• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಕ್ಸಲ್ ದಾಳಿ ನಡೆದ ಸ್ಥಳಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ

|

ಸುಕ್ಮಾ, ಏಪ್ರಿಲ್ 5: ನಕ್ಸಲ್ ದಾಳಿ ನಡೆದ ಛತ್ತೀಸ್‌ಗಢದ ಸುಕ್ಮಾ- ಬಿಜಾಪುರಾ ಗಡಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಭೇಟಿ ನೀಡಲಿದ್ದಾರೆ.

ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿ ನಕ್ಸಲರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 22 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು.

ಛತ್ತೀಸ್ ಗಢ: ನಕ್ಸಲ್ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಸಾವು

ಇಂದು ಗೃಹ ಸಚಿವ ಅಮಿತ್ ಶಾ ಅವರು ಸುಕ್ಮಾ- ಬಿಜಾಪುರಾ ಗಡಿಗೆ ತೆರಳಲಿದ್ದು, ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಿದ್ದಾರೆ. ಬಳಿಕ ಅವರು ಗಾಯಗೊಂಡ ಯೋಧರ ಆರೋಗ್ಯವನ್ನು ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ತಿಳಿಸಿದೆ.

ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ ನಕ್ಸಲರು, ಭದ್ರತಾ ಪಡೆಯ 24ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ಸಿ.ಆರ್.ಪಿ.ಎಫ್ ಮೂಲಗಳು ತಿಳಿಸಿದ್ದವು.

ಶನಿವಾರ ಸಿ.ಆರ್.ಪಿ.ಎಫ್ ಹಾಗೂ ಜಿಲ್ಲಾ ಮೀಸಲು ಸಶಸ್ತ್ರ ಪಡೆ ಜಂಟಿ ಕಾರ್ಯಚರಣೆಯಲ್ಲಿ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, 22 ಸೈನಿಕರು ಹುತಾತ್ಮರಾಗಿದ್ದಾರೆ. ಸುಮಾರು 30 ಯೋಧರು ಗಾಯಗೊಂಡಿದ್ದು, 18 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

English summary
Union Home Minister Amit Shah will visit Chhattisgarh's Sukma-Bijapura border in Chhattisgarh today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X