ರಾಹುಲ್ ಗಾಂಧಿ ಭದ್ರತೆಗೆ ವಿಶೇಷ ಮುತುವರ್ಜಿ ತೋರಿದ ಮೋದಿ ಸರಕಾರ
Recommended Video
ನವದೆಹಲಿ, ಅ 7: ಎಸ್ಪಿಜಿ ಭದ್ರತೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿ, ಮಾರ್ಗಸೂಚಿಯನ್ನು ಕೇಂದ್ರ ಗೃಹ ಇಲಾಖೆ ಹೊರಡಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಇತ್ತೀಚಿನ ಕಾಂಬೋಡಿಯಾ ಪ್ರವಾಸದ ನಂತರ, ಕೇಂದ್ರ ಈ ಬದಲಾವಣೆಯನ್ನು ತಂದಿದೆ.
ಸದ್ಯ, ಪ್ರಧಾನಿ ಮೋದಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಗೆ, ಎಸ್ಪಿಜಿ ಭದ್ರತೆ ವ್ಯವಸ್ಥೆಯಿದೆ.
ಎಸ್ಪಿಜಿ ಭದ್ರತೆಯಲ್ಲಿರುವ ವ್ಯಕ್ತಿಗಳು, ವಿದೇಶಕ್ಕೆ ಪ್ರಯಾಣಿಸಿದಾಗ, ಎಸ್ಪಿಜಿ ಸಿಬ್ಬಂದಿಗಳು ಎಲ್ಲ ಸಮಯದಲ್ಲೂ ಅವರೊಂದಿಗೆ ಹೋಗುವುದನ್ನು ಕೇಂದ್ರ ಸರಕಾರ ಕಡ್ಡಾಯಗೊಳಿಸಿದೆ.

ವಿದೇಶ ಪ್ರವಾಸಕ್ಕೆ ಹೋಗುವಾಗ, ಒಂದು ವೇಳೆ, ಎಸ್ಪಿಜಿ ಸಿಬ್ಬಂದಿಗಳು ತಮ್ಮ ಜೊತೆ ಬರುವುದಕ್ಕೆ ಈ ಭದ್ರತಾಡಿಯಲ್ಲಿರುವವರು, ಆಕ್ಷೇಪ ಎತ್ತಿದ್ದೇ ಆದಲ್ಲಿ, ಅವರ ವಿದೇಶಿ ಭೇಟಿಗಳನ್ನು ಕೇಂದ್ರ ಸರಕಾರ ರದ್ದುಗೊಳಿಸಬಹುದು ಎಂದು ಹೇಳಲಾಗಿದೆ.
ಇದುವರೆಗೆ, ಗಾಂಧಿ ಕುಟುಂಬದ ಸದಸ್ಯರು ವಿದೇಶಕ್ಕೆ ಹೋದಾಗ, ವಿದೇಶದಲ್ಲಿ ಲ್ಯಾಂಡ್ ಆಗುವ ಮೊದಲ ಸ್ಥಳದವರೆಗೆ ಮಾತ್ರ, ಎಸ್ಪಿಜಿ ಸಿಬ್ಬಂದಿಗಳನ್ನು ಜೊತೆಗೆ ಕರೆದುಕೊಂಡು ಹೋಗಿ, ನಂತರ ವಾಪಸ್ ಕಳುಹಿಸುತ್ತಿದ್ದರು. ಆದರೆ, ಇದು ಅಪಾಯಕ್ಕೆ ಕಾರಣವಾಗಬಹುದು ಎನ್ನುವುದಕ್ಕಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications