ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್‌ನಿಂದ ಡಿಸ್ಚಾರ್ಜ್
ನವದೆಹಲಿ, ಡಿಸೆಂಬರ್ 29: ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದರು. ವೈರಲ್ ಜ್ವರದ ಲಕ್ಷಣಗಳನ್ನು ಅವರು ಹೊಂದಿದ್ದರು.
ನಿರ್ಮಾಲಾ ಸೀತಾರಾಮನ್ ಅವರು ಗುಣಮುಖರಾಗಿದ್ದು, ಏಮ್ಸ್‌ನಿಂದ ಬಿಡುಗಡೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಸೋಮವಾರ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅವರಿಗೆ ವೈರಲ್ ಜ್ವರ ಲಕ್ಷಣಗಳಿರುವುದು ತಿಳಿಬಂದಿತ್ತು. ಮಂಗಳವಾರ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿತ್ತು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಸಂದರ್ಭದಲ್ಲಿ ಅವರಿಗೆ ನಿರ್ಮಲಾ ಸೀತಾರಾಮನ್ ಅವರು ಪುಷ್ಪನಮನ ಸಲ್ಲಿಸಿದ್ದರು. ಬಳಿಕ ನಿರ್ಮಲ ಸೀತಾರಾಮನ್ ದೆಹಲಿಯ ಸದೈವ್ ಅಟಲ್ ಅವರನ್ನು ಭೇಟಿ ಮಾಡಿದ್ದರು. ತಮಿಳುನಾಡಿನ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಭಾರತವು ಔಷಧಗಳ ಮಾತನಾಡಿದ್ದರು. ಭಾರತವನ್ನು ವಿಶ್ವದ ಫಾರ್ಮಸಿ ಎಂಬುದಾಗಿ ಕರೆಯಲಾಗುತ್ತದೆ ಎಂದು ಹಣಕಾಸು ಸಚಿವೆ ಹೇಳಿದ್ದರು.
ಫೆಬ್ರವರಿ 1, 2023 ರಂದು ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಸಾರ್ವಜನಕರ ವೆಚ್ಚವನ್ನು ತಲೆಯಲ್ಲಿ ಇರಿಸಿಕೊಂಡು ತಮ್ಮ ಮುಂದಿನ ಬಜೆಟ್ ಅನ್ನು ಮಂಡಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಹಣದುಬ್ಬರವನ್ನು ಉತ್ತಮವಾಗಿ ನಿಭಾಯಿಸುವಲ್ಲಿ ಭಾರತವು ಯಶಸ್ವಿಯಾಗಲಿದೆ. ಏಕೆಂದರೆ ಆಹಾರದ ಧಾನ್ಯಗಳ ವೆಚ್ಚವನ್ನು ನಾವು ಸರಿಯಾಗಿ ನಿಭಾಯಿಸುತ್ತಿದ್ದೇವೆ. ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರವು ಜನವರಿಯಿಂದ ಶೇಕಡಾ 6 ಕ್ಕಿಂತ ಹೆಚ್ಚಿದೆ ಎಂದು ಅವರು ತಿಳಿಸಿದ್ದಾರೆ.
ನಿರ್ಮಾಲಾ ಸೀತಾರಾಮನ್ ಅವರು ಮೋದಿ ಸರ್ಕಾರದ ಎರಡು ಬಾರಿಯ ಅವಧಿಯಲ್ಲಿ ಕೇಂದ್ರದ ಹಣಕಾಸು ಸಚಿವೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಅವರ ಮೂಲ ತಮಿಳುನಾಡು.
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications