ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತ್ರಿವಳಿ ತಲಾಖ್‌ : ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ

By Gururaj
|
Google Oneindia Kannada News

Recommended Video

ತ್ರಿವಳಿ ತಲಾಖ್‌ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಪು | Oneindia Kannada

ನವದೆಹಲಿ, ಆಗಸ್ಟ್ 09 : ತ್ರಿವಳಿ ತಲಾಖ್‌ಗೆ ಸಂಬಂಧಿಸಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಣಯ ತೆಗೆದುಕೊಂಡಿದೆ. ತ್ರಿವಳಿ ತಲಾಖ್‌ ಕಾಯ್ದೆಗೆ ಬದಲಾವಣೆ ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ತ್ರಿವಳಿ ತಲಾಖ್‌ ಕಾಯ್ದೆಗೆ ತಿದ್ದುಪಡಿ ತಂದು ಅದನ್ನು ಜಾಮೀನು ಸಹಿತ ಅಪರಾಧ ಎಂದು ಪರಿಗಣಿಸಲು ಒಪ್ಪಿಗೆ ನೀಡಲಾಗಿದೆ.

ಏನಿದು ತ್ರಿವಳಿ ತಲಾಖ್? ಏಕೆ ಇದರ ಬಗ್ಗೆ ಚರ್ಚೆ?ಏನಿದು ತ್ರಿವಳಿ ತಲಾಖ್? ಏಕೆ ಇದರ ಬಗ್ಗೆ ಚರ್ಚೆ?

Union Cabinet approves to amendment in Triple Talaq Bill

ತ್ರಿವಳಿ ತಲಾಕ್ : ಮುಸ್ಲಿಂ ಮಹಿಳೆ ರಕ್ಷಣಾ ಮಸೂದೆಯಲ್ಲೇನಿದೆ?ತ್ರಿವಳಿ ತಲಾಕ್ : ಮುಸ್ಲಿಂ ಮಹಿಳೆ ರಕ್ಷಣಾ ಮಸೂದೆಯಲ್ಲೇನಿದೆ?

ತ್ರಿಬಲ್ ತಲಾಖ್ ಕಾಯ್ದೆ ಅನ್ವಯ ಇದು ಜಾಮೀನು ರಹಿತ ಅಪರಾಧವಾಗಿಯೇ ಮುಂದುವರೆಯಲಿದೆ. ಆದರೆ, ಮ್ಯಾಜಿಸ್ಟ್ರೇಟ್‌ ಅವರು ಜಾಮೀನು ನೀಡುವಂತೆ ತಿದ್ದುಪಡಿ ತರಲಾಗುತ್ತದೆ.

ಆಗಸ್ಟ್ 22ರಂದು ಸುಪ್ರೀಂಕೋರ್ಟ್ ತ್ರಿವಳಿ ತಲಾಖ್‌ ಅನ್ನು 6 ತಿಂಗಳ ಕಾಲ ನಿಷೇಧಿಸಿತ್ತು. ಈ ಸಂಬಂಧ ಕಾನೂನು ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಈ ಹಿನ್ನಲೆಯಲ್ಲಿ ಕೇಂದ್ರ ಕಾನೂನು ಇಲಾಖೆ ಸಿದ್ಧಪಡಿಸಿದ ಕಾನೂನಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಕಾನೂನಿನಲ್ಲಿ ತ್ರಿವಳಿ ತಲಾಖ್ ಅಪರಾಧ ಎಂದು ಘೋಷಣೆ ಮಾಡಲಾಗಿದೆ.

ತಲಾಖ್ ನೀಡುವ ಪುರುಷರಿಗೆ 3 ವರ್ಷದ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಅಧಿಕಾರ ನೀಡಲಾಗಿದೆ. ಮಹಿಳೆಯರು ಪರಿಹಾರ ಕೇಳಲು ಅವಕಾಶ ನೀಡಲಾಗಿದೆ.

English summary
Union Cabinet on August 9, 2018 approved to amendment in Triple Talaq Bill. Although the offense continues to remain non-bailable but magistrate can give bail.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X