ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವ ಆರೋಗ್ಯ ಸಂಸ್ಥೆ (WHO)ಯ ಉನ್ನತ ಹುದ್ದೆ ಅಲಂಕರಿಸಿದ ಡಾ.ಹರ್ಷವರ್ಧನ್!

|
Google Oneindia Kannada News

ನವದೆಹಲಿ, ಮೇ 22: ಭಾರತದ ಕೋವಿಡ್-19 ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಇಂದು ವಿಶ್ವ ಆರೋಗ್ಯ ಸಂಸ್ಥೆ (WHO) ಯ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ.

Recommended Video

ತರಕಾರಿಯಿಂದಲು ಹಬ್ಬುತ್ತಿದೆ ಕೊರೋನಾ ಮಹಾಮಾರಿ!! ಎಚ್ಚರ!! | Oneindia Kannada

ವಿಶ್ವ ಆರೋಗ್ಯ ಸಂಸ್ಥೆ (WHO)ಯ ಕಾರ್ಯನಿರ್ವಾಹಕ ಮಂಡಳಿ (Executive Board) ಯ ಅಧ್ಯಕ್ಷರಾಗಿ ಇವತ್ತು ಡಾ.ಹರ್ಷವರ್ಧನ್ ಅಧಿಕಾರ ಸ್ವೀಕರಿಸಿದ್ದಾರೆ.

ಜಪಾನಿನ ಡಾ.ಹಿರೋಕಿ ನಕಟಾನಿ ಯವರ ನಂತರ 34 ಸದಸ್ಯರನ್ನೊಳಗೊಂಡ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷ ಸ್ಥಾನ ಡಾ.ಹರ್ಷವರ್ಧನ್ ರವರ ಪಾಲಾಗಿದೆ. ಆ ಮೂಲಕ ಜಾಗತಿಕ ಮಟ್ಟದಲ್ಲಿ ಸಾರ್ವಜನಿಕ ಆರೋಗ್ಯದ ಕುರಿತಾದ ಮಹತ್ವದ ಜವಾಬ್ದಾರಿ ಭಾರತದ ಹೆಗಲೇರಿದಂತಾಗಿದೆ.

ಡಾ.ಹರ್ಷವರ್ಧನ್ ಗೆ ಒಲಿದು ಬಂತು ವಿಶ್ವ ಆರೋಗ್ಯ ಸಂಸ್ಥೆಯ ಪ್ರಮುಖ ಹುದ್ದೆ.! ಡಾ.ಹರ್ಷವರ್ಧನ್ ಗೆ ಒಲಿದು ಬಂತು ವಿಶ್ವ ಆರೋಗ್ಯ ಸಂಸ್ಥೆಯ ಪ್ರಮುಖ ಹುದ್ದೆ.!

ಅಧಿಕಾರ ಸ್ವೀಕರಿಸಿದ ಡಾ.ಹರ್ಷವರ್ಧನ್

ಅಧಿಕಾರ ಸ್ವೀಕರಿಸಿದ ಡಾ.ಹರ್ಷವರ್ಧನ್

ನೋವೆಲ್ ಕೊರೊನಾ ವೈರಸ್ ಔಟ್ ಬ್ರೇಕ್ ಆದ್ಮೇಲೆ, ಅಂತಾರಾಷ್ಟ್ರೀಯ ಮಟ್ಟದ ಸಾರ್ವಜನಿಕ ಆರೋಗ್ಯದ ಜವಾಬ್ದಾರಿಯನ್ನು ಹೊಂದಿರುವ ವಿಶ್ವ ಆರೋಗ್ಯ ಸಂಸ್ಥೆ (WHO) ಕೋವಿಡ್-19 ರೋಗವನ್ನು ನಿಗ್ರಹಿಸುವಲ್ಲಿ ಸಕಲ ಪ್ರಯತ್ನ ಪಡುತ್ತಿದೆ.


ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಭಾರತವು ಅಗ್ನೇಯ ಏಷ್ಯಾ ಪ್ರದೇಶದ ಸದಸ್ಯ ರಾಷ್ಟ್ರವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿಗೆ ಭಾರತವನ್ನು ಆಯ್ಕೆ ಮಾಡಲು ಕಳೆದ ವರ್ಷವೇ ಸೌತ್-ಈಸ್ಟ್ ಏಷ್ಯಾ ಗ್ರೂಪ್ ಸರ್ವಾನುಮತದಿಂದ ತೀರ್ಮಾನಿಸಿತ್ತು. ಅದರಂತೆ ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಭಾರತ ನಾಮನಿರ್ದೇಶಿತಗೊಂಡಿದ್ದು, ಇವತ್ತು ಭಾರತದ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅಧಿಕಾರ ಸ್ವೀಕರಿಸಿದ್ದಾರೆ.

ಡಾ.ಹರ್ಷವರ್ದನ್ ಪ್ರತಿಕ್ರಿಯೆ

ಡಾ.ಹರ್ಷವರ್ದನ್ ಪ್ರತಿಕ್ರಿಯೆ

''ಕೋವಿಡ್-19 ಪ್ಯಾಂಡೆಮಿಕ್ ನಂತಹ ಜಾಗತಿಕ ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ನಾನು ಈ ಅಧಿಕಾರವನ್ನು ಸ್ವೀಕರಿಸುತ್ತಿದ್ದೇನೆ. ಮುಂದಿನ 2 ದಶಕಗಳಲ್ಲಿ ಅನೇಕ ಆರೋಗ್ಯ ಸವಾಲುಗಳು ಎದುರಾಗಲಿವೆ ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ'' ಎಂದು ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಬಳಿಕ ಡಾ.ಹರ್ಷವರ್ಧನ್ ಪ್ರತಿಕ್ರಿಯಿಸಿದ್ದಾರೆ.

ಓಹೋ.. ಕೊರೊನಾ ಕುರಿತ ಮಹತ್ವದ ಮಾಹಿತಿ ಮುಚ್ಚಿಡಲು WHOಗೆ ಕರೆ ಮಾಡಿದ್ರಾ ಚೀನಾ ಅಧ್ಯಕ್ಷ?ಓಹೋ.. ಕೊರೊನಾ ಕುರಿತ ಮಹತ್ವದ ಮಾಹಿತಿ ಮುಚ್ಚಿಡಲು WHOಗೆ ಕರೆ ಮಾಡಿದ್ರಾ ಚೀನಾ ಅಧ್ಯಕ್ಷ?

ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿ

ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿ

ವಿಶ್ವ ಆರೋಗ್ಯ ಸಂಸ್ಥೆಯನ್ನು ವಿಶ್ವ ಆರೋಗ್ಯ ಸಭೆ ಮತ್ತು ಕಾರ್ಯನಿರ್ವಾಹಕ ಮಂಡಳಿ ನಿಯಂತ್ರಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ಕಚೇರಿ ಸ್ವಿಟ್ಜರ್ಲ್ಯಾಂಡ್ ನ ಜೆನೆವಾದಲ್ಲಿದೆ.

ವಿಶ್ವ ಆರೋಗ್ಯ ಸಭೆ 194 ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿರುತ್ತದೆ.

ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿಯು ಆರೋಗ್ಯ ಕ್ಷೇತ್ರದಲ್ಲಿ ತಾಂತ್ರಿಕವಾಗಿ ಅರ್ಹತೆ ಪಡೆದ 34 ಪ್ರಮುಖರನ್ನು ಹೊಂದಿದೆ. ಪ್ರತಿಯೊಬ್ಬರೂ ವಿಶ್ವ ಆರೋಗ್ಯ ಅಸೆಂಬ್ಲಿಯಿಂದ ಆಯ್ಕೆಯಾದ ಸದಸ್ಯ ರಾಷ್ಟ್ರದಿಂದ ನೇಮಕಗೊಂಡಿದ್ದಾರೆ. ಸದಸ್ಯ ರಾಷ್ಟ್ರಗಳನ್ನು ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗುತ್ತದೆ.

ವರ್ಷಕ್ಕೆ ಎರಡು ಬಾರಿ ಕಾರ್ಯನಿರ್ವಾಹಕ ಮಂಡಳಿ ಸಭೆ ಸೇರಲಿದೆ. ಹೆಲ್ತ್ ಅಸೆಂಬ್ಲಿಯ ಪಾಲಿಸಿಗಳಿಗೆ ಸಲಹೆಗಳನ್ನು ನೀಡುವುದು ಕಾರ್ಯನಿರ್ವಾಹಕ ಮಂಡಳಿಯ ಪ್ರಮುಖ ಕಾರ್ಯ.

ಅಧ್ಯಕ್ಷ ಹುದ್ದೆ ಆಯ್ಕೆ ಹೇಗೆ.?

ಅಧ್ಯಕ್ಷ ಹುದ್ದೆ ಆಯ್ಕೆ ಹೇಗೆ.?

ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷ ಹುದ್ದೆಯಲ್ಲಿ ಆಫ್ರಿಕನ್ ಪ್ರದೇಶ, ಅಮೇರಿಕಾದ ಪ್ರದೇಶ, ಆಗ್ನೇಯ ಏಷ್ಯಾ ಪ್ರದೇಶ, ಯೂರೋಪಿಯನ್ ಪ್ರದೇಶ, ಪೂರ್ವ ಮೆಡಿಟರೇನಿಯನ್ ಪ್ರದೇಶ ಮತ್ತು ಪಶ್ಚಿಮ ಪೆಸಿಫಿಕ್ ಪ್ರದೇಶಗಳಂತಹ ಆರು ಪ್ರಾದೇಶಿಕ ಗುಂಪುಗಳು ತಲಾ ಒಂದು ವರ್ಷ ರೊಟೇಷನ್ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತದೆ.

ಮೊದಲ ಸಭೆ

ಮೊದಲ ಸಭೆ

ಜನವರಿ 12, 1948 ರಂದು ಭಾರತವು ವಿಶ್ವ ಆರೋಗ್ಯ ಸಂಸ್ಥೆಯ ಭಾಗವಾಯಿತು. ಆಗ್ನೇಯ ಏಪ್ಯಾ ಪ್ರಾದೇಶಿಕ ಸಮಿತಿಯ ಮೊದಲ ಅಧಿವೇಶನವನ್ನು ಅಕ್ಟೋಬರ್ 4-5, 1948 ರಂದು ಭಾರತದ ಆರೋಗ್ಯ ಸಚಿವರ ಕಛೇರಿಯಲ್ಲಿ ನಡೆಸಲಾಯಿತು. ಅಧಿವೇಶನವನ್ನು ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಉದ್ಘಾಟಿಸಿದ್ದರು.

English summary
Union Health Minister Dr Harsh Vardhan takes charge as the Chairman Of WHO Executive Board.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X