4ಜಿ ಸ್ಪೆಕ್ಟ್ರಂ ಮಾರಾಟಕ್ಕೆ ಕೇಂದ್ರ ಸಂಪುಟ ಅನುಮೋದನೆ
ನವದೆಹಲಿ, ಡಿಸೆಂಬರ್ 17: ಕೇಂದ್ರ ಸಂಪುಟವು 2251.25 ಎಂಎಚ್ ಸ್ಪೆಕ್ಟ್ರಂಅನ್ನು 3.92 ಲಕ್ಷ ಕೋಟಿ ರೂ. ಮೊತ್ತಕ್ಕೆ ಏಳು ಫ್ರೀಕ್ವೆನ್ಸಿಗಳಲ್ಲಿ ಮಾರಾಟ ಮಾಡಲು ಬುಧವಾರ ಅನುಮೋದನೆ ನೀಡಿದೆ. ಈ ಹರಾಜು ಕೇವಲ 4ಜಿ ಸೇವೆಗಳಿಗೆ ನಡೆಯಲಿದೆ. 5ಜಿ ಸ್ಪೆಕ್ಟ್ರಂನ ಹರಾಜಿಗೆ ದೂರಸಂಪರ್ಕಗಳ ಇಲಾಖೆ ಇನ್ನೂ ಸ್ಪೆಕ್ಟ್ರಂ ಬ್ಯಾಂಡ್‌ಗಳನ್ನು ಅಂತಿಮಗೊಳಿಸಿಲ್ಲ.
ದೂರಸಂಪರ್ಕ ಸೇವಾ ಪೂರೈಕೆದಾರರಿಂದ ಅರ್ಜಿಗಳನ್ನು ಆಹ್ವಾನಿಸುವ ನೋಟಿಸ್ಅನ್ನು ಈ ತಿಂಗಳ ಅಂತ್ಯದ ಒಳಗೆ ಹೊರಡಿಸಲಾಗುತ್ತದೆ. ಮಾರ್ಚ್ 2021ರ ವೇಳೆಗೆ ಮಾರಾಟ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸರ್ಕಾರ ಭರವಸೆ ಹೊಂದಿದೆ ಎಂದು ದೂರಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಈ ಹೊಸ ಸುತ್ತಿನ ಹರಾಜುಗಳು ಸರ್ಕಾರಕ್ಕೆ ಆದಾಯ ಸಂಗ್ರಹವನ್ನು ಹೆಚ್ಚಿಸುವ ಪ್ರಯತ್ನಕ್ಕೆ ಉತ್ತೇಜನ ನೀಡುವ ಸಾಧ್ಯತೆ ಇದೆ. ಸರಕು ಮತ್ತು ಸೇವಾ ತೆರಿಗೆ, ನೇರ ತೆರಿಗೆಗಳು, ಪರೋಕ್ಷ ತೆರಿಗೆಗಳಂತಹ ಆದಾಯ ಸಂಗ್ರಹಗಳಲ್ಲಿ ಇಳಿಕೆಯಾಗಿರುವುದರಿಂದ 4ಜಿ ಸ್ಪೆಕ್ಟ್ರಂ ಹರಾಜು ಸರ್ಕಾರಕ್ಕೆ ಹೆಚ್ಚಿನ ಆದಾಯದ ನಿರೀಕ್ಷೆ ಮೂಡಿಸಿದೆ.

ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಶಿಫಾರಸು ಮಾಡಿರುವುದಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ 700, 800, 900, 1800, 2,100, 2,300 ಮತ್ತು 2,500 ಎಂಎಚ್ ಬ್ಯಾಂಡ್‌ಗಳಲ್ಲಿ ಸ್ಪೆಕ್ಟ್ರಂನ ರಿವರ್ಸ್ ದರದಲ್ಲಿ ಹರಾಜು ಮಾಡಲಾಗುತ್ತದೆ. ಟ್ರಾಯ್ ಶಿಫಾರಸನ್ನು ಡಿಜಿಟಲ್ ಸಂವಹನ ಸಮಿತಿ (ಡಿಸಿಸಿ) ಸ್ವೀಕರಿಸಿತ್ತು.
2019ರ ಡಿಸೆಂಬರ್ 20ರಂದು ಡಿಸಿಸಿ, ದೂರಸಂಪರ್ಕ ವೃತ್ತದಲ್ಲಿ ಪರವಾನಗಿ ಪಡೆದ 22 ಸ್ಪೆಕ್ಟ್ರಂಗಳಲ್ಲಿ 8,300 ಮೆಗಾ ಹರ್ಟ್ಸ್ ಸ್ಪೆಕ್ಟ್ರಾಗಳ ಮಾರಾಟಕ್ಕೆ ಅನುಮೋದನೆ ನೀಡಿತ್ತು. ಬಳಿಕ ಅದು ಟ್ರಾಯ್ ನೀಡಿದ ಎಲ್ಲ ಶಿಫಾರಸುಗಳನ್ನೂ ಸ್ವೀಕರಿಸಲು ನಿರ್ಧರಿಸಿತ್ತು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications