂತ್ರ ಅನಿಲ ಸಾರಿಗೆ ವ್ಯವಸ್ಥೆ ಆಪರೇಟರ್ ಅನ್ನು ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾಮರಾಮನ್ ಅವರು ಬಜೆಟ್ ಮಂಡನೆಯಲ್ಲಿ ತಿಳಿಸಿದರು.

ಉಜ್ವಲ ಯೋಜನೆಯನ್ನು 1 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ವಿಸ್ತರಿಸಲಾಗುವುದು. ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ಯಾಸ್ ಪೈಪ್‌ಲೈನ್ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

English summary
In her budget speech, Finance Minister Nirmala Sitharaman said 100 more districts will be added to the urban gas distribution in the next three years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X