ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್‌ನಿಂದ ಚೇತರಿಸಿಕೊಂಡಿದ್ದ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು

|
Google Oneindia Kannada News

ನವದೆಹಲಿ, ಆಗಸ್ಟ್ 18: ಇತ್ತೀಚೆಗಷ್ಟೇ ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಉಸಿರಾಟದ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿದೆ. ಅವರನ್ನು ಎದೆಗೆ ಸಂಬಂಧಿಸಿದ ಸೋಂಕಿನ ಚಿಕಿತ್ಸೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.

Recommended Video

IPL 2020 : ಯಾರ ಕೈ ಸೇರುತ್ತೆ IPL ಟೈಟಲ್ ಪ್ರಾಯೋಜಕತ್ವ | Oneindia Kannada

ಕೊರೊನಾ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಕಳೆದ 3-4 ದಿನಗಳಿಂದ ಅಮಿತ್ ಶಾ ತೀವ್ರ ಆಯಾಸ ಮತ್ತು ಮೈ ನೋವಿನಿಂದ ಬಳಲುತ್ತಿದ್ದಾರೆ. ಅವರನ್ನು ಪುನಃ ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೊನಾ ವರದಿ ನೆಗೆಟಿವ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೊನಾ ವರದಿ ನೆಗೆಟಿವ್

ಕೊವಿಡ್ ನಂತರದ ಆರೈಕೆಗಾಗಿ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿದೆ. ಇಲ್ಲಿ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಏಮ್ಸ್ ತಿಳಿಸಿದೆ.

Union Home Minister Amit Shah Admitted To AIIMS For Chest Infection Treatment

ಅಮಿತ್ ಶಾ ಅವರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿರುವುದು ಆಗಸ್ಟ್ 2ರಂದು ದೃಢಪಟ್ಟಿತ್ತು. ವೈದ್ಯರ ಸಲಹೆ ಮೇರೆಗೆ ಅವರನ್ನು ಗುರುಗಾಂವ್‌ನ ಮೇದಾಂತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಮಗೆ ಕೊರೊನಾ ವೈರಸ್ ಸೋಂಕು ಬಂದಿರುವ ಬಗ್ಗೆ ಅಮಿತ್ ಶಾ, ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸಿದ್ದರು.

ಸುಮಾರು 12 ದಿನ ಚಿಕಿತ್ಸೆ ಪಡೆದಿದ್ದ ಅಮಿತ್ ಶಾ ಅವರ ಆಗಸ್ಟ್ 14ರ ವರದಿಯಲ್ಲಿ ಕೊರೊನಾ ವೈರಸ್ ನೆಗೆಟಿವ್ ಬಂದಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅವರು ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಮತ್ತೆ ಬೇರೆ ಆರೋಗ್ಯ ಸಮಸ್ಯೆ ಕಂಡುಬಂದಿದೆ.

English summary
Union Home Minister Amit Shah admitted to AIIMS for chest infection treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X