ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ತಗ್ಗಿಸಲಿದೆಯೇ ಕೇಂದ್ರ ಸರ್ಕಾರ?

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 24: ಕೇಂದ್ರ ಸರ್ಕಾರವು ನಿವೃತ್ತಿ ಅಂಚಿನಲ್ಲಿರುವ ಕೇಂದ್ರ ಸರ್ಕಾರಿ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಇಳಿಕೆ ಮಾಡುವ ಕುರಿತು ಚಿಂತನೆ ನಡೆಸಿದೆ.

ಈ ಪ್ರಸ್ತಾವನೆಯನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸರ್ಕಾರದ ವೆಚ್ಚ ಇಲಾಖೆಯ ಮುಂದಿಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸರ್ಕಾರಿ ನೌಕರರ ಪಿಂಚಣಿ ಸೇವೆಗಳ ನಿಯಮಗಳಲ್ಲಿ ಬದಲಾವಣೆಸರ್ಕಾರಿ ನೌಕರರ ಪಿಂಚಣಿ ಸೇವೆಗಳ ನಿಯಮಗಳಲ್ಲಿ ಬದಲಾವಣೆ

1998ರಲ್ಲಿ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58 ವರ್ಷಗಳಿಂದ 60 ವರ್ಷಗಳಿಗೆ ಹೆಚ್ಚಿಸಲಾಗಿತ್ತು. ಹಲವು ರಾಜ್ಯ ಸರ್ಕಾರಗಳು ನೌಕರರ ನಿವೃತ್ತಿ ವಯಸ್ಸನ್ನು 60ರಿಂದ 62 ವರ್ಷಗಳಿಗೆ ಹೆಚ್ಚಿಸಿದ್ದವು.

Union Government May Lower Retirement Age Of Government Employees

ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ 33 ವರ್ಷ ಸೇವೆ ಪೂರ್ಣಗೊಳಿಸಿದ ಅಥವಾ 60 ವರ್ಷಕ್ಕೆ ತಲುಪಿದವರ, ಯಾವುದು ಮೊದಲು ಸಾಧ್ಯವಾಗುತ್ತದೆಯೋ ಅದನ್ನು ಪರಿಗಣಿಸಿ ಸೇವೆಯಲ್ಲಿರುವವರ ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಜಾರಿಗೆ ತರುವ ಎಲ್ಲಾ ಸಾಧ್ಯತೆಗಳಿವೆ.

ಆಗುವ ಹಣಕಾಸು ಹೊರೆ, ವೆಚ್ಚ ಇತ್ಯಾದಿಗಳ ಸಾಧ್ಯಾಸಾಧ್ಯತೆಯನ್ನು ಅದು ಪರಿಶೀಲಿಸಲಿದೆ. ಪ್ರಸ್ತುತ ಕೇಂದ್ರ ಸರ್ಕಾರದ ಕೇಂದ್ರೀಯ ವಿಶ್ವವಿದ್ಯಾಲಯಗಳು ಮತ್ತು ವೈದ್ಯರುಗಳು ಹೊರತುಪಡಿಸಿ ಬಹುತೇಕ ಇಲಾಖೆಗಳ ಉದ್ಯೋಗಿಗಳಿಗೆ ನಿವೃತ್ತಿ ವಯಸ್ಸು 60 ವರ್ಷ ಆಗಿದೆ.

ಹಣಕಾಸು ವಿಧೇಯಕ ಅಂಗೀಕಾರ: ಸರ್ಕಾರಿ ನೌಕರರಿಗೆ ನಿರಾಳಹಣಕಾಸು ವಿಧೇಯಕ ಅಂಗೀಕಾರ: ಸರ್ಕಾರಿ ನೌಕರರಿಗೆ ನಿರಾಳ

ಈ ಪ್ರಸ್ತಾವನೆಯನ್ನು ಜಾರಿಗೆ ತಂದರೆ ದೇಶದ ಯುವ ಜನತೆ ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಬಹಳಷ್ಟು ನಿವಾರಣೆ ಮಾಡಬಹುದು ಎನ್ನುವ ಆಲೋಚನೆಯಲ್ಲಿ ಸರ್ಕಾರವಿದೆ.

ಸರ್ಕಾರಿ ಅಧಿಕಾರಿಗಳ ಶೈಕ್ಷಣಿಕ ಅರ್ಹತೆ ಮತ್ತು ತರಬೇತಿ ಬಗ್ಗೆ ಮಾಹಿತಿಗಳನ್ನು ಕೂಡ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಕೇಳಿದೆ.

ಅಧಿಕಾರಿಗಳ ಬಡ್ತಿಯಿಂದ ಸರ್ಕಾರದ ಖಜಾನೆಗೆ ಆಗುವ ವೆಚ್ಚದ ಹೊರೆಯನ್ನು ದೀರ್ಘಾವಧಿಯಲ್ಲಿ ಕಡಿಮೆ ಮಾಡಬಹುದು ಎನ್ನಲಾಗುತ್ತಿದೆ.

English summary
Union Government May Lower Retirement Age Of Government Employees. The idea is to retire employees who have completed 33 years of service or on reaching 60 years of age, whichever is earlier.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X