ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಸ್ಕ್ ಧರಿಸುವುದು: ಕೇಂದ್ರ ಆರೋಗ್ಯ ಇಲಾಖೆಯಿಂದ ಸ್ಪಷ್ಟನೆ

|
Google Oneindia Kannada News

ನವದೆಹಲಿ, ಸೆ 3: ಕೊರೊನಾ ಹಾವಳಿಯ ಹಿನ್ನಲೆಯಲ್ಲಿ ಮಾಸ್ಕ್ ಧರಿಸುವ ವಿಚಾರದಲ್ಲಿ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆಯನ್ನು ನೀಡಿದೆ.

Recommended Video

Bollywood ಹಾಗು ನಮ್ಮ ಇಂಡಸ್ಟ್ರಿಗೂ Drugs link ತಿಳಿಸಿದ Prashanth Sambargi | Oneindia Kannada

ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು, ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿರುವಂತಹ ಸಂದರ್ಭದಲ್ಲಿ ಮಾಸ್ಕ್ ಧರಿಸುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಸ್ಕ್ ಧರಿಸುವ ನಿಯಮದಲ್ಲಿ ಬದಲಾವಣೆಬೆಂಗಳೂರಲ್ಲಿ ಮಾಸ್ಕ್ ಧರಿಸುವ ನಿಯಮದಲ್ಲಿ ಬದಲಾವಣೆ

"ಸೈಕ್ಲಿಂಗ್ ಅಥವಾ ಒಬ್ಬರೇ ಡ್ರೈವಿಂಗ್ ಮಾಡುತ್ತಿರುವಂತಹ ಸಂದರ್ಭದಲ್ಲಿ ಮಾಸ್ಕ್ ಧರಿಸಬೇಕು ಎನ್ನುವ ಗೈಡ್ಲೈನ್ಸ್ ಅನ್ನು ಕೇಂದ್ರ ಆರೋಗ್ಯ ಇಲಾಖೆ ಹೊರಡಿಸಿಲ್ಲ" ಎಂದು ರಾಜೇಶ್ ಭೂಷಣ್ ಹೇಳಿದ್ದಾರೆ.

Union Health Ministry Confirmed That Someone Driving, Cycling Alone, Mask Not Required

"ಆದರೆ, ಗುಂಪಿನಲ್ಲಿ ಸೈಕ್ಲಿಂಗ್ ಅಥವ ಜಾಗ್ಗಿಂಗ್ ಮಾಡುವಾಗ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ"ಎಂದು ಆರೋಗ್ಯ ಇಲಾಖೆ ಸ್ಪಷ್ಟನೆಯನ್ನು ನೀಡಿದೆ.

ಮಾಧ್ಯಮ ಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ರಾಜೇಶ್ ಭೂಷಣ್, "ದೇಶದಲ್ಲಿ ಸಕ್ರಿಯ ಪ್ರಕರಣಕ್ಕಿಂತ ಬಿಡುಗಡೆಯಾದವರ ಸಂಖ್ಯೆ ಮೂರುವರೆ ಪಟ್ಟು ಹೆಚ್ಚು"ಎಂದು ಹೇಳಿದ್ದಾರೆ.

"ಪ್ರತೀ ಮಿಲಿಯನ್ ಜನಸಂಖ್ಯೆಯಲ್ಲಿ 2,792 ಕೊರೊನಾ ಕೇಸ್ ಗಳು ಭಾರತದಲ್ಲಿದೆ, ಇದು ವಿಶ್ವದಲ್ಲೇ ಅತ್ಯಂತ ಕಮ್ಮಿ ಪ್ರಮಾಣವಾಗಿದೆ"ಎಂದು ರಾಜೇಶ್ ಭೂಷಣ್ ಹೇಳಿದ್ದಾರೆ.

English summary
Union Health Ministry Confirmed That Someone Driving, Cycling Alone, Mask Not Required.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X