ಭಾರತದಲ್ಲಿ 8 ಹೊಸ ನಗರಗಳ ನಿರ್ಮಾಣಕ್ಕೆ ಮುಂದಾದ ಕೇಂದ್ರ ಸರ್ಕಾರ; ಕಾರಣವೇನು?
ಭಾರತದ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇದೆ. ಮುಂಬೈ, ದೆಹಲಿ, ಬೆಂಗಳೂರು, ಹೈದರಾಬಾದ್, ಚೆನ್ನೈನಂತಹ ನಗರಗಳಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದ್ದು, ಇದನ್ನು ನಿಭಾಯಿಸಲು ನಗರಗಳು ಹೆಣಗಾಡುತ್ತಿವೆ.
ಇಂತಹ ಸಂದರ್ಭದಲ್ಲಿ ದೇಶದಲ್ಲಿ ಸದ್ಯ ಅಸ್ತಿತ್ವದಲ್ಲಿರುವ ಪ್ರಮುಖ ನಗರಗಳ ಮೇಲಿನ ಜನಸಂಖ್ಯೆ ಹೊರೆಯನ್ನು ಕೆಳಗಿಳಿಸಲು ಕೇಂದ್ರ ಸರ್ಕಾರವು 8 ಹೊಸ ನಗರಗಳನ್ನು ನಿರ್ಮಾಣ ಮಾಡಲು ಚಿಂತನೆ ನಡೆಸಿದೆ. ಈ ಬಗ್ಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಗುರುವಾರ, ಮೇ 18ರಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ಅರ್ಬನ್ 20 ಸಭೆಯಲ್ಲಿ ಇಲಾಖೆಯ ಜಿ20 ಘಟಕದ ನಿರ್ದೇಶಕ ಎಂ.ಬಿ. ಸಿಂಗ್ ಅವರು ಪಿಟಿಐಗೆ ತಿಳಿಸಿದ್ದಾರೆ.
15ನೇ ಹಣಕಾಸು ಆಯೋಗದ ವರದಿಯು ದೇಶದಲ್ಲಿ ಹೊಸ ನಗರಗಳ ಅಭಿವೃದ್ಧಿಗೆ ಶಿಫಾರಸು ಮಾಡಿದೆ. ಆ ಬಳಿಕ ರಾಜ್ಯಗಳೂ ಸಹ 26 ಹೊಸ ನಗರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿವೆ. ಈ ಪೈಕಿ 8 ನಗರಗಳನ್ನು ವಿಂಗಡಿಸಿದ ನಂತರ ಪರಿಗಣಿಸಲಾಗುವುದು ಎಂದು ಎಂ.ಬಿ. ಸಿಂಗ್ ಹೇಳಿದ್ದಾರೆ.
ಈ ಯೋಜನೆಯನ್ನು ಪರಿಶೀಲಿಸಿದ ನಂತರ, ಹೊಸ ನಗರಗಳ ಸ್ಥಳಗಳು ಹಾಗು ಅವುಗಳ ಅಭಿವೃದ್ಧಿಯ ಸಮಯದ ಗುರಿಯ ಬಗ್ಗೆ ಕೇಂದ್ರ ಸರ್ಕಾರ ಔಪಚಾರಿಕ ಘೋಷಣೆ ಮಾಡಲಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಅಧಿಕಾರಿ ಎಂ.ಬಿ. ಸಿಂಗ್ ಮಾಹಿತಿ ನೀಡಿದ್ದಾರೆ.

ಸದ್ಯ ದೇಶದಲ್ಲಿ ನಾವು ಹೊಸ ನಗರಗಳನ್ನು ಸ್ಥಾಪಿಸಲೇಬೇಕಾಗಿದೆ. ಏಕೆಂದರೆ, ಈಗಿರುವ ನಗರಗಳು ಜನಸಂಖ್ಯೆ ಹಾಗೂ ಜನರ ಅಗತ್ಯಗಳ ಹೊರೆಯನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಕೆಲವು ನಗರಗಳ ಮೇಲೆಯೇ ಹೆಚ್ಚು ಅವಲಂಬಿತವಾಗಿರುವುದು ಭವಿಷ್ಯದಲ್ಲಿ ತೊಂದರೆಯಗಲಿದೆ ಎಂದು ಹೇಳಿದ್ದಾರೆ.
"ಭಾರತದ ಕೆಲವು ನಗರಗಳು ಅಧಿಕ ಜನಸಂಖ್ಯೆಯನ್ನು ನಿಭಾಯಿಸುತ್ತಿವೆ ಮತ್ತು ಇದೇ ವೇಳೆ ಅವ್ಯವಸ್ಥಿತವಾಗಿ ವಿಸ್ತರಣೆಯಾಗುತ್ತಿವೆ. ಇದೆ ರೀತಿ ಮುಂದುವರೆದರೆ, ಜನರ ಅಗತ್ಯತೆಗಳನ್ನು ಪೂರೈಸಲು ಸಾಧ್ಯವಾಗುವುದಿಲ್ಲ ಎಂಬುದು ಗಮನಾರ್ಹವಾಗಿದೆ. ಹೀಗಾಗಿ ಹೊಸ ನಗರಗಳ ನಿರ್ಮಾಣ ಅನಿವಾರ್ಯವಾಗಿದೆ".
ಹೊಸ ನಗರಗಳ ನಿರ್ಮಾಣಕ್ಕೆ ಆರ್ಥಿಕ ಮಾರ್ಗಸೂಚಿಯನನ್ನು ಅಂತಿಮಗೊಳಿಸಿಲ್ಲ. ಕೇಂದ್ರ ಸರ್ಕಾರವು ಈ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಹೊಸ ನಗರಗಲು ನಿರ್ಮಾಣವಾದರೆ ಕನಿಷ್ಠ 200 ಕಿಮೀ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳು ಹೆಚ್ಚಾಗಲಿವೆ ಎಂದು ಎಂ.ಬಿ. ಸಿಂಗ್ ತಿಳಿಸಿದರು.
2050ರ ವೇಳೆಗೆ ವಿಶ್ವದ ಜನಸಂಖ್ಯೆಯು 9.7 ಶತಕೋಟಿಗೆ ತಲುಪಲಿದೆ. ಭಾರತವು ವಿಶ್ವದಲ್ಲಿಯೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎಂದು ವಿಶ್ವಸಂಸ್ಥೆಯ ಇತ್ತೀಚಿನ ವರದಿಗಳು ಹೇಳಿವೆ.
ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿ ಭಾರತ ಮೊದಲ ಸ್ಥಾನಕ್ಕೇರಿದೆ. ಕಳೆದ ತಿಂಗಳು ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ದತ್ತಾಂಶ ಈ ಮಾಹಿತಿ ನೀಡಿದ್ದು, ವಿಶ್ವಸಂಸ್ಥೆಯ ಅಂದಾಜಿನ ಪ್ರಕಾರ ಚೀನಾ ದೇಶದ ಜನಸಂಖ್ಯೆ 142.57 ಕೋಟಿ ಇದ್ದರೆ, ಭಾರತದ ಜನಸಂಖ್ಯೆ 142.86 ಕೋಟಿ ದಾಟಿದೆ.
ಮುಂದಿನ ಮೂರು ದಶಕಗಳ ಕಾಲ ಭಾರತದ ಜನಸಂಖ್ಯೆ ಏರಿಕೆಯಾಗುತ್ತಲೇ ಇರಲಿದೆ ಎಂದು ವಿವಿಧ ಸಂಸ್ಥೆಗಳು ಅಭಿಪ್ರಾಯ ವ್ಯಕ್ತಪಡಿಸಿವೆ. ಭಾರತದ ಜನಸಂಖ್ಯೆಯು ಮೂರು ದಶಕಗಳಲ್ಲಿ 165 ಕೋಟಿಯ ಗರಿಷ್ಠ ಮಟ್ಟಕ್ಕೆ ತಲುಪಲಿದ್ದು, ಬಳಿಕ ಕುಸಿತ ಕಾಣಲಿದೆ ಎಂದು ಅಂದಾಜಿಸಲಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications