ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

5, 8 ನೇತರಗತಿಯಲ್ಲಿ ಮಕ್ಕಳ ಫೇಲ್ ಗೆ ಒಪ್ಪಿಗೆ

|
Google Oneindia Kannada News

ಬೆಂಗಳೂರು. ಆ.3 : ಕಡ್ಡಾಯ ಶಿಕ್ಷಣ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇದರಿಂದ ಐದು ಮತ್ತು ಎಂಟನೇ ತರಗತಿಯಲ್ಲಿ ಮಕ್ಕಳನ್ನು ಅನುತ್ತೀರ್ಣ ಮಾಡಬಹುದಾಗಿದೆ.

ಪ್ರಸ್ತುತ ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಎಂಟನೇ ತರಗತಿ ತನಕ ಮಕ್ಕಳನ್ನು ಫೇಲ್ ಮಾಡಲು ಅವಕಾಶವಿರಲಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ಕಡ್ಡಾಯ ಶಿಕ್ಷಣ ಕಾಯ್ದೆಗೆ ತಿದ್ದುಪಡಿ ತರಲು ಒಪ್ಪಿಗೆ ನೀಡಲಾಗಿದೆ.

Union Cabinet says Class 5, 8 students can be failed

ಸಂಸತ್ ನಲ್ಲಿ ತಿದ್ದುಪಡಿ ಮಸೂದೆಗೆ ಒಪ್ಪಿಗೆ ಸಿಕ್ಕಿದ ಬಳಿಕ ಈ ಕಾನೂನು ಜಾರಿಗೆ ಬರಲಿದೆ. ಇದರ ಅನ್ವಯ ರಾಜ್ಯಗಳು ಐದು ಮತ್ತು ಎಂಟನೇ ತರಗತಿಯಲ್ಲಿ ಮಕ್ಕಳನ್ನು ಅನುತ್ತೀರ್ಣ ಮಾಡಬಹುದಾಗಿದೆ.

ಆದರೆ, ಅನುತ್ತೀರ್ಣಗೊಂ ಮಕ್ಕಳಿಗೆ ಮೇ ಅಥವ ಜೂನ್ ನಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಆ ಪರೀಕ್ಷೆಯಲ್ಲಿ ಪಾಸಾದರೆ ಮುಂದಿನ ತರಗತಿಗೆ ಸೇರಬಹುದಾಗಿದೆ.

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 20 ವಿಶ್ವದರ್ಜೆಯ ಶಾಲೆಗಳನ್ನು ಸ್ಥಾಪನೆ ಮಾಡಲು ಅನುಮತಿ ನೀಡಲಾಗಿದೆ. ಫೆಬ್ರವರಿಯಲ್ಲಿ ಯುಜಿಸಿ 20 ವಿಶ್ವದರ್ಜೆಯ ಶಾಲೆಗಳನ್ನು ನಿರ್ಮಾಣ ಮಾಡಲು ಹೊಸ ನೀತಿ ಪ್ರಕಟಿಸಿತ್ತು.

English summary
The Union Cabinet has approved the scrapping of the no detention policy in schools till class 8. The enabling provision will be made in the Right of Children for Free and Compulsory Education amendment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X