ಕೇಂದ್ರದಿಂದ ಸಿಹಿ ಸುದ್ದಿ: 157 ಹೊಸ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಸಂಪುಟ ಸಭೆ ಅನುಮೋದನೆ
ನವದೆಹಲಿ, ಏಪ್ರಿಲ್ 26: ಕೇಂದ್ರ ಸಚಿವ ಸಂಪುಟ ವೈದ್ಯಕೀಯ ನರ್ಸಿಂಗ್ ಕೋರ್ಸ್ ಮಾಡುವವರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಮುಂದಿನ ಎರಡೇ ವರ್ಷದಲ್ಲಿ ದೇಶಾದ್ಯಂತ ಒಟ್ಟು 157 ಸರ್ಕಾರಿ ವೈದ್ಯಕೀಯ ನರ್ಸಿಂಗ್ ಕಾಲೇಜುಗಳು ಸ್ಥಾಪನೆಯಾಗಲಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಬುಧವಾರ, ಬಹುಕೋಟಿ ರೂಪಾಯಿ ವೆಚ್ಚದದ 157 ಸರ್ಕಾರಿ ವೈದ್ಯಕೀಯ ನರ್ಸಿಂಗ್ ಕಾಲೇಜುಗಳು ಸ್ಥಾಪನೆಯ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ. ಈ ಕುರಿತು ಸಂಚಿವ ಸಂಪುಟ ಸಭೆಯ ನಂತರ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಅವರೇ ಸ್ವತಃ ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದ್ದಾರೆ.

ಈ ಪ್ರಸ್ತಾವನೆಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ 157 ಸರ್ಕಾರಿ ವೈದ್ಯಕೀಯ ನರ್ಸಿಂಗ್ ಕಾಲೇಜುಗಳು ಸ್ಥಳೀಯವಾಗಿ ಅಸ್ತಿತ್ವದಲ್ಲಿರುವ ವೈದ್ಯಕೀಯ ಕಾಲೇಜುಗಳ ಸಹಕಾರದೊಂದಿಗೆ ತಲೆ ಎತ್ತಲಿವೆ. ಒಟ್ಟು 1570 ಕೋಟಿ ರೂಪಾಯಿ ಯೋಜನೆ ಇದಾಗಿದ್ದು, ಕೇವಲ ಮುಂದಿನ 24 ತಿಂಗಳಲ್ಲಿ ಈ ಯೋಜನೆ ಸಾಕಾರಗೊಳ್ಳಲಿದೆ. ಈ ಯೋಜನೆಗೆ ಸದ್ಯ ಕೇಂದ್ರ ಸಚಿವ ಸಂಪುಟ ಸಭೆಯ ಅನುಮೋದನೆ ನೀಡಿದೆ ಎಂದು ಅವರು ಮಾಹಿತಿ ನೀಡಿದರು.
ವಾರ್ಷಿಕ 15,700 ವಿದ್ಯಾರ್ಥಿಗಳಿಗೆ ಅನುಕೂಲ
ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ದೇಶದಲ್ಲಿ ಹೊಸ ಸರ್ಕಾರಿ ವೈದ್ಯಕೀಯ ನರ್ಸಿಂಗ್ ಕಾಲೇಜುಗಳು ಸ್ಥಾಪನೆಯಾಗುತ್ತವೆ. ಅದರಿಂದ ವಾರ್ಷಿಕವಾಗಿ 15,700 ವಿದ್ಯಾರ್ಥಿಗಳು ಕಲಿಯಲು ಅನುಕೂಲವಾಗಲಿದೆ. ಪ್ರತಿ ವರ್ಷ ಇಷ್ಟು ಪ್ರಮಾಣದ ವಿದ್ಯಾರ್ಥಿಗಳು ಪದವಿ ಪಡೆಯುವುದರಿಂದ ಆರೋಗ್ಯ ವಲಯಕ್ಕು ಬಲ ಬಂದಂತಾಗಲಿದೆ ಎಂದರು.
ಕೇವಲ ವಿದ್ಯಾರ್ಥಿಗಳು ತಮ್ಮಿಷ್ಟಿದ ನಸಿಂಗ್ ಕೋರ್ಸ್ ಪಡೆಯಲು ಅನುಕೂಲವಾಗಲೆಂದು ಸ್ಥಾಪಿಸುತ್ತಿಲ್ಲ. ಬದಲಾಗಿ ಹೆಚ್ಚು ಹೆಚ್ಚು ವಿದ್ಯಾರ್ಥಿಗಳಿಗೆ ಗುಣಮಟ್ಟದ ವೃತ್ತಿಪರ ಶಿಕ್ಷಣ ನೀಡುವ ಉದ್ದೇಶ ಸರ್ಕಾರದ್ದಾಗಿದೆ. ಇದಕ್ಕೆ ಸ್ಥಳೀಯ ಲಭ್ಯ ಮೂಲ ಸಂಪನ್ಮೂಲಗಳನ್ನು ಬಳಸಿಕೊಳ್ಳಲಾಗುವುದು.

ಈ 157 ಹೊಸ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿರುವ ಕೇಂದ್ರ ಸಚಿವ ಸಂಪುಟ ಸಭೆಯ ಅದರೊಂದಿಗೆ ವೈದ್ಯಕೀಯ ಸಾಧನಗಳ ವಲಯದ ನೀತಿಗೂ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಅವರು ಹೇಳಿದರು.












Click it and Unblock the Notifications