ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೀರ್ಘಾವಧಿಗೆ ರೈಲ್ವೆ ಭೂಮಿ ಗುತ್ತಿಗೆ ನೀಡಲು ಕೇಂದ್ರದ ಅನುಮೋದನೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್‌ 07: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಪ್ರಧಾನಿ ಗತಿ ಶಕ್ತಿ ಯೋಜನೆಯನ್ನು ಜಾರಿಗೆ ತರಲು ರೈಲ್ವೆಯ ಭೂಮಿಯನ್ನು ದೀರ್ಘಾವಧಿಗೆ ಗುತ್ತಿಗೆ ನೀಡಲು ಬುಧವಾರ ಅನುಮೋದನೆ ನೀಡಿದೆ.

ಈ ಕ್ರಮದ ಮೂಲಕ ಮುಂದಿನ ಐದು ವರ್ಷಗಳಲ್ಲಿ 300 ಕಾರ್ಗೋ ಟರ್ಮಿನಲ್‌ಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಬುಧವಾರ ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆ ಗೆಲ್ಲುವುದಕ್ಕೆ ಬಿಜೆಪಿ ಹೀಗೆ ಮಾಡುವುದೇ!?2024ರ ಲೋಕಸಭೆ ಚುನಾವಣೆ ಗೆಲ್ಲುವುದಕ್ಕೆ ಬಿಜೆಪಿ ಹೀಗೆ ಮಾಡುವುದೇ!?

ಕ್ಯಾಬಿನೆಟ್ ಸಭೆಯ ನಂತರ ಮಾತನಾಡಿದ ಠಾಕೂರ್, ಈ ಉಪಕ್ರಮಗಳು 1.2 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿವೆ. ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆನ್ನು ಜಾರಿಗೆ ತರಲು ರೈಲ್ವೆಯ ಭೂಮಿಯನ್ನು ದೀರ್ಘಾವಧಿಗೆ ಗುತ್ತಿಗೆ ನೀಡುವ ನೀತಿಯನ್ನು ಕ್ಯಾಬಿನೆಟ್ ಅನುಮೋದಿಸಿದೆ. ಮುಂದಿನ 90 ದಿನಗಳಲ್ಲಿ ಈ ನೀತಿ ಜಾರಿಯಾಗಲಿದೆ ಎಂದರು.

ಹೊಸ ನೀತಿಯು ರೈಲ್ವೇಗೆ ಹೆಚ್ಚಿನ ಸರಕುಗಳನ್ನು ಆಕರ್ಷಿಸಲು ಸಹಾಯ ಮಾಡುತ್ತದೆ. ಸರಕು ಸಾಗಣೆಯಲ್ಲಿ ರೈಲ್ವೆಯ ಪಾಲನ್ನು ಹೆಚ್ಚಿಸುತ್ತದೆ. ಉದ್ಯಮದ ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡುತ್ತದೆ. ರೈಲ್ವೆಗೆ ಹೆಚ್ಚಿನ ಆದಾಯವನ್ನು ತರುತ್ತದೆ. ಇದು ಪಿಎಂ ಗತಿ ಶಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದಂತೆ ಉಪಯುಕ್ತತೆಗಳಿಗೆ ಅನುಮೋದನೆಗಳನ್ನು ಸರಳಗೊಳಿಸುತ್ತದೆ ಎಂದರು.

ಈ ನೀತಿಯು ಸಾರ್ವಜನಿಕ ಉಪಯುಕ್ತತೆಗಳಾದ ವಿದ್ಯುತ್, ಅನಿಲ, ನೀರು ಸರಬರಾಜು, ಟೆಲಿಕಾಂ ಕೇಬಲ್, ಒಳಚರಂಡಿ ವಿಲೇವಾರಿ, ಡ್ರೈನ್‌ಗಳು, ಆಪ್ಟಿಕಲ್ ಫೈಬರ್ ಕೇಬಲ್‌ಗಳು, ಪೈಪ್‌ಲೈನ್‌ಗಳು, ರಸ್ತೆಗಳು, ಫ್ಲೈಓವರ್‌ಗಳು, ಆದರೆ ಟರ್ಮಿನಲ್‌ಗಳು, ಪ್ರಾದೇಶಿಕ ರೈಲು ಸಾರಿಗೆ, ನಗರ ಸಾರಿಗೆ ಇತ್ಯಾದಿಗಳ ಅಭಿವೃದ್ಧಿಗೆ ಒಂದು ಸಂಯೋಜಿತ ರೀತಿಯಲ್ಲಿ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

{photo-feature}

English summary
The Union Cabinet chaired by Prime Minister Narendra Modi on Wednesday approved long-term leasing of railway land to implement the Pradhan Mantri Gati Shakti Yojana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X