ತ್ರಿವಳಿ ತಲಾಖ್ : ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ
Recommended Video

ನವದೆಹಲಿ, ಆಗಸ್ಟ್ 09 : ತ್ರಿವಳಿ ತಲಾಖ್‌ಗೆ ಸಂಬಂಧಿಸಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಣಯ ತೆಗೆದುಕೊಂಡಿದೆ. ತ್ರಿವಳಿ ತಲಾಖ್ ಕಾಯ್ದೆಗೆ ಬದಲಾವಣೆ ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ತ್ರಿವಳಿ ತಲಾಖ್ ಕಾಯ್ದೆಗೆ ತಿದ್ದುಪಡಿ ತಂದು ಅದನ್ನು ಜಾಮೀನು ಸಹಿತ ಅಪರಾಧ ಎಂದು ಪರಿಗಣಿಸಲು ಒಪ್ಪಿಗೆ ನೀಡಲಾಗಿದೆ.

ತ್ರಿಬಲ್ ತಲಾಖ್ ಕಾಯ್ದೆ ಅನ್ವಯ ಇದು ಜಾಮೀನು ರಹಿತ ಅಪರಾಧವಾಗಿಯೇ ಮುಂದುವರೆಯಲಿದೆ. ಆದರೆ, ಮ್ಯಾಜಿಸ್ಟ್ರೇಟ್ ಅವರು ಜಾಮೀನು ನೀಡುವಂತೆ ತಿದ್ದುಪಡಿ ತರಲಾಗುತ್ತದೆ.
ಆಗಸ್ಟ್ 22ರಂದು ಸುಪ್ರೀಂಕೋರ್ಟ್ ತ್ರಿವಳಿ ತಲಾಖ್ ಅನ್ನು 6 ತಿಂಗಳ ಕಾಲ ನಿಷೇಧಿಸಿತ್ತು. ಈ ಸಂಬಂಧ ಕಾನೂನು ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.
ಈ ಹಿನ್ನಲೆಯಲ್ಲಿ ಕೇಂದ್ರ ಕಾನೂನು ಇಲಾಖೆ ಸಿದ್ಧಪಡಿಸಿದ ಕಾನೂನಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಕಾನೂನಿನಲ್ಲಿ ತ್ರಿವಳಿ ತಲಾಖ್ ಅಪರಾಧ ಎಂದು ಘೋಷಣೆ ಮಾಡಲಾಗಿದೆ.
ತಲಾಖ್ ನೀಡುವ ಪುರುಷರಿಗೆ 3 ವರ್ಷದ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಅಧಿಕಾರ ನೀಡಲಾಗಿದೆ. ಮಹಿಳೆಯರು ಪರಿಹಾರ ಕೇಳಲು ಅವಕಾಶ ನೀಡಲಾಗಿದೆ.












Click it and Unblock the Notifications